ಕಾಶ್ಮೀರದ ಹಲವೆಡೆ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ, ಓರ್ವನ ಬಂಧನ
Team Udayavani, Mar 12, 2022, 8:37 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್, ಪುಲ್ವಾಮಾ ಮತ್ತು ಹಂದ್ವಾರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ತಿಳಿಸಿದ್ದಾರೆ.
“ನಾವು ನಿನ್ನೆ ರಾತ್ರಿ ನಾಲ್ಕೈದು ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದೇವೆ. ಪುಲ್ವಾಮಾದಲ್ಲಿ ಒಬ್ಬ ಪಾಕಿಸ್ತಾನಿ ಸೇರಿದಂತೆ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್ಬಾಲ್ ಮತ್ತು ಹಂದ್ವಾರದಲ್ಲಿ ತಲಾ ಒಬ್ಬ ಎಲ್ಇಟಿ ಭಯೋತ್ಪಾದಕರು ಕೊಲ್ಲಲ್ಪಟ್ಟರು. ಒಬ್ಬ ಭಯೋತ್ಪಾದಕನನ್ನು ಜೀವಂತವಾಗಿ ಬಂಧಿಸಲಾಗಿದೆ” ಐಜಿಪಿ ಕಾಶ್ಮೀರ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೆರ್ಚ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾ ಕಲಾನ್ ಪ್ರದೇಶದಲ್ಲಿ ರಾತ್ರಿಯಿಡೀ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ.
ಮೂಲಗಳ ಪ್ರಕಾರ ಇನ್ನೂ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ತಂಡವು ಚೆವಾಕಲನ್ನಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
“ಪಡೆಗಳ ಜಂಟಿ ತಂಡವು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರರು ಪಡೆಗಳ ಮೇಲೆ ಗುಂಡು ಹಾರಿಸಿದರು, ಗುಂಡಿನ ಚಕಮಕಿಯನ್ನು ಪ್ರಚೋದಿಸಿದರು” ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.