ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮನವಿ
Team Udayavani, Mar 15, 2022, 6:01 PM IST
ಶಿವಮೊಗ್ಗ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ಮಾಜಿ ಮೇಯರ್ ನಾಗರಾಜ್ ಕಂಕಾರಿ ಅವರ ನೇತೃತ್ವದಲ್ಲಿ ಪಾಲಿಕೆ ಎದುರು ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ತುಂಗಾ ನದಿ ದಂಡೆಯಲ್ಲಿಯೇ ಶಿವಮೊಗ್ಗ ನಗರವಿದೆ. ನದಿಯಲ್ಲಿ ನೀರಿದ್ದರೂ, ನಲ್ಲಿಯಲ್ಲಿ ನೀರಿಲ್ಲ. ಕುಡಿಯುವ ನೀರಿಗೆ ಎಲ್ಲಾ ಕಡೆ ಹಾಹಾಕಾರ ಎದ್ದಿದೆ. ಸಾರ್ವಜನಿಕರಿಗೆ ನೀರು ಕೊಡುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ. ಅವರ ಬೇಜವಬ್ಧರಿಯಿಂದಲೇ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬೇಸಿಗೆ ಹತ್ತಿರವಾಗಿದೆ. ಈಗಲೇ ಇಂತಹ ಸ್ಥಿತಿ ಇದೆ. ಮುಂದಿನ ದಿನಗಳಲ್ಲಿ ಇನ್ನೆಷ್ಟು ಪರದಾಡಬೇಕೋ ಗೊತ್ತಿಲ್ಲ. ಆದ್ದರಿಂದ ಪಾಲಿಕೆ ಆಯುಕ್ತರು ವಾಟರ್ ಬೋರ್ಡ್ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಕಳೆದ ಮೂರು ವರ್ಷಗಳಿಂದ ಕುಡಿಯುವ ನೀರನ್ನು ನಿರಂತರವಾಗಿ ಬಿಡುತ್ತೇವೆ ಎಂದು ಸುಳ್ಳು ಭರವಸೆಯನ್ನು ನೀಡುತ್ತಾ ಬಂದಿದೆ ಈಗಿನ ಪಾಲಿಕೆ ಆಡಳಿತ. ಈಗಲಾದರೂ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆ ಮೂಲಕ ಖಾಲಿ ಕೊಡದೊಂದಿಗೆ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಎಚ್. ಪಾಲಾಕ್ಷಿ, ನರಸಿಂಹ ಗಂಧದಮನೆ, ಶ್ಯಾಮ್, ಪುರುಷೋತ್ತಮ್, ಸೈಯದ್ ನೂರುಲ್ಲಾ, ವಿನಯ್ ಪರಶುರಾಮ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.