ಇಂದು ಮನೆ ಬಾಗಿಲಿಗೆ ಕಂದಾಯ ದಾಖಲೆ; ಉಡುಪಿ: ತೆಂಕನಿಡಿಯೂರು ಗ್ರಾಮದಲ್ಲಿ ಚಾಲನೆ


Team Udayavani, Mar 12, 2022, 5:35 AM IST

ಇಂದು ಮನೆ ಬಾಗಿಲಿಗೆ ಕಂದಾಯ ದಾಖಲೆ; ಉಡುಪಿ: ತೆಂಕನಿಡಿಯೂರು ಗ್ರಾಮದಲ್ಲಿ ಚಾಲನೆ

ಉಡುಪಿ:  ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮಾ. 12ರಂದು ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಶುಕ್ರವಾರ ತಿಳಿಸಿದರು.

ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್‌, ಹಿಸ್ಸಾ ಸ್ಕೆಚ್‌, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು “ಕಂದಾಯ ದಾಖಲೆ ಮನೆ ಬಾಗಿಲಿಗೆ’ ಎಂಬ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಗೆ ಮುಖ್ಯಮಂತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಚಾಲನೆ ನೀಡಲಿದ್ದಾರೆ. ಉಡುಪಿಯ ತೆಂಕನಿಡಿಯೂರು ಗ್ರಾಮದ ಲಕ್ಷ್ಮೀ ನಗರದಲ್ಲಿ ಮನೆಗಳಿಗೆ ಭೇಟಿ ನೀಡಿ ದಾಖಲಾತಿ ವಿತರಿಸಲಾಗುವುದು. ಕಾಪು, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕುಂದಾಪುರ, ಹೆಬ್ರಿ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಿಲ್ಲೆಯಲ್ಲಿ 1,73,979 ರೈತರಿದ್ದಾರೆ. 6,61,230 ಪಹಣಿ, 13,10,481 ಜಾತಿ ಪ್ರಮಾಣ ಪತ್ರ, 8,01,851 ಆದಾಯ ಪ್ರಮಾಣ ಪತ್ರ ಮತ್ತು 4,62,861 ಅಟ್ಲಾಸ್‌ಗಳನ್ನು ಮುದ್ರಿಸಿ, ವಿತರಿಸುವ ಗುರಿ ಹೊಂದಿದ್ದೇವೆ. ಈಗಾಗಲೇ 3,79,824 ಪಹಣಿ, 2,13,081 ಜಾತಿ ಪ್ರಮಾಣಪತ್ರ ಮತ್ತು 25,081 ಅಟ್ಲಾಸ್‌ ಮುದ್ರಿಸಲಾಗಿದೆ. ಈ ದಾಖಲೆಗಳನ್ನು ಕಂದಾಯ ಇಲಾಖೆಯ ಸಿಬಂದಿ ಮೂಲಕ 267 ಗ್ರಾಮಗಳ ರೈತರ ಮನೆಗೆ ತಲುಪಿಸಲಾಗುವುದು. ಮುದ್ರಣ ಕಾರ್ಯ ವಿಳಂಬವಾದಲ್ಲಿ ಮಾ. 21ರಿಂದ 26ರ ಅವಧಿಯಲ್ಲಿ ತಾಲೂಕು ಕಚೇರಿ, ನಾಡಕಚೇರಿ, ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಈ ದಾಖಲೆಗಳನ್ನು ರೈತರಿಗೆ ಉಚಿತವಾಗಿ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಎಡಿಸಿ ಸದಾಶಿವ ಪ್ರಭು ಹಾಜರಿದ್ದರು.

ಶೀಘ್ರ ಕೋವಿಡ್‌ ಮುಕ್ತ ಜಿಲ್ಲೆ
ಜಿಲ್ಲೆಯಲ್ಲಿ ಎರಡು ದಿನದಿಂದ ಕೊರೊನಾ ಪಾಸಿಟವ್‌ ಪ್ರಕರಣ ಪತ್ತೆಯಾಗಿಲ್ಲ. ಒಂದು ವಾರದವರೆಗೂ ಹೀಗೆ ಮುಂದುವರಿದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಗುಣಮುಖರಾದಾಗ ಕೊರೊನಾ ಮುಕ್ತ ಜಿಲ್ಲೆ ಎಂದು ಘೋಷಣೆ ಮಾಡಲಾಗುವುದು. ಪ್ರಸ್ತುತ ದಿನಕ್ಕೆ ಸರಾಸರಿ 1,300 ಮಂದಿಗೆ ಕೊರೊನಾ ಪರೀಕ್ಷೆ ಮಾಡುತ್ತಿದ್ದೇವೆ. ಹಾಗೆಯೇ ಮೊದಲ ಡೋಸ್‌ ನೀಡುವಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಎರಡನೇ ಡೋಸ್‌ನಲ್ಲಿ ಶೇ. 92.10ರಷ್ಟು ಸಾಧನೆಯಾಗಿದೆ. ಉಳಿದ 17 ಸಾವಿರಕ್ಕೂ ಅಧಿಕ ಮಂದಿಗೆ ಮೇಲಿಂದ ಮೇಲೆ ಸಂದೇಶ ರವಾನೆ ಮಾಡುತ್ತಿದ್ದೇವೆ. ಎರಡನೇ ಡೋಸ್‌ನಲ್ಲೂ ಶತ ಪ್ರತಿಶತ ಸಾಧನೆಗೆ ವಿಶೇಷ ಅಭಿಯಾನ ನಡೆಸುವ ಬಗ್ಗೆಯೂ ಯೋಚಿಸುತ್ತಿದ್ದೇವೆ ಎಂದು ಡಿಸಿ ತಿಳಿಸಿದರು.

ದ.ಕ.: ಸಚಿವ ಸುನಿಲ್‌ ಚಾಲನೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಾ. 12ರಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಅವರು ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದಲ್ಲಿ ಈ ಯೋಜನೆಯನ್ನು ಉದ್ಘಾಟಿಸುವರು. ತಾಲೂಕು ಮಟ್ಟದಲ್ಲಿ ಸ್ಥಳೀಯ ವಿಧಾನಸಭಾ ಸದಸ್ಯರು ಅವರ ಕ್ಷೇತ್ರಕ್ಕೆ ಒಳಪಡುವ ಗ್ರಾಮಗಳಲ್ಲಿ ಉದ್ಘಾಟಿಸುವರು.
ದ.ಕ. ಜಿಲ್ಲೆಯಲ್ಲಿ ಒಟ್ಟು 422 ಗ್ರಾಮಗಳು ಹಾಗೂ 17 ಹೋಬಳಿಗಳಿವೆ. ಒಟ್ಟು 210375 ಆರ್‌ಟಿಸಿ, 28,328 ನಕ್ಷೆ, 2,80,348 ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಜಿಲ್ಲೆಯಲ್ಲಿ ಸ್ವೀಕರಿಸಲಾಗಿದ್ದು ಇದರಲ್ಲಿ ಒಟ್ಟು 2,14,968 ದಾಖಲೆಗಳನ್ನು ಮುದ್ರಿಸಲಾಗಿದೆ. ಎಲ್ಲ ದಾಖಲೆಗಳನ್ನು ಹಂತಹಂತವಾಗಿ ಮುದ್ರಿಸಿ ಮಾ. 21ರೊಳಗೆ ತಾಲೂಕು ಕಚೇರಿಗಳಿಗೆ ಸರಬರಾಜು ಮಾಡಲಾಗುವುದು. ತಹಶೀಲ್ದಾರ್‌ರವರ ನೇತೃತ್ವದಲ್ಲಿ 17 ಕಂದಾಯ ನಿರೀಕ್ಷಕರು, 257 ಗ್ರಾಮಕರಣಿಕರು, 345 ಗ್ರಾಮಸಹಾಯಕರು ಫಲಾನುಭವಿಗಳ ಮನೆಮನೆಗೆ ತೆರಳಿ ಕಂದಾಯ ದಾಖಲೆಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಕೊಡಗು: ಮಕ್ಕಂದೂರು ಶಾಲೆ
ಕೊಡಗು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಮಕ್ಕಂದೂರು ಶಾಲಾ ಆವರಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಶಾಸಕರು ಮತ್ತು ಜನಪ್ರತಿನಿಧಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಬಿ. ಸಿ. ಸತೀಶ ತಿಳಿಸಿದ್ದಾರೆ. ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಈ ಯೋಜನೆಯಡಿ 1.30 ಲಕ್ಷ ಆರ್‌ಟಿಸಿಗಳನ್ನು ದಾಖಲಿಸಿಕೊಳ್ಳಲಾಗಿದೆ.

ಸ್ಥಳೀಯ ಭತ್ತ ಖರೀದಿ ಕಾರ್ಯ ಪಡೆಯಿಂದ ಸರಕಾರಕ್ಕೆ ಪ್ರಸ್ತಾವನೆ
ಉಡುಪಿ: ಸ್ಥಳೀಯ ಭತ್ತ ಖರೀದಿಸಿ ಸಾರ್ವಜನಿಕ ಪಡಿತರ ವ್ಯವಸ್ಥೆ (ಪಿಡಿಎಸ್‌)ಯಡಿ ವಿತರಿಸಲು ಅನುಕೂಲವಾಗುವಂತೆ ಭತ್ತ ಕಟಾವಿನ ಸಂದರ್ಭದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯಡಿ ಖರೀದಿಗೆ ಅವಕಾಶ ಮಾಡಿಕೊಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ತಿಳಿಸಿದರು.

ಸ್ಥಳೀಯ ಭತ್ತ ಖರೀದಿಸಿ ಪಿಡಿಎಸ್‌ ಮೂಲಕ ವಿತರಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಹೀಗಾಗಿ ಮುಂದಿನ ವರ್ಷದಿಂದ ಭತ್ತ ಕೊರತೆ ಆಗದಂತೆ ನೋಡಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯಪಡೆಯಲ್ಲೂ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಭತ್ತ ಕಟಾವು ಆದ ತತ್‌ಕ್ಷಣವೇ ಬೆಂಬಲ ಬೆಲೆಯಡಿ ಖರೀದಿಸಲು ಅನುಮತಿ ಕಲ್ಪಿಸುವಂತೆ ಸರಕಾರಕ್ಕೆ ಜಿಲ್ಲಾ ಕಾರ್ಯಪಡೆಯ ಮೂಲಕ ಪ್ರಸ್ತಾವನೆ ಕಳುಹಿಸಲಿದ್ದೇವೆ. ಕಟಾವು ಆಗುತ್ತಿದ್ದಂತೆ ಎಂಎಸ್‌ಪಿ ಅಡಿಯಲ್ಲಿ ಭತ್ತ ಖರೀದಿಗೆ ಅವಕಾಶ ಸಿಕ್ಕಾಗ ರೈತರು ಬೇರೆ ಕಡೆ ಭತ್ತ ನೀಡುವುದು ತಪ್ಪುತ್ತದೆ. ಲಭ್ಯ ಭತ್ತದ ಆಧಾರದಲ್ಲಿ ಪಿಡಿಎಸ್‌ ಮೂಲಕ ಸ್ಥಳೀಯ ಕುಚ್ಚಲು ಅಕ್ಕಿ ವಿತರಣೆಗೂ ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿ ಭತ್ತದ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಲ್ಲೂ ಅರಿವು ಮೂಡಿಸುವ ಬಗ್ಗೆ ಯೋಚನೆ ನಡೆಸುತ್ತಿದ್ದೇವೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.