ಖರೀದಿಸಿದ ಪ್ರತಿ ವಸ್ತುವಿಗೂ ರಶೀದಿ ಅಗತ್ಯ

ವಸ್ತುಗಳಲ್ಲಿ ನ್ಯೂನತೆ ಕಂಡು ಬಂದಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗದಿಂದ ಪರಿಹಾರ: ಪುಟ್ಟರಾಜು

Team Udayavani, Mar 16, 2022, 4:00 PM IST

14

ಹಾವೇರಿ: ಗ್ರಾಹಕರು ಖರೀದಿಸಿದ ಪ್ರತಿ ವಸ್ತುವಿಗೂ ಕಡ್ಡಾಯವಾಗಿ ರಶೀದಿ ಪಡೆಯಬೇಕು. ಖರೀದಿಸಿದ ವಸ್ತುಗಳಲ್ಲಿ ನ್ಯೂನತೆ ಕಂಡುಬಂದಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗದಲ್ಲಿ ದೂರು ದಾಖಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದೆಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ನಗರದ ಹೊಸಮಠದ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಚೈತನ್ಯ ರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ಹಕ್ಕು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭ್ರೂಣದಿಂದ ಹಿಡಿದು ಮೃತದೇಹದವರೆಗೆ ಕಾನೂನು ಅನ್ವಯವಾಗುತ್ತದೆ. ಪ್ರತಿ ಮಗು ಜನನದ ನಂತರ ಭಾರತ ಸಂಸವಿಧಾನದ ಮೂಲಭೂತ ಹಕ್ಕು ಪಡೆಯುತ್ತದೆ. ಜೊತೆಗೆ ಮೂಲಭೂತ ಕರ್ತವ್ಯಗಳ ಪಾಲನೆಯೂ ಅವಶ್ಯಕವಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ಮೂಡಿಸಲಾಗುತ್ತಿದೆ. ಮಹಿಳೆ, ಮಕ್ಕಳು, ಹಿರಿಯ ನಾಗರಿಕರು, ಎಸ್ಸಿ, ಎಸ್‌ಟಿ ಸಮುದಾಯದ ಹಾಗೂ ವಾರ್ಷಿಕ ಮೂರು ಲಕ್ಷದೊಳಗೆ ಆದಾಯ ಹೊಂದಿದವರಿಗೆ ಉಚಿತ ಕಾನೂನು ನೆರವು ಒದಗಿಸಲಾಗುವುದು. ಪೆನೆಲ್‌ ವಕೀಲರ ಮೂಲಕ ಕಾನೂನು ಸಲಹೆ ನೀಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್‌. ಮಾತನಾಡಿ, ಪ್ರಪಂಚದಲ್ಲಿ ಶೇ.64 ರಷ್ಟು ಬ್ಯಾಂಕ್‌ಗಳು ಡಿಜಿಟಲ್‌ ಬ್ಯಾಂಕಿಂಗ್‌ ವ್ಯವಸ್ಥೆ ಅಳವಡಿಸಿಕೊಂಡಿವೆ. ಸ್ಮಾರ್ಟ್‌ಫೋನ್‌, ಇಂಟರ್‌ನೆಟ್‌ ಮೂಲಕ ಹಣಕಾಸು ಸೌಲಭ್ಯ ಪಡೆದುಕೊಳ್ಳಲಾಗುತ್ತಿದೆ. ಗ್ರಾಹಕರು ಡಿಜಿಟಲ್‌ ಹಣಕಾಸು ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಬೇಕು. ವಸ್ತುಗಳ ನಿಖರ ಬೆಲೆ, ಗುಣಮಟ್ಟ, ಬಾಳಿಕೆ ಅವಧಿಯ ದಿನಾಂಕ ಖಾತ್ರಿಪಡಿಸಿಕೊಂಡು ಖರೀದಿಸಬೇಕು. ಯಾವುದೇ ಸೇವೆ ಪಡೆದರೆ ಹಾಗೂ ವಸ್ತು ಖರೀದಿಸಿದರೆ ಕಡ್ಡಾಯವಾಗಿ ರಸೀದಿ ಪಡೆಯಬೇಕು. ಸೇವೆಯಲ್ಲಿ ನ್ಯೂನತೆ ಹಾಗೂ ವಸ್ತುಗಳಲ್ಲಿ ಲೋಪ ಕಂಡುಬಂದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ದಾಖಲಿಸಿ ಪರಿಹಾರ ಪಡೆದುಕೊಳ್ಳಬಹುದೆಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್‌ ವಕೀಲರಾದ ಪಿ.ಎಂ.ಬೆನ್ನೂರ ಅವರು ಗ್ರಾಹಕ ರಕ್ಷಣಾ ಕಾಯ್ದೆ-2019ರ ಕುರಿತು ಮಾತನಾಡಿ, ಸೇವೆ ಹಾಗೂ ವಸ್ತುವನ್ನು ಹಣ ನೀಡಿ ಪಡೆಯುವವನು ಗ್ರಾಹಕನಾಗುತ್ತಾನೆ. ಇಂದು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗಿದೆ. ಕಡಿಮೆ ಅವಧಿಯಲ್ಲಿ ವ್ಯಾಪಕವಾಗಿ ಬೆಳೆದಿದೆ. ಗ್ರಾಹಕರು ಜಾಗರೂಕತೆಯಿಂದ ವ್ಯವಹರಿಸಬೇಕೆಂದು ಹೇಳಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 50 ಲಕ್ಷ ರೂ. ವರೆಗೆ, ರಾಜ್ಯ ಆಯೋಗದಲ್ಲಿ ಎರಡು ಕೋಟಿ ರೂ. ಹಾಗೂ ರಾಷ್ಟ್ರೀಯ ಆಯೋಗದಲ್ಲಿ 10 ಕೋಟಿ ರೂ. ವರೆಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಐದು ಲಕ್ಷ ರೂ. ಪರಿಹಾರಕ್ಕೆ ಯಾವುದೇ ಕೋರ್ಟ್‌ ಫೀ ಇರುವುದಿಲ್ಲ. ಐದು ಲಕ್ಷ ದಿಂದ 10 ಲಕ್ಷದವರೆಗೆ 500 ರೂ., 10 ಲಕ್ಷದಿಂದ 20ಲಕ್ಷದ ವರೆಗೆ 800ರೂ. ಹಾಗೂ 20ಲಕ್ಷ ದಿಂದ 50ಲಕ್ಷದ ವರೆಗೆ 1000 ರೂ. ಕೋರ್ಟ್‌ ಫೀ ಇರುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಜಿಲ್ಲಾ ನ್ಯಾಯಾಲಯ ಸರ್ಕಾರಿ ಅಭಿಯೋಜಕ ಎಸ್‌. ಎಂ.ಗೆಜ್ಜಿಹಳ್ಳಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಉಮಾದೇವಿ ಎಸ್‌.ಹಿರೇಮಠ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಆರ್‌.ಚೌಗಲಾ ಹಾಗೂ ಹೊಸಮಠದ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ|ಮಂಜುನಾಥ ಬಿ.ವಿ. ಇದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಸ್ವಾಗತಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಚೈತನ್ಯ ರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿ ನಿರ್ದೇಶಕ ಎಸ್‌.ಎಚ್‌. ಮಜೀದ್‌ ವಂದಿಸಿದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.