ಹಳಕರ್ಟಿ ಗ್ರಾಪಂ ಕಡತ ಕಳವು: ಠಾಣೆಗೆ ದೂರು
Team Udayavani, Mar 11, 2022, 2:55 PM IST
ವಾಡಿ: ಸಮೀಪದ ಹಳಕರ್ಟಿ ಗ್ರಾಪಂ ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ನೂರಾರು ದಾಖಲೆಗಳನ್ನು ಪಂಚಾಯಿತಿ ಬಿಲ್ ಕಲೆಕ್ಟರ್ ಸಂಬಂಧಿಯೇ ಹಾಡಹಗಲೇ ಕದ್ದೊಯ್ದ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳಿಂದ ಕಳ್ಳರ ಕೃತ್ಯ ಬಯಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿರುವ ಹಳಕರ್ಟಿ ಗ್ರಾಪಂ ಅಧ್ಯಕ್ಷ ಸೋಮು ಚವ್ಹಾಣ ಹಾಗೂ ಪಿಡಿಒ ರಾಚಯ್ಯಸ್ವಾಮಿ ಕಚೇರಿಯ ಅಲಮಾರಿಯಲ್ಲಿ ಸುರಕ್ಷಿತವಾಗಿ ಇಟ್ಟಿದ್ದ ಬಹುತೇಕ ಕಡತಗಳು ನಾಪತ್ತೆಯಾಗಿದ್ದವು. ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಲೆಕ್ಕಪತ್ರದ ದಾಖಲೆಗಳು ಕಾಣೆಯಾಗಿದ್ದಕ್ಕೆ ಸಿಸಿ ಕ್ಯಾಮೆರಾ ಪರಿಶೀಲಿಸಲಾಯಿತು. ಬಿಲ್ ಕಲೆಕ್ಟರ್ ಮಹೆಬೂಬ್ ಲಾಲಹ್ಮದ್ ಎನ್ನುವರ ಸಹೋದರ ಶಹಾರುಕ್ ಲಾಲಅಹ್ಮದ್ ಎಂಬಾತ ಕಡತಗಳನ್ನು ಚೀಲದಲ್ಲಿ ತುಂಬಿ ಹೊತ್ತೂಯ್ದದ ಕುರಿತು ಸುಳಿವು ದೊರಕಿದೆ.
ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿ ಗಮನಕ್ಕಿಲ್ಲದೇ ಕಡತಗಳನ್ನು ಕಳವು ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಯಾವ ಹಗರಣದ ಸಾಕ್ಷಿಗಳನ್ನು ನಾಶಪಡಿಸಲು ಬಿಲ್ ಕಲೆಕ್ಟರ್ ಕಡತ ಕಳ್ಳತನಕ್ಕೆ ಮುಂದಾದರೋ ಗೊತ್ತಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.
ಕದ್ದುಮುಚ್ಚಿ ಕಡತಗಳನ್ನು ಚೀಲದಲ್ಲಿ ತುಂಬಿ ಹೊತ್ತೂಯ್ದ ಕಳ್ಳ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದಾಖಲೆಗಳನ್ನು ಸಾಕ್ಷಿಯಾಗಿಟ್ಟುಕೊಂಡು ತನಿಖೆ ನಡೆಸಬೇಕು. ಕಡತಗಳನ್ನು ವಶಕ್ಕೆ ಪಡೆದು ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.