ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಚಾಲನೆ

Team Udayavani, Mar 13, 2022, 2:44 PM IST

ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಚಾಲನೆ

ಚಾಮರಾಜನಗರ: ರಾಜ್ಯ ಸರ್ಕಾರದ ವಿನೂತನ ಯೋಜನೆ ಕಂದಾಯ ದಾಖಲೆ ಜನರ ಮನೆ ಬಾಗಿಲಿಗೆಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಶನಿವಾರ ಚಾಲನೆ ನೀಡಿದರು.

ಚಾ.ನಗರ ತಾಲೂಕಿನ ಕೂಡ್ಲೂರು ಗ್ರಾಪಂ ಕಚೇರಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರ್ಹ ಫ‌ಲಾನುಭವಿಗಳಿಗೆ ಆರ್‌ ಟಿಸಿ, ಐಎಲ್‌ಆರ್‌, ಅಟ್ಲಾಸ್‌ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಉಚಿತವಾಗಿ ವಿತರಿಸಲಾಯಿತು. ನಂತರ ಎಡೀಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ ಮಾತನಾಡಿ, ಕಂದಾಯ ದಾಖಲೆ ಜನರ ಮನೆ ಬಾಗಿಲಿಗೆ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಜನಸಾಮಾನ್ಯರು ತಮಗೆ ಅವಶ್ಯವಾಗಿರುವ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದೇ ಯೋಜನೆಯ ಉದ್ದೇಶವಾಗಿದೆ ಎಂದರು.

ರೈತರಿಗೆ ಅಗತ್ಯ ದಾಖಲೆಗಳನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮದಡಿ ಆರ್‌ಟಿಸಿ, ಜಾತಿ ಹಾಗೂ ಆದಾಯ ಪ್ರಮಾಣಪತ್ರ, ಐಎಲ್‌ ಆರ್‌, ಅಟ್ಲಾಸ್‌ಗಳನ್ನು ಉಚಿತವಾಗಿ ಕೊಡಲಾಗುತ್ತಿದ್ದು ದಾಖಲೆಗಳಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಮಾ.21ರಿಂದ 26ರವರೆಗೆ ನಾಡ ಕಚೇರಿಯಲ್ಲಿ ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಉಚಿತವಾಗಿ ಸರಿಪಡಿಸಿ ಕೊಡಲಾಗುತ್ತದೆ ಎಂದರು.

ಕೇಂದ್ರ ಮಟ್ಟದಲ್ಲಿಯೇ ದಾಖಲೆಗಳನ್ನು ನೀಡಲಾಗುತ್ತಿ ರುವುದರಿಂದ ಕೆಲವೊಂದು ಲೋಪದೋಷಗಳು ಕಂಡು ಬರುವುದು ಸಹಜ. ಆದ್ದರಿಂದ ಲೋಪದೋಷ ಗಳನ್ನು ಸರಿಪಡಿಸಿಕೊಳ್ಳಲು ಅವಕಾಶವಿದೆ. ಈ ಕಾರ್ಯಕ್ರಮದಡಿ ಉಚಿತವಾಗಿ ದಾಖಲೆಗಳನ್ನು ಪಡೆಯುವ ಮೂಲಕ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರವು ಕಂದಾಯ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದರಿಂದ ಸಾರ್ವಜನಿಕರಿಗೆ ಸಮಯ, ಶ್ರಮ ಉಳಿತಾಯವಾಗಲಿದೆ. ಜನತೆ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಪಂ ಜನಪ್ರತಿನಿಧಿಗಳು ಯೋಜನೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಮನವಿ ಮಾಡಿದರು. ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ ಮಾತನಾಡಿ, ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವು ರಾಜ್ಯ ಸರ್ಕಾರದ ವಿನೂತನ ಕಾರ್ಯಕ್ರಮವಾಗಿದೆ. ರಾಜ್ಯಾದ್ಯಂತ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ತಾಲೂಕಿನಲ್ಲಿ 1.35 ಲಕ್ಷ ರೈತರಿದ್ದು ಈ ಕಾರ್ಯಕ್ರಮ ಅನುಕೂಲವಾಗಲಿದೆ ಎಂದರು.

ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಯೋಗೇಶ್ವರಿ, ಸದಸ್ಯರಾದ ನಾರಾಯಣಸ್ವಾಮಿ, ಮಹದೇವಸ್ವಾಮಿ, ವಿನೋದಾ, ಬಸಮ್ಮಣ್ಣಿ, ಚಂದ್ರು, ಮಂಜುಳಾ ಕಂದಾಯ ನಿರೀಕ್ಷಕ ಧೂಳಪ್ಪ, ಗ್ರಾಮ ಲೆಕ್ಕಾಧಿಕಾರಿ ರಮೇಶ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಜಿತಾ ಇತರರು ಇದ್ದರು.

ಗ್ರಾಮಸ್ಥರ ದೂರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸ್ಪಂದನೆ : ಕೂಡ್ಲೂರು ಗ್ರಾಮಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರಿಗೆ ಗ್ರಾಮಸ್ಥರು ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದು ಪರಿಹರಿಸಿಕೊಡುವಂತೆ ಮನವಿ ಮಾಡಿಕೊಂಡರು.

ಗ್ರಾಮಸ್ಥರ ದೂರುಗಳನ್ನು ಆಲಿಸಿದ ಕಾತ್ಯಾಯಿನಿದೇವಿ, ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಅದಾಲತ್‌ ಕಾರ್ಯಕ್ರಮ ಆಯೋಜಿಸಬೇಕು. ಜೊತೆಗೆ ಜಮೀನುಗಳಿಗೆ ರಸ್ತೆ ನಿರ್ಮಾಣ ಸಂಬಂಧ ಪರಿಶೀಲಿಸಬೇಕು. ಜೊತೆಗೆ ಸರ್ಕಾರಿ ಜಾಗವಿದ್ದರೆ ಅದನ್ನು ಗುರ್ತಿಸಿ ಸ್ಮಶಾನಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.