ಲಂಕಾ ವಿರುದ್ಧದ ಟೆಸ್ಟ್‌ ಸರಣಿ ಗೆಲುವು ರಮಣೀಯ

Team Udayavani, Mar 15, 2022, 6:00 AM IST

INಲಂಕಾ ವಿರುದ್ಧದ ಟೆಸ್ಟ್‌ ಸರಣಿ ಗೆಲುವು ರಮಣೀಯ

ಕ್ರಿಕೆಟ್‌ನಲ್ಲಿ ಟಿ20 ಪ್ರವೇಶವಾದ ಮೇಲೆ ಟೆಸ್ಟ್‌ ಸರಣಿಗಳ ಮೇಲೆ ಜನರ ಆಸಕ್ತಿ ಕಡಿಮೆಯಾಗಿದೆ ಎಂಬುದು ಸುಳ್ಳಲ್ಲ. ಕೇವಲ ಮೂರ್ನಾಲ್ಕು ಗಂಟೆಗಳಲ್ಲಿ ಮುಗಿದು ಹೋಗುವ ಟಿ20ಯಿಂದಾಗಿ ಒಂದು ರೀತಿಯಲ್ಲಿ ಹೇಳಬೇಕಾದರೆ ಏಕದಿನ ಪಂದ್ಯಗಳ ಮೇಲಿನ ಆಸಕ್ತಿಯೂ ಕಡಿಮೆಯಾಗಿದೆ. ಇಂಥ ಕಾಲದಲ್ಲಿ ಯಾವುದೇ ಕಾರಣಕ್ಕೂ ಟೆಸ್ಟ್‌ ಪಂದ್ಯಗಳು ಬದಿಗೆ ಸರಿಯಬಾರದು. ಕಾಲಕಾಲಕ್ಕೆ ಟೆಸ್ಟ್‌ ಸರಣಿಗಳನ್ನು ಆಯೋಜಿಸುತ್ತಾ ಹೋದರೆ ಪ್ರತಿಯೊಬ್ಬ ಆಟಗಾರ ಕೂಡ ಪಕ್ವವಾಗುತ್ತಾನೆ ಎಂಬುದರಲ್ಲಿ ಸಂದೇಹವಿಲ್ಲ.

ಸೋಮವಾರ ಬೆಂಗಳೂರಿನಲ್ಲಿ ನಡೆದ ಹೊನಲು ಬೆಳಕಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಮಣಿಸಿದೆ. ರೋಹಿತ್‌ ಶರ್ಮ ನಾಯಕತ್ವದಲ್ಲಿ ಆಡಿದ ಭಾರತ ತಂಡ ಎಲ್ಲ ವಲಯಗಳನ್ನೂ ಅತ್ಯುತ್ತಮ ಪ್ರದರ್ಶನ ನೀಡಿತು ಎಂದು ನಿಸ್ಸಂದೇಹವಾಗಿ ಹೇಳಬಹುದು. ಇಲ್ಲಿ ಲಂಕಾ ತಂಡ ಕೊಂಚ ದುರ್ಬಲವೆಂದು ಕಂಡು ಬಂದರೂ ಭಾರತೀಯ ಆಟಗಾರರ ಶ್ರೇಷ್ಠ ಪ್ರದರ್ಶನವನ್ನು ತಳ್ಳಿಹಾಕಲು ಸಾಧ್ಯವಿಲ್ಲ.

ರೋಹಿತ್‌ ಶರ್ಮ ಅವರಿಗೆ ಈ ಸರಣಿ ಒಂದು ರೀತಿಯಲ್ಲಿ ಅಗ್ನಿಪರೀಕ್ಷೆಯಂತಿತ್ತು. ಟೆಸ್ಟ್‌ ತಂಡಕ್ಕೆ ಅವರು ಪೂರ್ಣಪ್ರಮಾಣದ ನಾಯಕನಾಗಿ ಆಡಿದ ಮೊದಲ ಸರಣಿ ಇದು. ರೋಹಿತ್‌ ಬ್ಯಾಟ್‌ನಿಂದ ಸಾಕಷ್ಟು ಪ್ರಮಾಣದಲ್ಲಿ ರನ್‌ ಸಿಡಿಯದಿದ್ದರೂ ಅವರ ನಾಯಕತ್ವದ ಗುಣ ಎಲ್ಲರ ಮೆಚ್ಚುಗೆಗೆ ಕಾರಣವಾಯಿತು ಎಂದು ಹೇಳಬಹುದು. ಇಡೀ ಸರಣಿಯಲ್ಲಿ ಯುವ ಆಟಗಾರರು ಮಿಂಚಿದ್ದು ಗಮನಾರ್ಹ. ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಅವರು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡರು. ಕೆ.ಎಲ್‌. ರಾಹುಲ್‌ ಅವರ ಅನುಪಸ್ಥಿತಿಯೂ ಕಾಡದಂತೆ ಆಡಿದ್ದು ಉತ್ತಮವೆನಿಸಿತು.

ಸರಣಿಯಲ್ಲಿ ಆರಂಭಿಕ ಆಟಗಾರರಿಗಿಂತ ಮಧ್ಯಮ ಕ್ರಮಾಂಕದ ಆಟಗಾರರೇ ಹೆಚ್ಚು ಮಿಂಚಿದ್ದು ವಿಶೇಷ. ಅಂದರೆ ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ತಂಡದ ಕಷ್ಟಕಾಲದಲ್ಲೂ ನಾವು ಆಡಬಲ್ಲೆವು ಎಂಬುದನ್ನು ತೋರಿಸಿಕೊಟ್ಟರು. ಅಲ್ಲದೆ ದ್ವಿತೀಯ ಟೆಸ್ಟ್‌ನಲ್ಲಿ ಶ್ರೇಯಸ್‌ ಅಯ್ಯರ್‌ ಅವರು, ಎರಡು ದ್ವಿಶತಕ ಬಾರಿಸಿ, ಈ ಸಾಧನೆ ಮಾಡಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೂ ಪಾತ್ರವಾದರು.

ಅತ್ತ ಮೊದಲ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಮಿಂಚಿದ್ದು ಜಗತ್ತಿನ ಅಗ್ರ ಶ್ರೇಯಾಂಕದ ಆಲ್‌ರೌಂಡರ್‌ ಜಡೇಜ. ಬ್ಯಾಟಿಂಗ್‌ನಲ್ಲಿ 175 ರನ್‌ ಬಾರಿಸಿದ್ದೂ ಅಲ್ಲದೇ ಬೌಲಿಂಗ್‌ನಲ್ಲಿ 41 ರನ್‌ ನೀಡಿ 5 ವಿಕೆಟ್‌ ತೆಗೆದುಕೊಂಡಿದ್ದು ಬಹುದೊಡ್ಡ ಸಾಧನೆಯಾಯಿತು.

ಅತ್ತ ಬೌಲಿಂಗ್‌ ವಿಭಾಗದಲ್ಲಿ ವೇಗಿ ಬೂಮ್ರಾ ಚೆನ್ನಾಗಿಯೇ ಮಿಂಚಿದರು. ಮೊದಲ ಟೆಸ್ಟ್‌ನಲ್ಲಿ ಸ್ಪಿನ್‌ ಬೌಲಿಂಗ್‌ ವಿಭಾಗ ಗೆಲುವಿಗೆ ವಿಶೇಷ ಕಾಣಿಕೆ ನೀಡಿದರೆ, ಇಲ್ಲಿ ವೇಗಿಗಳು ಮತ್ತು ಸ್ಪಿನ್ನರ್‌ಗಳು ಇಬ್ಬರೂ ಲಂಕಾ ಬ್ಯಾಟರ್‌ ಗಳನ್ನು ಕಾಡಿದರು. ಇದುವರೆಗೆ ಭಾರತ ತವರಿನಲ್ಲಿ ಮೂರು ಬಾರಿ ಪಿಂಕ್‌ ಬಾಲ್‌ ಟೆಸ್ಟ್‌ ಆಡಿದೆ. ವಿಶೇಷವೆಂದರೆ ಮೂರನ್ನೂ ಗೆದ್ದಿದೆ. ಜತೆಗೆ ಇದುವರೆಗೆ ಭಾರತ ತವರಿನಲ್ಲಿ 15 ಟೆಸ್ಟ್‌ ಸರಣಿಗಳನ್ನು ಗೆಲ್ಲುತ್ತಾ ಬಂದಿದೆ. 2012ರಲ್ಲಿ ಇಂಗ್ಲೆಂಡ್‌ ವಿರುದ್ಧ ಸರಣಿ ಸೋತದ್ದೇ ಕೊನೆ.

ಏನೇ ಆಗಲಿ ಟಿ20 ಯುಗದಲ್ಲಿಯೂ ಭಾರತ ತಂಡಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಗಮನಾರ್ಹವಾಗಿದೆ. ಇದೇ ಜಯದ ಓಟವನ್ನು ಮುಂದುವರಿಸಿಕೊಂಡು ಹೋಗಲಿ ಎಂಬುದೇ ಎಲ್ಲರ ಹಾರೈಕೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.