ಸಾಲಬಾಧೆ ತಾಳಲಾರದೇ ಬಾವಿಗೆ ಬಿದ್ದು ತಾಯಿ, ಮಗಳು ಆತ್ಮಹತ್ಯೆ
Team Udayavani, Mar 12, 2022, 3:14 PM IST
ಪಾಂಡವಪುರ: ಸಾಲಬಾಧೆ ತಾಳಲಾರದೇ ತಾಯಿ ಮತ್ತು ಮಗಳು ತೆರೆದಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ರಾವಕ ಘಟನೆ ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದ ನಂಜೇಗೌಡರ ಪತ್ನಿ ಭಾರತಿ (45), ಪುತ್ರಿ ನಯನಾ (20) ಮೃತರು.
ಘಟನೆ ವಿವರ: ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದ ಭಾರತಿ ಮತ್ತು ನಯನಾ ತಮ್ಮ ಜಮೀನಿನ ಪಕ್ಕದ ಪಂಪ್ಸೆಟ್ ಬಾವಿಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತನ ಮಗನೂ ಕಳೆದ ನ.2021ರಲ್ಲಿ ಮರಣ ಹೊಂದಿದ್ದನು. ಮೃತರು ಸಣ್ಣಪುಟ್ಟ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸಾಲದ ಬಾಧೆಯಿಂದಲೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಭಾರತಿ ಬಾವಿಗೆ ಹಾರಿದ್ದಾರೆ. ನಂತರ ಪುತ್ರಿ ನಯನಾ ಕೂಡ ಬಾವಿಗೆ ಹಾರಿದ್ದಾಳೆ. ಇಬ್ಬರಿಗೂ ಈಜು ಬಾರದ ಹಿನ್ನೆಲೆಯಲ್ಲಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರು ಆತ್ಮಹತ್ಯೆಗೆ ಮಾಡಿಕೊಂಡಿರುವುದನ್ನು ಕಂಡು ಸಾರ್ವಜನಿಕರು, ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ, ಮೃತದೇಹಗಳನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.