ಸಿಆರ್‌ಝಡ್‌ ವಲಯ: 14 ಬ್ಲಾಕ್‌ಗಳಲ್ಲಿ ಅವಕಾಶ

6 ತಿಂಗಳುಗಳಿಂದ ಮರಳುಗಾರಿಕೆ ಸ್ಥಗಿತ; ಕಳೆದ ಬಾರಿಗಿಂತ ಒಂದು ದಿಬ್ಬ ಅಧಿಕ

Team Udayavani, Mar 12, 2022, 5:50 AM IST

ಸಿಆರ್‌ಝಡ್‌ ವಲಯ: 14 ಬ್ಲಾಕ್‌ಗಳಲ್ಲಿ ಅವಕಾಶ

ಮಂಗಳೂರು: ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಯಿಂದ ಅನುಮೋದನೆ ಲಭಿಸಿದೆ. ಇದರೊಂದಿಗೆ ಬಹುನಿರೀಕ್ಷಿತ ಸಿಆರ್‌ಝಡ್‌ ವಲಯದ ಮರಳುಗಾರಿಕೆಗೆ ಸದ್ಯದಲ್ಲೇ ಮರು ಚಾಲನೆ ದೊರಕಲಿದೆ.

ಸಿಆರ್‌ಝಡ್‌ ವಲಯದಲ್ಲಿ ಆರು ತಿಂಗಳುಗಳಿಂದ ಮರಳುಗಾರಿಕೆ ಸ್ಥಗಿತಗೊಂಡಿತ್ತು. ಕೆಸಿಝಡ್‌ಎಂ ಪರಿಸರ ವಿಮೋಚನ ಪತ್ರ (ಇಸಿ ಕ್ಲಿಯರೆನ್ಸ್‌ ) ಅವಧಿ 2021ರ ಸೆ. 16ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮರಳುಗಾರಿಕೆಯನ್ನು ನಿಲ್ಲಿಸಲಾಗಿತ್ತು.

14 ಬ್ಲಾಕ್‌ಗಳು
ಸಿಆರ್‌ಝಡ್‌ ವಲಯದ ನೇತ್ರಾವತಿಯಲ್ಲಿ 9 ಮತ್ತು ಫಲ್ಗುಣಿ ನದಿಯಲ್ಲಿ 5 ಬ್ಲಾಕ್‌ಗಳು ಸೇರಿದಂತೆ ಒಟ್ಟು 14 ಬ್ಲಾಕ್‌ (ದಿಬ್ಬ)ಗಳಲ್ಲಿ ಮರಳು ತೆರವಿಗೆ ಈ ಬಾರಿ ಕೆಸಿಝಡ್‌ಎಂ ಪರಿಸರ ವಿಮೋಚನ ಪತ್ರ (ಇಸಿ ಕ್ಲಿಯರೆನ್ಸ್‌) ನೀಡಿದೆ. ಕಳೆದ ಬಾರಿ ನೇತ್ರಾವತಿ ನದಿಯಲ್ಲಿ 8, ಫಲ್ಗುಣಿ ನದಿಯಲ್ಲಿ 4 ಹಾಗೂ ಶಾಂಭವಿ ನದಿಯಲ್ಲಿ 1 ಬ್ಲಾಕ್‌ ಸೇರಿದಂತೆ 13 ಬ್ಲಾಕ್‌ (ದಿಬ್ಬ)ಗಳಲ್ಲಿ ಮರಳು ತೆರವಿಗೆ ಎರಡು ಹಂತಗಳಲ್ಲಿ 105 ಮಂದಿ ಗುತ್ತಿಗೆದಾರರಿಗೆ ಪರವಾನಿಗೆ ನೀಡಲಾಗಿತ್ತು. ಸುಮಾರು 2,35,414 ಮೆ. ಟನ್‌ ಮರಳು ತೆರವುಗೊಳಿಸಲಾಗಿತ್ತು.

ಮರಳುಗಾರಿಕೆಗೆ ಅನುವು ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಸಂಬಂಧ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ. ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆ ಸೇರಿ ಮರಳುಗಾರಿಕೆಗೆ ಗುತ್ತಿಗೆದಾರರಿಗೆ ಪರವಾನಿಗೆ ಕುರಿತಂತೆ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದೆ. ಎಪ್ರಿಲ್‌ ಮೊದಲ ವಾರದಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳುವ ನಿರೀಕ್ಷೆಗಳಿವೆ.

ನೇತ್ರಾವತಿ ಹಾಗೂ ಫಲ್ಗುಣಿ ನದಿಯ ಸಿಆರ್‌ಝಡ್‌ ವಲಯದಲ್ಲಿ ಮೀನುಗಾರಿಕಾ ಕಾಲೇಜಿನ ತಜ್ಞರ ತಂಡ ಕಳೆದ ಅಕ್ಟೋಬರ್‌ನಲ್ಲಿ ಸಮೀಕ್ಷೆ ನಡೆಸಿ ನವೆಂಬರ್‌ನಲ್ಲಿ ಇದರ ವರದಿಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಲ್ಲಿಸಿತ್ತು. ಆದರೆ ಈ ಸಮೀಕ್ಷೆಯಲ್ಲಿ ಮರಳುದಿಬ್ಬಗಳ ಪ್ರಮಾಣ ಕಳೆದ ಬಾರಿಗಿಂತ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಮರಳು ಸಮಿತಿ ಮತ್ತೆ ಮರು ಸಮೀಕ್ಷೆಗೆ ಎನ್‌ಐಟಿಕೆಗೆ ವಹಿಸಿಕೊಟ್ಟಿತ್ತು. ಎನ್‌ಐಟಿಕೆ ಸಲ್ಲಿಸಿದ್ದ ವರದಿಯನ್ನು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಪರಿಶೀಲಿಸಿ ಅನುಮೋದನೆಗಾಗಿ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿಗೆ ಕಳುಹಿಸಿಕೊಟ್ಟಿತ್ತು.

ಪ್ರಸ್ತುತ ನಾನ್‌ಸಿಆರ್‌ಝಡ್‌ ವಲಯದ 17 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಚಾಲನೆಯಲ್ಲಿದ್ದು, ಇಲ್ಲಿಂದ ಮರಳು ಕಾಮಗಾರಿಗಳಿಗೆ ಪೂರೈಕೆಯಾ ಗುತ್ತಿದೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಪ್ರಕಾರ ನಾನ್‌ ಸಿಆರ್‌ಝಡ್‌ ವಲಯದಲ್ಲಿ 50 ಸಾವಿರ ಮೆ. ಟನ್‌ ಮರಳು ಲಭ್ಯತೆ ಇದೆ.

ಪರವಾನಿಗೆಗಳ ಸಂಖ್ಯೆ ಹೆಚ್ಚಳ
ಎರಡು ವರ್ಷಗಳಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ನೀಡುತ್ತಿದ್ದ ಪರವಾನಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಕಳೆದ ಬಾರಿ ಎರಡು ಹಂತಗಳಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಒಟ್ಟು 105 ಮಂದಿಗೆ ಪರವಾನಿಗೆ ನೀಡಲಾಗಿತ್ತು. ಕರಾವಳಿಯಲ್ಲಿ ಮರಳು ಸಮಸ್ಯೆ ತಲೆದೋರದಂತಾಗಲು 2017ರಲ್ಲಿ ಸಿಆರ್‌ಝಡ್‌ ಹಾಗೂ ನಾನ್‌ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಮರಳು ನೀತಿಯನ್ನು ಅನುಸರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಆಗ ಇದ್ದಂತೆ ಹೆಚ್ಚಿನ ಮಂದಿಗೆ ಪರವಾನಿಗೆ ನೀಡಬೇಕು ಎಂದು ಕರಾವಳಿ ಭಾಗದ ಶಾಸಕರು ಭೂವಿಜ್ಞಾನ ಮತ್ತು ಗಣಿಗಾರಿಕೆ ಸಚಿವ ಹಾಲಪ್ಪ ಆಚಾರ್‌ ಅವರಿಗೆ ಮನವಿ ಮಾಡಿದ್ದರು.

ಸಿಆರ್‌ಝಡ್‌ ವಲಯದಲ್ಲಿ ಮರಳುದಿಬ್ಬ ತೆರವಿಗೆ ಕೆಸಿಝಡ್‌ಎಂನಿಂದ ಪರಿಸರ ವಿಮೋಚನಾ ಪತ್ರ ಲಭಿಸಿದೆ. ಕಳೆದ ಬಾರಿ ಇದ್ದ ಪರವಾನಿಗೆಗಳಲ್ಲದೆ ಹೊಸದಾಗಿಯೂ ಪರವಾನಿಗೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಶೀಘ್ರದಲ್ಲೆ ಸಭೆ ಸೇರಿ ಪರಿಶೀಲಿಸಿ ಕ್ರಮಗಳನ್ನು ಕೈಗೊಳ್ಳಲಿದೆ.
-ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ,
ದ. ಕನ್ನಡ

 

ಟಾಪ್ ನ್ಯೂಸ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.