ಸೋನಿಯಾ ಅವರೇ ಮುಂದುವರಿಕೆ; ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ

ಪಂಚರಾಜ್ಯಗಳ ಫ‌ಲಿತಾಂಶ ಅತ್ಯಂತ ಕಳವಳಕಾರಿ

Team Udayavani, Mar 14, 2022, 7:10 AM IST

ಸೋನಿಯಾ ಅವರೇ ಮುಂದುವರಿಕೆ; ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ

ನವದೆಹಲಿ:  ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಬಹುಮಹತ್ವದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು  ಕಾಂಗ್ರೆಸ್‌ನ ಹಿರಿಯ  ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಇಲ್ಲಿನ ಎಐಸಿಸಿ ಕಚೇರಿಯಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸಭೆ ನಡೆಯಿತು. ಐದು ರಾಜ್ಯಗಳಲ್ಲಿನ ಕಾಂಗ್ರೆಸ್‌ ಸೋಲು ಅತ್ಯಂತ ಕಳವಳಕಾರಿ ಎಂಬ ಬಗ್ಗೆಯೂ ನಾಯಕರು ಆತಂಕ ವ್ಯಕ್ತಪಡಿಸಿದರು.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌ ಮತ್ತು ಮಣಿಪುರದ ಸೋಲಿನ ಬಗ್ಗೆ ಸುದೀರ್ಘ‌ವಾಗಿ ಚರ್ಚೆ ನಡೆಸಲಾಗಿದೆ. ಆದರೆ, ಜಿ23 ನಾಯಕರ ಆಗ್ರಹದಂತೆ ನಾಯಕತ್ವ ಬದಲಾವಣೆಗೆ ಒಪ್ಪಿಗೆ ನೀಡಿಲ್ಲ. ಅಲ್ಲದೆ, ಸೋನಿಯಾ ಗಾಂಧಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿ ಎಂದು ಎಲ್ಲ ನಾಯಕರು ಕೇಳಿಕೊಂಡರು. ಕಡೆಗೆ ಸೋನಿಯಾ ಗಾಂಧಿ ಅವರು ಒಪ್ಪಿಗೆ ನೀಡಿದರು ಎಂದು ಪಕ್ಷದ ನಾಯಕ ರಾಜೀವ್‌ ಶುಕ್ಲಾ ಹೇಳಿದರು.

ಎಲ್ಲರ ಸಲಹೆಗಳಿಗೆ ಮಣೆ
ಸಭೆ ನಂತರ ಮಾತನಾಡಿದ ರಂದೀಪ್ ಸುರ್ಜೇವಾಲ ಅವರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸಂಘಟನೆ ಸಂಬಂಧ ಸಭೆಯಲ್ಲಿ ಸೇರಿದ್ದ ಎಲ್ಲರ ಮಾತುಗಳನ್ನೂ ಆಲಿಸಿದರು. ಜತೆಗೆ, ಸಂಘಟನಾತ್ಮಕವಾಗಿ ಬದಲಾವಣೆ ಮಾಡಲು ಒಪ್ಪಿಗೆ ನೀಡಿದರು ಎಂದರು.

ಮತ್ತೂಬ್ಬ ನಾಯಕ ಕೆ.ಸಿ.ವೇಣುಗೋಪಾಲ್‌ ಅವರು, ಬಜೆಟ್‌ ಅಧಿವೇಶನ ಮುಗಿದ ಕೂಡಲೇ ಚಿಂತನ ಶಿಬಿರವನ್ನು ಆಯೋಜಿಸುವುದಾಗಿ ಪ್ರಕಟಿಸಿದರು. ಹಾಗೆಯೇ, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್ ಅವರು, ತಮ್ಮ ರಾಜ್ಯದಲ್ಲೇ ಚಿಂತನ ಶಿಬಿರವನ್ನು ಆಯೋಜಿಸುವಂತೆ ಶಿಫಾರಸು ಮಾಡಿದರು.

ರಾಹುಲ್‌ ಬಗ್ಗೆಯೇ ಒಲವು
ಕಾಂಗ್ರೆಸ್‌ನ ಪ್ರತಿಯೊಬ್ಬ ನಾಯಕ ಕೂಡ ರಾಹುಲ್‌ ಗಾಂಧಿ ಅವರೇ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ ಎಂದು ರಣದೀಪ್‌ ಸುಜೇìವಾಲ ಹೇಳಿದರು. ಆದರೆ, ಇದನ್ನು ಈಗ ನಿರ್ಧಾರ ಮಾಡುವುದಿಲ್ಲ. ಸಂಘಟನಾತ್ಮಕ ಚುನಾವಣೆ ಮುಗಿದ ಮೇಲೆ ಇದು ನಿರ್ಧಾರವಾಗುತ್ತದೆ ಎಂದರು. ಸಭೆಗೂ ಮುನ್ನವೇ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್  ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಲಿ ಎಂದು ಆಗ್ರಹಿಸಿದರು.

ಜಿ23ನ ಮೂವರು ಭಾಗಿ
ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಜಿ23ನ ಗುಲಾಂ ನಬಿ ಆಜಾದ್‌, ಆನಂದ್‌ ಶರ್ಮ ಮತ್ತು ಮುಕುಲ್‌
ವಾಸ್ನಿಕ್‌ ಅವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಉಳಿದಂತೆ ಸಭೆಯಲ್ಲಿ ಇದ್ದವರೆಲ್ಲೂ ಗಾಂಧಿ ಕುಟುಂಬದ ನಿಷ್ಠೆಯುಳ್ಳವರಾಗಿದ್ದರು. ಅಲ್ಲದೆ, ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌, ಎ.ಕೆ.ಆ್ಯಂಟನಿ ಅವರು ಸಭೆಯಲ್ಲಿ ಭಾಗಿಯಾಗಿರಲಿಲ್ಲ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.