ಸಾರಿಗೆ ಚಾಲಕರು ಶ್ರೀಕೃಷ್ಣರಿದ್ದಂತೆ: ಶ್ರೀರಾಮುಲು
ನೂರಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮಾದರಿ ಮತಕ್ಷೇತ್ರವನ್ನಾಗಿ ಮಾಡಲಾಗುತ್ತಿದೆ
Team Udayavani, Mar 14, 2022, 6:06 PM IST
ಶಿರಹಟ್ಟಿ: ಮಹಾಭಾರತದಲ್ಲಿ ಅರ್ಜುನನಿಗೆ ಶ್ರೀಕೃಷ್ಣ ಪರಮಾತ್ಮ ಸಾರಥಿಯಾಗಿದ್ದರು. ಅದೇ ರೀತಿ ಈ ಕಲಿಯುಗದಲ್ಲಿ ಎದುರಾದ ಕೋವೀಡ್ ನಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮ ಚಾಲಕರು ತಮ್ಮ ಜೀವನದ ಹಂಗುದೊರೆದು ಜನರ ಸೇವೆಗೈದು ಶ್ರೀಕೃಷ್ಣ ಪರಮಾತ್ಮರಾಗಿದ್ದಾರೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಪಟ್ಟಣದಲ್ಲಿ ನಿರ್ಮಾಣವಾಗಿರುವ ನೂತನ ಶಿರಹಟ್ಟಿ ಬಸ್ ಡಿಪೋ ಘಟಕದ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬಂಗಾರ-ಬೆಳ್ಳಿ ಪದಕ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ಕುಟುಂಬ ಮತ್ತು ತಮ್ಮ ಜೀವದ ಹಂಗು ತೊರೆದು ದುಡಿದ ಚಾಲಕರ ಸೇವೆ ಮರೆಯಲು ಸಾಧ್ಯವಿಲ್ಲ. ಮುಷ್ಕರದಲ್ಲಿ ಅಮಾನತಾದ ನೌಕರರ ಪೈಕಿ ಕೆಲವರನ್ನು ಮರಳಿ ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಚಾಲಕರ-ನಿರ್ವಾಹಕರ ವೇತನ ಪರಿಷ್ಕರಣೆ, ವಿವಿಧ ಬೇಡಿಕೆಗಳನ್ನು ಸಿಎಂ ಜತೆ ಮಾತನಾಡಿ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಶಿರಹಟ್ಟಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸಾರಿಗೆ ಬಸ್ ಡಿಪೋ ಘಟಕದ ಕನಸು ಇಂದು ನನಸಾಗಿದೆ. ಕೊರೊನಾದಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿ ವಿಷಮವಾದ್ದರೂ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಸರಿದಿಲ್ಲ. ಸಾರಿಗೆ ಇಲಾಖೆಯವರು ಈ ಬಾರಿ 2 ಸಾವಿರ ನೂತನ ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಇದರಲ್ಲಿ 1 ಸಾವಿರ ಬಸ್ ಕಲ್ಪಿಸಲು ಕ್ರಮ ಜರುಗಿಸಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಅದರಲ್ಲಿ ನೂತನ ಬಸ್ ಡಿಪೋ ಘಟಕ ಸ್ಥಾಪನೆ, 100 ಬೆಡ್ ಆಸ್ಪತ್ರೆ, ಕೋರ್ಟ್, ನೀರಾವರಿ ಯೋಜನೆಗೆ 200 ಕೋಟಿ ರೂ. ಮಂಜೂರು, ತಾಲೂಕಿನ ಇಟಗಿ ಗ್ರಾಮದ ಹತ್ತಿರ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಮತಕ್ಷೇತ್ರದಲ್ಲಿ ನೂರಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮಾದರಿ ಮತಕ್ಷೇತ್ರವನ್ನಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ 15 ವರ್ಷ ಅಪಘಾತ ರಹಿತ ಚಾಲನೆ ಮಾಡಿದ 9 ವಿಭಾಗಗಳ 58 ಘಟಕಗಳ 125 ಚಾಲಕರಿಗೆ ಬಂಗಾರದ ಪದಕ, 5 ವರ್ಷ ಅಪಘಾತ ರಹಿತ ಚಾಲನೆ ಮಾಡಿದ ಚಾಲಕರಿಗೆ ಬೆಳ್ಳಿ ಪದಕ ನೀಡಿ ಸಚಿವ ಶ್ರೀ ರಾಮುಲು ಗೌರವಿಸಿದರು. ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ, ಕರ್ನಾಟಕ ದ್ರಾಕ್ಷಿರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ವಾ.ಕ.ರ.ಸಾ. ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ, ಪಪಂ ಅಧ್ಯಕ್ಷೆ ಗಂಗಮ್ಮ ಆಲೂರ, ಉಪಾಧಕ್ಷ ಇಸಾಕ ಆದ್ರಳ್ಳಿ, ತಾಲೂಕಿನ ಬಿಜೆಪಿ ಮುಖಂಡರು, ಸಾರಿಗೆ ಇಲಾಖೆ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾ ಧಿಕಾರಿಗಳು, ಶಿರಹಟ್ಟಿ ಜನತೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.