ಕಂದಾಯ ಕಚೇರಿಗೆ ರೈತರ ಅಲೆದಾಟಕ್ಕೆ ದಾಖಲೆ ಮುಕ್ತಿ

ಸರಕಾರದ ಮಹತ್ವದ ಯೋಜನೆ ರೈತರಿಗೆ ವರದಾನ

Team Udayavani, Mar 13, 2022, 2:47 PM IST

13

ಬಾಗಲಕೋಟೆ: ಕಂದಾಯ ಇಲಾಖೆಯ ದಾಖಲೆಗಳಾದ ಪಹಣಿ, ಅಟ್ಲಾಸ್‌, ಆದಾ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಸರಕಾರ ಮಹತ್ವದ ಯೋಜನೆ ರೈತರಿಗೆ ವರದಾನವಾಗಿ ಪರಿಣಮಿಸಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಹೊನ್ನಾಕಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದ ಅರಳಿಕಟ್ಟಿಯಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸಹಯೋಗದಲ್ಲಿ ಹಮ್ಮಿಕೊಂಡ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾಂಕೇತಿಕವಾಗಿ ದಾಖಲೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಅವರು, ರೈತರ ಅಲೆದಾಟ, ಸಮಯ ಹಾಗೂ ಹಣ ವ್ಯರ್ಥವಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಉಪಯುಕ್ತ ಕಂದಾಯ ದಾಖಲೆಗಳನ್ನು ತಲುಪಿಸುವ ಮಹತ್ವದ ಕಾರ್ಯವನ್ನು ಸರಕಾರ ಕೈಗೊಂಡಿದೆ ಎಂದರು.

ಈ ಹಿಂದೆ ರೈತರು ಇನಾಮದಾರಿಕೆಯಿಂದ ಜಮೀನು ಖರೀದಿಸಿಕೊಂಡು ಉಳಿಮೆ ಮಾಡುತ್ತಿರುವಾಗ ಅಂತಹ ಜಮೀನು ಮಾರಾಟ ಮಾಡಲು, ಉಪಬೋಗಿಸಲು ಬರುತ್ತಿರಲಿಲ್ಲ. ಮೂಲ ಮಾಲೀಕನ ಹೆಸರು ಕಡಿಮೆಯಾಗದೇ ರೈತರು ಇಂತಹ ಜಮೀನು ಮಾರಲು ಹಾಗೂ ಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದರಿಂದ ದಾಖಲೆಯಲ್ಲಿನ ತಿದ್ದುಪಡಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇಂತಯ ಉಪಯುಕ್ತ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಗುವ ತೊಂದರೆ ತಪ್ಪಿಸಿ ನೇರವಾಗಿ ಕಂದಾಯ ದಾಖಲೆಗಳನ್ನು ರೈತರ ಮನೆ ತಲುಪಿಸುವ ಉದ್ದೇಶದಿಂದ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾನೂನುಗಳನ್ನು ತಿದ್ದುಪಡಿಗೊಳಿಸಿ ಸರಳೀಕರಣಗೊಳಿಸಿದ್ದಾರೆ. ಇದರಿಂದ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿಕೊಳ್ಳುವುದರ ಜತೆಗೆ ನೇರವಾಗಿ ರೈತರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವಂತೆ ಯೋಜನೆ ಜಾರಿಗೊಳಿಸಿರುವುದಾಗಿ ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾತನಾಡಿ, 1962ರಲ್ಲಿ ಭೂಮಿ ಪರಿವರ್ತನ ಕಾನೂನು ಇದ್ದರೂ ಕೂಡಾ ದಾಖಲೆಗಳು ಅಂದೇ ಸೃಷ್ಟಿಯಾಗಿದ್ದವು. ಆದರೆ ರೈತರಿಗೆ ಒದಗಿಸಬೇಕಾದ ಈ ದಾಖಲೆಗಳನ್ನು ಅಧಿ ಕಾರಿಗಳು, ಗ್ರಾಮ ಲೆಕ್ಕಾ ಧಿಕಾರಿಗಳು ಸರಿಯಾಗಿ ದೊರಕಿಸಿ ಕೊಡದೇ ಇರುವುದರಿಂದ ಈ ಯೋಜನೆ ರೈತರಿಗೆ ಉಪಯುಕ್ತವಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ|ವೀರಣ್ಣ ಚರಂತಿಮಠ ಮಾತನಾಡಿ, ಸರಕಾರ ನೀಡಿದ ದಾಖಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದನ್ನು ರೂಢಿ ಮಾಡಿಕೊಳ್ಳಬೇಕು. ದಾಖಲೆಗಳಲ್ಲಿ ಏನಾದರೂ ಬದಲಾವಣೆ ಕಂಡುಬಂದಲ್ಲಿ ಇದೇ ಮಾ. 21ರಿಂದ 6 ದಿನಗಳ ಕಾಲ ದಾಖಲೆಗಳ ತಿದ್ದುಪಡಿ ಕಾರ್ಯವನ್ನು ನಾಡಕಚೇರಿಗಳಲ್ಲಿ ಮಾಡಿಕೊಡಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಸುತಗುಂಡಾರ ಗ್ರಾ.ಪಂ ಅಧ್ಯಕ್ಷ ಮಳೆಯಪ್ಪ ಮೇಟಿ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಪಂ ಉಪಕಾರ್ಯದರ್ಶಿ ಸಿದ್ರಾಮೇಶ್ವರ ಉಕ್ಕಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕಾರ, ಜಿಪಂ ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ, ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.