ಐಪಿಎಲ್ 2022: ಅಲೆಕ್ಸ್ ಹೇಲ್ಸ್ ಔಟ್, ಕೆಕೆಆರ್ ತಂಡ ಸೇರಿದ ಆರೊನ್ ಫಿಂಚ್
Team Udayavani, Mar 12, 2022, 9:00 PM IST
ಕೋಲ್ಕತಾ: ಐಪಿಎಲ್ ಸೀಸನ್ 15 ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮತ್ತೋರ್ವ ಆಟಗಾರ ಕೂಟದಿಂದ ಹೊರನಡೆದಿದ್ದಾರೆ.
ಈ ಮೊದಲು ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಜೇಸನ್ ರಾಯ್ ಹಿಂದೆ ಸರಿದಿದ್ದರು. ಇದೀಗ ಕೋಲ್ಕತಾ ನೈಟ್‌ರೈಡರ್ ತಂಡದಲ್ಲಿ ಸ್ಥಾನ ಪಡೆದಿದ್ದ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಅಲೆಕ್ಸ್ ಹೇಲ್ಸ್ ಕೂಡ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ.
ಬಯೋಬಬಲ್‌ನಲ್ಲಿ ದೀರ್ಘಾವಧಿಯವರೆಗೆ ಆಡುವುದು ಕಷ್ಟ ಎಂದು ಹೇಲ್ಸ್ ಟೂರ್ನಿಯಿಂದ ಹೊರನಡೆದಿದ್ದಾರೆ.
ಬದಲಿ ಆಟಗಾರನಾಗಿ ಕೆಕೆಆರ್ ಆಸ್ಟ್ರೇಲಿಯದ ಟಿ20 ವಿಶ್ವಕಪ್ ವಿಜೇತ ತಂಡದ ನಾಯಕ ಆ್ಯರನ್ ಫಿಂಚ್ ಅವರನ್ನು ಆಯ್ಕೆ ಮಾಡಿಕೊಂಡಿದೆ. 2020ರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಿದ್ದ ಫಿಂಚ್ ಆ ಬಳಿಕ ಐಪಿಎಲ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಾರಿ ಮೆಗಾ ಹರಾಜಿನಲ್ಲಿ ಹೆಸರು ನೀಡಿದರೂ ಯಾವುದೇ ತಂಡ ಖರೀದಿಸಿರಲಿಲ್ಲ. ಇದೀಗ ಅಲೆಕ್ಸ್ ಹೇಲ್ಸ್ ಹೊರನಡೆಯುತ್ತಿದ್ದಂತೆ ಕೆಕೆಆರ್ ತಂಡದಲ್ಲಿ ಫಿಂಚ್‌ಗೆ ಸ್ಥಾನ ಸಿಕ್ಕಿದೆ.
ಇದನ್ನೂ ಓದಿ:ಅಫ್ಘಾನ್ ನಲ್ಲಿ ಆತ್ಮಾಹುತಿ ದಾಳಿ: ಉಗ್ರ ಪಡೆ ಸೇರಿದ್ದ ಕೇರಳದ ಯುವಕ ಸಾವು
ಫಿಂಚ್ ಕೆಕೆಆರ್ ತಂಡಕ್ಕೆ ಸೇರಿಕೊಂಡರೂ ಎ.6 ರ ತನಕ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆಸ್ಟ್ರೇಲಿಯ ತಂಡ ಪಾಕಿಸ್ಥಾನ ಪ್ರವಾಸದಲ್ಲಿರುವ ಕಾರಣ ಫಿಂಚ್ ಕೂಡ ಐಪಿಎಲ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.. ಪಾಕ್ ಸರಣಿ ಎ.5 ಕ್ಕೆ ಮುಗಿಯಲಿದ್ದು ಆ ಬಳಿಕವಷ್ಟೇ ಫಿಂಚ್ ಐಪಿಎಲ್‌ನಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.