ತಲೆಕೆಳಗಾದ ವಿಪಕ್ಷಗಳ ಲೆಕ್ಕಾಚಾರ… ರಾಷ್ಟ್ರಪತಿ ಚುನಾವಣೆ ಸಲೀಸು

ಈ ಬಾರಿ ಉತ್ತರ ಪ್ರದೇಶದಲ್ಲಿ ಕೊಂಚ ಕಡಿಮೆಯಾಗಿದ್ದರೂ ಬೇಕಾದ ಮತ ಪಡೆಯುವುದಕ್ಕೆ ತೊಂದರೆಗಳಾಗುವುದಿಲ್ಲ

Team Udayavani, Mar 12, 2022, 12:50 PM IST

ಬುಡಮೇಲಾದ ವಿಪಕ್ಷಗಳ ಲೆಕ್ಕಾಚಾರ… ರಾಷ್ಟ್ರಪತಿ ಚುನಾವಣೆ ಸಲೀಸು

ಈಗಷ್ಟೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫ‌ಲಿತಾಂಶ ಬಹಿರಂಗವಾಗಿದ್ದು, ಐದರಲ್ಲಿ ನಾಲ್ಕು ಬಿಜೆಪಿ ಪಾಲಾಗಿವೆ. ಇದೇ ಜುಲೈಗೆ ಹಾಲಿ ರಾಷ್ಟ್ರಪತಿಗಳ ಅಧಿಕಾರಾವಧಿ ಮುಕ್ತಾಯ ವಾಗಲಿದ್ದು, ಹೊಸ ರಾಷ್ಟ್ರಪತಿಗಳನ್ನು ಆಯ್ಕೆ ಮಾಡಬೇಕಾಗಿದೆ. ಈ ವಿಚಾರದಲ್ಲಿ ನಾಲ್ಕು ರಾಜ್ಯ ಗಳ ಫ‌ಲಿತಾಂಶ ಬಿಜೆಪಿಗೆ ಲಾಭದಾಯಕವಾಗಿ ಪರಿಣಮಿಸಿದೆ.

ವಿಪಕ್ಷ ಗಳ ಲೆಕ್ಕಾಚಾರ ಕೆಳಗೆ
ಈಗಿನ ಫ‌ಲಿತಾಂಶ ಬಿಜೆಪಿಗೆ ಲಾಭ ತಂದುಕೊಟ್ಟಿದೆ ಎಂಬುದರಲ್ಲಿ ಸಂಶಯವಿಲ್ಲ. ಆದರೆ, ವಿಪ ಕ್ಷಗಳ ಯೋಜನೆಗೆ ಶಾಕ್‌ ನೀಡಿದೆ. ಈಗಾಗಲೇ ಟಿಆರ್‌ ಎಸ್‌ ನಾಯಕ ಮತ್ತು ತೆಲಂಗಾಣ ಸಿಎಂ ಕೆ.ಸಿ. ಚಂದ್ರಶೇಖರ ರಾವ್‌ ಅವರು, ವಿಪಕ್ಷ ನಾಯಕರ ಭೇಟಿ ಮಾಡಿ, ವಿಪಕ್ಷಗಳ ಕಡೆ ಯಿಂದ ಶರದ್‌ ಪವಾರ್‌ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ಪ್ಲ್ಯಾನ್‌ ಮಾಡಿ ದ್ದರು. ಒಂದೊಮ್ಮೆ ಉತ್ತರ ಪ್ರದೇಶದಲ್ಲಿ ಅಖೀಲೇಶ್‌ ಕೈ ಮೇಲಾದರೆ, ಯತ್ನಿಸಬಹುದು ಎಂಬುದು ಅವರ ಲೆಕ್ಕಾಚಾರವಾಗಿತ್ತು. ಹಾಗೆಯೇ, ಜೆಡಿಯು ನಾಯಕ ನಿತೀಶ್‌ ಕುಮಾರ್‌ರನ್ನು ಎನ್‌ ಡಿಎಯಿಂದ ಬೇರ್ಪಡಿಸಿ, ಚುನಾವಣೆಗೆ ನಿಲ್ಲಿಸುವ ಪ್ರಯತ್ನಗಳೂ ನಡೆದಿದ್ದವು. ನಿತೀಶ್‌ ಒಪ್ಪಿರಲಿಲ್ಲ.

ಹೇಗೆ ಲೆಕ್ಕಾಚಾರ?
ಇಡೀ ದೇಶದಲ್ಲಿ ಉತ್ತರ ಪ್ರದೇಶ ಅತ್ಯಂತ ದೊಡ್ಡ ರಾಜ್ಯ. ಹೀಗಾಗಿ ಇಲ್ಲಿನ ಪ್ರತಿಯೊಬ್ಬ ಶಾಸ ಕನ ಮತ ಮೌಲ್ಯ 208 ಇದೆ. ಪಂಜಾಬ್‌ನ ಮತ ಮೌಲ್ಯ 116, ಉತ್ತರಾಖಂಡ 64, ಗೋವಾ 20 ಮತ್ತು ಮಣಿಪುರದ್ದು 18 ಇದೆ. ಕಳೆದ ಬಾರಿ ಉತ್ತರ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಶಾಸಕರನ್ನು ಹೊಂದಿದ್ದ ಬಿಜೆಪಿ, ಅತ್ಯಂತ ಸಲೀಸಾಗಿ ರಾಮನಾಥ್‌ ಕೋವಿಂದ್‌ ಅವರನ್ನು ರಾಷ್ಟ್ರಪತಿ ಹುದ್ದೆಗೆ ಆರಿಸಿತ್ತು. ಈ ಬಾರಿ ಉತ್ತರ ಪ್ರದೇಶದಲ್ಲಿ ಕೊಂಚ ಕಡಿಮೆಯಾಗಿದ್ದರೂ ಬೇಕಾದ ಮತ ಪಡೆಯುವುದಕ್ಕೆ ತೊಂದರೆಗಳಾಗುವುದಿಲ್ಲ ಎಂದೇ ವಿಶ್ಲೇಷಿಸಲಾಗಿದೆ.

ಶೇ.50ಕ್ಕಿಂತ ಹೆಚ್ಚು ಮತ
ರಾಷ್ಟ್ರಪತಿಗಳನ್ನು ಆಯ್ಕೆ ಮಾಡಲು ಒಂದು ಎಲೆಕ್ಟೋರಲ್‌ ಕಾಲೇಜು ಇರುತ್ತದೆ. ಇದರ ಒಟ್ಟಾರೆ ಮತ 10,98,903 ಇದೆ. ಇದರಲ್ಲಿ 776 ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, 4,120 ಶಾಸಕರು ಇರುತ್ತಾರೆ. ಸಂಸದರ ಮತ ಮೌಲ್ಯ 708. ಅದೇ ಶಾಸಕರ ಮತ ಮೌಲ್ಯ ಆಯಾ ರಾಜ್ಯಗಳ ಭೌಗೋಳಿಕ ಸನ್ನಿವೇಶಕ್ಕೆ ತಕ್ಕಂತೆ ಬೇರೆ ಬೇರೆಯಾಗಿರುತ್ತದೆ. ಬಿಜೆಪಿ ಅರ್ಧಕ್ಕಿಂತ ಹೆಚ್ಚು ಮತ ಇರಿಸಿಕೊಂಡಿದೆ.

ಯಾರಿಗೆ ಅದೃಷ್ಟ?
ಹಿಂದಿನ ರಾಷ್ಟ್ರಪತಿ ಚುನಾವಣೆಯಂತೆ ಈಗಲೂ ಅಷ್ಟೇ ಕೂತುಹಲ ಎಲ್ಲರಲ್ಲಿ ಇದೆ. ಕೋವಿಂದ್‌ ಅವರ ಹೆಸರನ್ನೂ ಅಚ್ಚರಿಯ ರೀತಿ ಘೋಷಿಸಲಾಗಿತ್ತು. ವೆಂಕಯ್ಯ ನಾಯ್ಡು ಹೆಸರಿದೆಯಾದರೂ ಇನ್ನೂ ಖಚಿತವಾಗಿಲ್ಲ.

ಟಾಪ್ ನ್ಯೂಸ್

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.