ಹುಮನಾಬಾದ್: ಎಸ್ಟಿ ಗೊಂಡ ಸಿಂಧುತ್ವ ದೊರೆಯದ ಹಿನ್ನೆಲೆ ಚಾಲಕ ಆತ್ಮಹತ್ಯೆ

ರಸ್ತೆಯಲ್ಲಿ ಶವ ಇಟ್ಟು ಪ್ರತಿಭಟನೆ

Team Udayavani, Mar 13, 2022, 5:16 PM IST

19protest

ಹುಮನಾಬಾದ್: ಎಸ್.ಟಿ ಗೊಂಡ ಸಿಂಧುತ್ವ ಪ್ರಮಾಣ ಪತ್ರ ದೊರೆಯದ ಹಿನ್ನೆಲೆಯಲ್ಲಿ ಮನನೊಂದು ಕಲ್ಯಾಣ ಕರ್ನಾಟಕ ಸಾರಿಗೆ ಚಾಲಕ-ಕಂ-ನಿರ್ವಾಹಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಮಾರಚಿಂಚೋಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಓಂಕಾರ ರೇವಣ್ಣಪ್ಪ ಸೇರಿಕಾರ (42) ಮನನೊಂದು ನೇಣು ಬಿಗಿದುಕೊಂಡ ಸಾರಿಗೆ ಸಿಬ್ಬಂದಿ.

2008ರಲ್ಲಿ ಚಾಲಕ-ಕಂ-ನಿರ್ವಾಹಕ ಕರ್ತವ್ಯಕ್ಕೆ ನೇಮಕಗೊಂಡಿದ್ದು ಸಿಂಧುತ್ವ ಪ್ರಮಾಣ ಪತ್ರ ದೊರೆಯದ ಹಿನ್ನೆಲೆಯಲ್ಲಿ ಅನೇಕ ಸಮಸ್ಯೆ ಎದುರಿಸುತ್ತಿದ್ದರು. ಅನೇಕ ಬಾರಿ ಇಲಾಖೆಯವರು ನೋಟಿಸ್ ನೀಡಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದರು. ಸಿಂಧುತ್ವ ಪ್ರಮಾಣ ಪತ್ರದ ಕಡತಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇರುವ ಕುರಿತು ಹಾಗೂ ಸರ್ಕಾರದಲ್ಲಿರುವ ಗೊಂದಲಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು ಕೂಡ ಇಲಾಖೆಯ ಅಧಿಕಾರಿಗಳು ಪದೆ ಪದೆ ನೋಟಿಸ್ ಜಾರಿಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

 

ಸಾರಿಗೆ ಸಿಬ್ಬಂದಿಯ ಸಾವಿನ ಸುದ್ದಿ ತಿಳಿದ ಕುರುಬ ಸಮಾಜದ ಮುಖಂಡರು ಸಾರಿಗೆ ಇಲಾಖೆ ಸಿಬ್ಬಂದಿಗಳು ಪಟ್ಟಣದ ಬೀದರ ರಸ್ತೆಯಲ್ಲಿ ಜಮಾಗೊಂಡು ಪ್ರತಿಭಟನೆಗೆ ಮುಂದಾದರು. ತಹಶೀಲ್ದಾರ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸ್ ಅಧಿಕಾರಿಗಳು ತಡೆದು ಸೂಕ್ತ ಮಾಹಿತಿ ನೀಡಿದರು.

ಇದನ್ನೂ ಓದಿ:ಕೊರಟಗೆರೆ: ಸರಕು ವಾಹನದಲ್ಲಿ ಪ್ರಾಣಿಗಳಂತೆ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು!

ಕೆಲ ಹೊತ್ತು ತಹಶೀಲ್ದಾರ ಕಚೇರಿ ರಸ್ತೆಯಲ್ಲಿ ವಾಹನದಲ್ಲಿ ಶವ ಇರಿಸಿಕೊಂಡಿದ್ದ ಗ್ರಾಮಸ್ಥರು, ಪ್ರತಿಭಟನೆ ನಡೆಸಲು ಮುಂದಾದರು.  ಮೊದಲಿಗೆ ಬೀದರ್ ಕಲ್ಬುರ್ಗಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಮುಖಂಡರು, ನಂತರ ಪಟ್ಟಣದ ಅಂಬೇಡ್ಕರ್ ವತ್ತದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಪಾಟೀಲ ಭೇಟಿ

ಘಟನೆಯ ಮಾಹಿತಿ ಪಡೆದು ಸ್ಥಳೀಯ ಶಾಸಕ ರಾಜಶೇಖರ ಪಾಟೀಲ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಎಸ್ಪಿ ಗೊಂಡ ಪ್ರಮಾಣ ಪತ್ರದ ಕುರಿತು ಸದನದಲ್ಲಿ ಧ್ವನಿ ಎತ್ತುವ ಮೂಲಕ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಯಾವ ಕಾರಣಕ್ಕೆ ಸಿಂಧುತ್ವದ ಕಡತಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿದೆ ಎಂಬುದರ ಕುರಿತು ಮಾಹಿತಿ ಪಡೆಯುತ್ತೇನೆ. ಮೃತಪಟ್ಟ ಓಂಕಾರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಅಲ್ಲದೆ, ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ಹಣ ನೀಡುತ್ತೇನೆ. ಮಕ್ಕಳ ಶಿಕ್ಷಣಕ್ಕೆ ಸ್ಪಂದಿಸುವ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.

ಮುಂದುವರೆದ ಪ್ರತಿಭಟನೆ

ಸ್ಥಳಕ್ಕೆ ಸಹಾಯಕ ಆಯುಕ್ತರಾದ ರಮೇಶ ಕೊಳ್ಳಾರ ಭೇಟಿ ನೀಡಿ ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಪ್ರತಿಭಟನೆ ನಿರತರು ಯಾರ ಮಾತಿಗೂ ಜಗ್ಗದೆ ಪ್ರತಿಭಟನೆ ಮುಂದುವರೆಸಿದ್ದಾರೆ. ಸರ್ಕಾರಿ ನೌಕರನನ್ನು ಸರ್ಕಾರವೇ ಹತ್ಯೆಮಾಡಿದ್ದು, ಸಂಬಂಧಿಸಿದವರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.