ಸೇವಾಲಾಲ್ ಜಯಂತಿ ಏಕಪಕ್ಷೀಯ: ಚವ್ಹಾಣ
Team Udayavani, Mar 15, 2022, 1:21 PM IST
ಚಿಂಚೋಳಿ: ಕೇಂದ್ರ ಮಂತ್ರಿಯಾಗಲು ಕಲಬುರಗಿ ಸಂಸದ ಡಾ| ಉಮೇಶ ಜಾಧವ್ ಅವರು ದೆಹಲಿಯಲ್ಲಿ ಲಂಬಾಣಿ ಜನಾಂಗದ ಧರ್ಮಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಿದ್ದಾರೆ. ಈ ಕಾರ್ಯಕ್ರಮ ಬಿಜೆಪಿಯ ಏಕಪಕ್ಷೀಯವಾಗಿತ್ತು ಎಂದು ಮಾಜಿ ಸಚಿವ ಬಾಬುರಾವ ಚವ್ಹಾಣ ಆರೋಪಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರ ಭಾಗವಹಿಸಿದ್ದಾರೆ. ಇದೊಂದು ಬಿಜೆಪಿ ಸೇವಾಲಾಲ್ ಜಯಂತಿ ಆಗಿತ್ತು ಎಂದು ಟೀಕಿಸಿದರು.
ಚಿಂಚೋಳಿ ಮತಕ್ಷೇತ್ರವು ಜಿಲ್ಲೆಯಲ್ಲಿಯೇ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಪ.ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜನಾಂಗದವರು ಹೆಚ್ಚಾಗಿದ್ದಾರೆ. ಅವರ ಆರ್ಥಿಕತೆ ಸುಧಾರಣೆ ಆಗಿಲ್ಲ. ಇಲ್ಲಿನ ಬಡವರು ತೆಲಂಗಾಣ, ಮುಂಬಯಿ, ಹೈದ್ರಾಬಾದ, ಪುಣೆ, ಬೆಂಗಳೂರು ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಾರೆ. ತಾಲೂಕಿನ ರೈತರ ಜೀವನಾಡಿಯಾಗಿರುವ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಡಿಯಲ್ಲಿ 140 ಕೋಟಿ ರೂ.ಗಳಲ್ಲಿ ಯೋಜನೆಯ 80 ಕಿ.ಮೀ. ಉದ್ದದ ಮುಖ್ಯ ಕಾಲುವೆ ಆಧುನಿಕರಣಕ್ಕಾಗಿ ಕರ್ನಾಟಕ ನೀರಾವರಿ ನಿಗಮ ವತಿಯಿಂದ ನೀಡಲಾಗಿತ್ತು. ಆದರೆ ಕಾಲುವೆಯಲ್ಲಿ ಅವ್ಯವಹಾರ ಆಗಿದ್ದು, ಇದರ ಬಗ್ಗೆ ತನಿಖೆ ಆಗಬೇಕು ಎಂದರು.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದಾಗ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಮಂಜೂರಿಗೊಳಿಸಿದ್ದರು. ಆದರೆ, ಬಿಜೆಪಿ ಸಂಸದರು ಖರ್ಗೆ ಯವರು ಮಂಜೂರಿಗೊಳಿಸಿದ ಯೋಜನೆಗಳನ್ನು ಉಳಿಸಿಕೊಳ್ಳುವುದಕ್ಕೆ ಆಗಲಿಲ್ಲ. ಇವರೊಬ್ಬರು ಅಸಮರ್ಥ ಸಂಸದರಾಗಿದ್ದಾರೆ ಎಂದು ಟೀಕಿಸಿದರು.
ಯಶವಂತಪುರ- ಬೀದರ ಮಾರ್ಗವಾಗಿ ಜಹಿರಾಬಾದ, ವಿಕಾರಾಬಾದ, ತಾಂಡೂರ, ಸೇಡಂ, ಚಿತ್ತಾಪುರ, ವಾಡಿ, ಮಳಖೇಡ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುವ ರೈಲು ಬದಲಾವಣೆಯನ್ನು ಕೇಂದ್ರ ಸಚಿವ ಭಗವಂತ ಖುಬಾ ಮಾಡಿಸಿದ್ದರು. ಆದರೆ, ರೈಲು ರದ್ದುಪಡಿಸಬೇಕೆಂದು ಪತ್ರ ಯಾಕೆ ನೀಡಿದ್ದಾರೆ. ಕಮಲಾಪುರ-ಬೀದರ ರೈಲು ಮಾರ್ಗ ಪ್ರಾರಂಭಿಸಲು ನನ್ನ ಸಹಮತವಿದೆ ಎಂದರು. ಮೈನೋದ್ದೀನ್ ಬೈವಾಡ, ಸಂದೀಪ ಚವ್ಹಾಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.