ಸೇವಾದಳದಿಂದ ದೇಶಾಭಿಮಾನ ಮೂಡಿಸುವ ಕಾರ್ಯ


Team Udayavani, Mar 14, 2022, 4:21 PM IST

Untitled-1

ತುಮಕೂರು: ಇಂದಿನ ಮಕ್ಕಳು ಮತ್ತು ಯುವಕರಲ್ಲಿ ದೇಶಾಭಿಮಾನ ಮೂಡಿಸುವ ಕೆಲಸವನ್ನು ಭಾರತ ಸೇವಾದಳ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಸೇವಾದಳದ ಸಮಿತಿ ಅಧ್ಯಕ್ಷ ಎಚ್‌.ಸಿ.ಹನುಮಂತಯ್ಯ ತಿಳಿಸಿದರು.

ನಗರದ ಎಂಪ್ರಸ್‌ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಉಪನ್ಯಾಸಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶಾಭಿಮಾನ ಅರಿವು: ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಮತ್ತು ಯುವಕರಿಗೆ ಸತ್ಯದ ಮಾರ್ಗ ದರ್ಶನ ಮಾಡುವ ಹಿರಿಯರ ಸಂಖ್ಯೆಯು ಕಡಿಮೆಯಾಗಿದೆ. ಆದರೆ ಭಾರತ ಸೇವಾದಳ ಸಂಸ್ಥೆಯು ಚಟುವಟಿಕೆಗಳನ್ನು ರೂಪಿಸುವ ಮೂಲಕ ಅವರಲ್ಲಿ ದೇಶಾಭಿಮಾನ ಮೂಡಿಸುತ್ತಿದೆ ಎಂದರು.

ಮಹತ್ಮಾಗಾಂಧೀಜಿ, ಸುಭಾಷ್‌ಚಂದ್ರ ಬೋಸ್‌ ರವರ ಕುರಿತು ಯುವ ಜನತೆ ಪುಸ್ತಕ ಓದಬೇಕಾ ಗಿದೆ. ಈ ನಿಟ್ಟಿನಲ್ಲಿ ಉಪನ್ಯಾಸಕರು ಸೇವಾದಳವನ್ನು ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು. ಸೇವಾದಳದ ಜಿಲ್ಲಾ ಕಾರ್ಯದರ್ಶಿ ಮಾಲೂ ರಪ್ಪ ಮಾತನಾಡಿ, ಉಪಾನ್ಯಾಸಕರು ಇಲ್ಲಿ ಪಡೆದ ಸೇವಾದಳ ತರಬೇತಿಯ ಚಟುವಟಿಕೆಗಳನ್ನು ತಮ್ಮ ಕಾಲೇಜಿನಲ್ಲಿ ಅನುಷ್ಠಾನಗೊಳಿಸಿ ಯುವಕ- ಯುವತಿಯರಲ್ಲಿ ಭಾವೈಕ್ಯತಾ ಮನೊಭಾವನೆ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು ಎಂದರು.

ಸಮಾರೋಪ ನುಡಿಗಳನ್ನಾಡಿದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಜಿ. ವೆಂಕಟೇಗೌಡ, ಭಾರತ ಸೇವಾದಳ ಕೇಂದ್ರ ಸಮಿತಿ ಮತ್ತು ಜಿಲ್ಲಾ ಸಮಿತಿಯು ಪ್ರತಿ ಕಾಲೇಜಿನಲ್ಲಿ ಸೇವಾದಳದ ಶಾಖೆಗಳನ್ನು ತೆರೆಯುವ ಮತ್ತು ಯುವಕ- ಯುವತಿಯರಲ್ಲಿ ದೇಶಾಭಿಮಾನ ಮೂಡಿಸು ವಂತಹ ನಿಟ್ಟಿನಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ನಡೆಸುವ ಜತೆ ರಾಜ್ಯಮಟ್ಟದ ಯುವ ವಿದ್ಯಾರ್ಥಿ ಸಮಾವೇಶ ಮತ್ತು ಜಿಲ್ಲಾ ಮಟ್ಟದಲ್ಲಿ ಯುವ ಜಾಗೃತಿ ಸಮಾವೇಶ ಹಾಗೂ ತಾಲೂಕುವಾರು ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿಯು ತೀರ್ಮಾನಿಸಿದೆ ಎಂದರು.

ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಲಿಂಗದೇವರು ಮಾತನಾಡಿ, ಭಾರತ ಸೇವಾದಳದ ಘಟಕಗಳನ್ನು ಎಲ್ಲಾ ಕಾಲೇಜುಗಳಲ್ಲಿ ಅವಶ್ಯಕವಾಗಿ ತೆರೆಯಲೇಬೇಕು ಎಂದರು.

ಶಶಿಧರ್‌, ಉಪಾ ಧ್ಯಕ್ಷರಾದ ಜಿ.ವೆಂಕಟೇಶ್‌ ಮಾತನಾಡಿ, ಕಾಲೇಜಿ ನಲ್ಲಿ ಹಮ್ಮಿಕೊಳ್ಳುವ ಸೇವಾದಳ ಕಾರ್ಯಕ್ರಮ ಗಳಿಗೆ ಜಿಲ್ಲಾ ಸಮಿತಿ ನಿಮ್ಮ ಜತೆ ನಿಂತಿರುತ್ತದೆ. ಇಂತಹ ಚಟುವಟಿಕೆಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಎಂಪ್ರಸ್‌ ಕಾಲೇಜಿನ ಪ್ರಾಂಶುಪಾಲ ಷಣ್ಮುಖ ಅವರನ್ನು ಸೇವಾದಳ ಜಿಲ್ಲಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸದಸ್ಯರಾದ ಹನುಮಂತ ಪ್ರಸಾದ್‌, ಮುತ್ತುನಾಯಕ್‌, ಉಪನ್ಯಾಸಕರು ಉಪಸ್ಥಿತರಿದ್ದರು. ಜಿಲ್ಲಾ ಪ್ರಸನ್ನಕುಮಾರ ಸ್ವಾಗತಿ ಸಿದರು. ಜಿಲ್ಲಾ ಖಜಾಂಚಿ ನಟೇಶ್‌ ವಂದಿಸಿದರು.

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.