ನರೇಗಾ ಹಬ್ಬ ರಾಜ್ಯ ಹಬ್ಬವಾಗಿ ಎಲ್ಲೆಡೆ ಆಚರಣೆ: ಸಿಎಂ
Team Udayavani, Mar 15, 2022, 6:55 AM IST
ಬೆಂಗಳೂರು: ನಿಜವಾದ ಆರ್ಥದಲ್ಲಿ ಆರ್ಥಿಕತೆಯನ್ನು ಮುನ್ನಡೆ ಸುತ್ತಿರುವವರು ನರೇಗಾ ಕೆಲಸಗಾರರು. ಹಾಗಾಗಿ, ನರೇಗಾ ಹಬ್ಬವನ್ನು ರಾಜ್ಯದ ಹಬ್ಬವನ್ನಾಗಿ ಪ್ರತೀ ಜಿಲ್ಲೆಯಲ್ಲೂ ಆಚರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಸೋಮವಾರ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ -2022 ಉದ್ಘಾಟಿಸಿ ಅವರು ಮಾತನಾಡಿದ ಅವರು, ನರೇಗಾ ಯೋಜನೆ ಬಡತನ ನಿರ್ಮೂಲನೆಯ ಪ್ರಬಲ ಅಸ್ತ್ರ. ನರೇಗಾ ಗ್ರಾಮೀಣ ಬದುಕಿನ ಭರವಸೆ. ದೇಶದ ಆರ್ಥಿಕತೆ ಮುನ್ನಡೆಸುವವರು ಬೆರಳೆಣಿಕೆ ಶ್ರೀಮಂತರಲ್ಲ. ನಿಜವಾದ ಆರ್ಥಿಕ ಬೆಳವಣಿಗೆ ದುಡಿಯುವ ವರ್ಗ, ರೈತರು, ಕೃಷಿ ಕೂಲಿಕಾರರಿಂದ ಆಗುತ್ತಿದೆ. ಆ ಅರ್ಥದಲ್ಲಿ ಆರ್ಥಿಕತೆಯನ್ನು ಮುನ್ನಡೆಸುತ್ತಿರುವವರು ನರೇಗಾ ಕೆಲಸಗಾರರು ಎಂದರು.
ಉತ್ತಮ ಸಾಧನೆ ಮಾಡಿದ ನರೇಗಾ ಫಲಾನುಭವಿಗಳು, ಅಧಿಕಾರಿಗಳು ಮತ್ತು ಪಂಚಾಯತ್‌ಗಳನ್ನು ಗೌರವಿ ಸಲಾಯಿತು. ನರೇಗಾ ವಾಣಿ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರರು ಇದ್ದರು.
ಇದನ್ನೂ ಓದಿ:ಅಗತ್ಯ ಇರುವ ಕಡೆ ಉಪ ನೋಂದಣಾಧಿಕಾರಿ ಕಚೇರಿ: ಅಶೋಕ್
ದೇಶದಲ್ಲಿ ನಾವೇ ಮುಂದು: ಈಶ್ವರಪ್ಪ
ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ನರೇಗಾ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲೇ ರಾಜ್ಯಕ್ಕೆ ಒಳ್ಳೆಯ ಹೆಸರಿದೆ. ನರೇಗಾ ಎಂದರೆ ಬೇರೆ ರಾಜ್ಯಗಳು ಕರ್ನಾಟಕದತ್ತ ನೋಡುತ್ತಿವೆ. ಈ ಯೋಜನೆ ಮೂಲಕ ಗ್ರಾಮೀಣ ಭಾಗದಲ್ಲಿ ಉದ್ಯೋಗ ಜಾಸ್ತಿ ಮಾಡಲಾಗಿದೆ. ಸಣ್ಣ ರೈತರ ಆದಾಯದಲ್ಲಿ ಏರಿಕೆಯಾಗಿದೆ. ಒಟ್ಟು 16 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದೆ. ಈ ವರ್ಷ 33.30 ಲಕ್ಷ ಕುಟುಂಬಗಳ 62.65 ಲಕ್ಷ ಜನರಿಗೆ ಯೋಜನೆಯಡಿ ಉದ್ಯೋಗ ನೀಡಲಾಗಿದೆ. ಈ ವರ್ಷದಲ್ಲಿ 4.92 ಲಕ್ಷ ಹೊಸ ಉದ್ಯೋಗ ಚೀಟಿ ಗಳನ್ನು ನೀಡುವ ಮೂಲಕ 11.90 ಲಕ್ಷ ಜನರನ್ನು ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಸರಕಾರ ಮಹತ್ವಾಕಾಂಕ್ಷೆಯ ಜನಶಕ್ತಿ ಅಭಿಯಾನದಲ್ಲಿ ರಾಜ್ಯವು ಇಲ್ಲಿಯವರೆಗೆ 8.92 ಲಕ್ಷ ಕಾಮಗಾರಿಗಳನ್ನು ಕೈಗೊಂಡಿದ್ದು, 4.87 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಅಭಿಯಾನ ಅನುಷ್ಠಾನದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.