ಏಪ್ರಿಲ್ ಕೊನೆಯವಾರದವರೆಗೆ ನೀರು ಕೊಡಿ: ಅರವಿಂದ ಕುಲಕರ್ಣಿ
Team Udayavani, Mar 11, 2022, 3:22 PM IST
ಆಲಮಟ್ಟಿ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಮಳೆಯು ಸಕಾಲಕ್ಕೆ ಸಮರ್ಪಕವಾಗಿ ಮಳೆಯಾಗದಿರುದರಿಂದ ಕಾಲುವೆ ನೀರನ್ನು ನಂಬಿ ಬಿತ್ತನೆ ಮಾಡಿದ ರೈತರ ಬೆಳೆಗಳಿಗೆ ಏಪ್ರಿಲ್ ಕೊನೆಯ ವಾರದವರೆಗೆ ನೀರು ಕೊಡದಿದ್ದರೆ ಬೆಳೆಹಾನಿಯಾಗಲಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.
ಶುಕ್ರವಾರ ಇಲ್ಲಿನ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರಿಗೆ ಮನವಿ ಅರ್ಪಿಸಿ ಮಾತನಾಡಿದರು.
ಆಲಮಟ್ಟಿ ಲಾಲಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಹಿಂಗಾರು ಮಳೆಗಳು ಸಕಾಲಕ್ಕೆ ಸಮರ್ಪಕವಾಗಿ ಆಗದಿರುವದರಿಂದ ರೈತರು ಶಾಸ್ತ್ರಿ ಜಲಾಶಯದ ನೀರನ್ನು ನಂಬಿ ಬಿತ್ತನೆ ಮಾಡಿದ್ದಾರೆ. ಕಾಲುವೆ ನೀರನ್ನು ನಂಬಿ ಬಿತ್ತನೆ ಮಾಡಿದ ಬೆಳೆಗಳು ರೈತರ ಕೈಗೆ ಬರಬೇಕಾದರೆ ಎಪ್ರಿಲ್ ಕೊನೆಯವರೆಗೆ ಕಾಲುವೆಗಳ ಮುಖಾಂತರ ರೈತರ ಜಮೀನಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಸಂಘದವತಿಯಿಂದ ಆಮರಣ ಉಪವಾಸ ಸತ್ಯಾಗ್ರಹವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೆಂಗಳೂರಿನಲ್ಲಿ ಜಲಸಂಪನ್ಮೂಲ ಇಲಾಖೆಯ ಆಪರ ಕಾರ್ಯದರ್ಶಿ ರಾಕೇಶಸಿಂಗ್ ನೇತೃತ್ವದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯ ವೇಳೆ ಜಲಾಶಯಗಳಲ್ಲಿರುವ ನೀರಿನ ಲಭ್ಯತೆಯ ಆಧಾರದಲ್ಲಿ 2022 ಮಾರ್ಚ್ 17ವರೆಗೆ ಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು ಸಭೆಯ ನಂತರದ ದಿನಗಳಲ್ಲಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದು ಕಳೆದ ವರ್ಷಕ್ಕಿಂತಲೂ ಈ ವರ್ಷ 19ಟಿಎಮ್ ಸಿ ನೀರು ಸಂಗ್ರಹವಿದೆ ಎಂದರು.
ಸಂಗ್ರಹವಿರುವ ನೀರಿನಲ್ಲಿ ಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರು ಹರಿಸಬೇಕು ಬೇಸಿಗೆಯಲ್ಲಿ ಜನ-ಜಾನುವಾರು ಹಾಗೂ ವನ್ಯಜೀವಿಗಳ ರಕ್ಷಣೆಗೆ ಕಾಲುವೆಗಳ ಮೂಲಕ ಎಲ್ಲ ಕೆರೆಗಳನ್ನು ತುಂಬಿಸಬೇಕು ಮಾರ್ಚ್ 17ರ ನಂತರ ನೀರು ಬಂದ್ ಮಾಡಬಾರದು ಎಂದು ಹೇಳಿದರು.
ಐಸಿಸಿ ಸಭೆಯಲ್ಲಿ ತೀರ್ಮಾನಿಸಿದಂತೆ ಮಾ. 17ಕ್ಕೆ ನೀರು ಹರಿಸುವದನ್ನು ಬಂದ್ ಮಾಡುವದನ್ನು ಕೈಬಿಟ್ಟು ನೀರು ಹರಿಸುವ ತೀರ್ಮಾನವನ್ನು 3 ದಿನಗಳ ಒಳಗಾಗಿ ತಿಳಿಸದೇ ಇದ್ದರೆ ಸಂಘದವತಿಯಿಂದ ಆಮರಣ ಉಪವಾಸ ಮಾಡಲಾಗುವದು ಎಂದು ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ ಎಚ್ಚರಿಸಿದರು.
ಇದನ್ನೂ ಓದಿ:ರೈತ ಸಮಾವೇಶದಲ್ಲಿ ಚುನಾವಣೆ ರಾಜಕೀಯ ನಿರ್ಧಾರ
ಮುಖ್ಯ ಅಭಿಯಂತರ ಪರವಾಗಿ ಮನವಿ ಸ್ವೀಕರಿಸಿದ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರ ಡಿಬಸವರಾಜ ಅವರು ತಮ್ಮ ಮನವಿಯನ್ನು ಮುಖ್ಯ ಅಭಿಯಂತರರಿಗೆ ತಲುಪಿಸಲಾಗುವುದು. ರೈತರ ಬೇಡಿಕೆ ಹಾಗೂ ನೀರಿನ ಲಭ್ಯತೆಯ ಬಗ್ಗೆ ಮಾ10ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ವಲಯಗಳ ಮುಖ್ಯ ಅಭಿಯಂತರರ ಸಭೆಯನ್ನು ಐಸಿಸಿ ಸಮಿತಿಯ ಕಾರ್ಯದರ್ಶಿಗಳು ನಡೆಸಿದ್ದಾರೆ. ಸರ್ಕಾರದ ಆದೇಶದಂತೆ ಮುಂದಿನ ಕ್ರಮಕೈಗೊಳ್ಳಲಾಗುವದು ಎಂದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಈರಣ್ಣ ದೇವರಗುಡಿ, ರಾಜೇಸಾ ವಾಲಿಕಾರ, ರೇವಪ್ಪ ಪೋಲೇಶಿ, ಬಸಪ್ಪ ಉಪ್ಪಾರ, ಶ್ರೀಶೈಲ ಸಾಸನೂರ, ಗುರಲಿಂಗಪ್ಪ ಪಡಸಲಗಿ, ಶೇಖಪ್ಪ ಸಜ್ಜನ, ಮಲ್ಲಪ್ಪ ಪಡಸಲಗಿ, ಸಿಕಿಂದ್ರಪ್ಪ ಕೊಠಾರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.