ಕರಾವಳಿಯಲ್ಲಿ ತಾಪಮಾನ ಏರಿಕೆ; ಬಿಸಿಲಿನ ಬೇಗೆಗೆ ಹೆಚ್ಚುತ್ತಿದೆ ಸೆಕೆ !
Team Udayavani, Mar 17, 2022, 8:20 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಕೆಲ ದಿನಗಳಿಂದ ಗರಿಷ್ಠ ಉಷ್ಣಾಂಶ ಏರಿಕೆಯಾಗಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಪರಿಣಾಮ ದಿನವಿಡೀ ಸೆಕೆಯ ಕಿರಿ ಕಿರಿ ಅನುಭವಿಸುವಂತಾಗಿದೆ.
ಸಾಮಾನ್ಯವಾಗಿ ಮಾರ್ಚ್ ತಿಂಗಳಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಇರುತ್ತಿದ್ದ ತಾಪಮಾನ ಸದ್ಯ 37 ಡಿ.ಸೆ. ಗಡಿ ದಾಟುತ್ತಿದೆ. ಕರಾವಳಿಯಲ್ಲಿ ಬೆಳಗ್ಗಿನ ಜಾವ ಮಂಜು, ತುಸು ಚಳಿ ಇರು ತ್ತಿದ್ದು, ಸಮಯ ಕಳೆದಂತೆ ಸೆಕೆಯ ಅನುಭವ ಆಗುತ್ತಿದೆ. ಮಧ್ಯಾಹ್ನ ವೇಳೆ ಗರಿಷ್ಠ ಉಷ್ಣಾಂಶ ಮತ್ತಷ್ಟು ಏರಿಕೆಯಾಗಿ ರಾತ್ರಿಯವರೆಗೆ ಮುಂದುವರೆಯುತ್ತಿದೆ.
ಕರಾವಳಿ ಭಾಗದಲ್ಲಿ ನವೆಂಬರ್‌ನಲ್ಲಿ ಆರಂಭವಾಗಬೇಕಿದ್ದ ಚಳಿ ಈ ಬಾರಿ ತಡವಾಗಿ ಆರಂಭವಾಗಿತ್ತು. ಅದರಲ್ಲೂ ಕೆಲ ದಿನಗಳವರೆಗೆ ಮಾತ್ರ ಚಳಿ ಇತ್ತು. ಸದ್ಯ ದೇಶದೆಲ್ಲೆಡೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ. ಹವಾಮಾನ ಇಲಾಖೆ ತಜ್ಞರ ಪ್ರಕಾರ, ಕರಾವಳಿಯ ಸದ್ಯದ ವಾತಾವರಣ ಪೂರ್ವ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.
ಮಾರ್ಚ್ ತಿಂಗಳು ಮೂರನೇ ಅಥವಾ ನಾಲ್ಕನೇ ವಾರದಿಂದ ಪೂರ್ವ ಮುಂಗಾರು ಮಳೆ ಸುರಿಯುವ ಸಾಧ್ಯತೆ ಇದೆ.ಉಷ್ಣಾಂಶ ಏರಿಕೆಯ ಪರಿಣಾಮ ವಾತಾವರಣದಲ್ಲಿ ಒತ್ತಡ ಕಡಿಮೆಯಾಗಿ ಸ್ಥಳೀಯವಾಗಿ ಮೋಡ ಸೃಷ್ಟಿಯಾಗಲಿದೆ. ಇದರಿಂದಾಗಿ ಮಳೆ ಸುರಿಯುವ ಸಾಧ್ಯತೆ ಹೆಚ್ಚು. ಹವಾಮಾನ ಇಲಾಖೆಯ ತಜ್ಞರ ಪ್ರಕಾರ ಇನ್ನೂ, ಕೆಲ ದಿನಗಳ ಕಾಲ ಇದೇ ರೀತಿ ವಾತಾವರಣ ಮುಂದುವರಿಯಲಿದೆ.
ಬಿಸಿಲಿನ ಬೇಗೆ ತಣಿಸಲು ಕೆಲವರು ತಂಪು ಪಾನೀಯದ ಮೊರೆ ಹೋಗುತ್ತಿದ್ದರೆ ಇನ್ನೂ ಕೆಲವರು ಬೀಚ್‌ನ ಕಡೆಗೆ ಬರುತ್ತಿದ್ದಾರೆ. ತಾಪಮಾನ ಹೆಚ್ಚಿದ ಕಾರಣದಿಂದಾಗಿ ಕೆಲವು ರೋಗಗಳು ಕಾಣಿಸಿಕೊಳ್ಳುತ್ತಿದೆ. ಅದರಲ್ಲಿಯೂ ಹೆಚ್ಚಿದ ತಾಪಮಾನದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯ ಸಾಧ್ಯತೆ ಹೆಚ್ಚಿದೆ.
ತುರಿಕೆ, ಹುಣ್ಣು, ಗಂಟಲು ನೋವು, ತಲೆನೋವು, ಶೀತ-ಜ್ವರ ಸೇರಿದಂತೆ ಅನೇಕ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಮಂಗಳೂರಿನಲ್ಲಿ ಮಂಗಳವಾರ ಗರಿಷ್ಠ ತಾಪಮಾನ 35.4 ಡಿ.ಸೆಲ್ಸಿಯಸ್ ದಾಖಲಾಗಿತ್ತು. ಇದು ವಾಡಿಕೆಯ ತಾಪಮಾನಕ್ಕಿಂದ 2.8 ಡಿ.ಸೆ. ಹೆಚ್ಚು. ಕನಿಷ್ಠ ತಾಪಮಾನ 25.1 ಡಿ.ಸೆ. ದಾಖಲಾಗಿತ್ತು. ಉಡುಪಿಯಲ್ಲಿ ಮಂಗಳವಾರ 30 ಡಿ.ಸೆ. ಗರಿಷ್ಠ ತಾಪಮಾನ ಮತ್ತು 23 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
2017ರಲ್ಲಿ ಗರಿಷ್ಠ ಉಷ್ಣಾಂಶ ದಾಖಲೆ
ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರು ನಗರದಲ್ಲಿ 2017ರ ಮಾರ್ಚ್ ತಿಂಗಳಿನಲ್ಲಿ ದಾಖಲೆಯ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. 2017ರ ಮಾರ್ಚ್ 16ರಂದು 38.7 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ಮಾರ್ಚ್ ತಿಂಗಳಿನಲ್ಲಿ ಉಂಟಾದ ದಾಖಲೆಯ ಉಷ್ಣಾಂಶವಾಗಿದೆ. ಇದೀಗ ಮತ್ತೆ ಸೆಕೆ ಹೆಚ್ಚಾಗುತ್ತಿದ್ದು, ಗರಿಷ್ಠ ಉಷ್ಣಾಂಶ ದಾಖಲೆಯತ್ತ ತಲುಪುತ್ತಿದೆ.
19ರಿಂದ ಮಳೆ ಸಾಧ್ಯತೆ
ಕರಾವಳಿಯಲ್ಲಿ ಮಾ. 19ರಿಂದ 24ರ ವರೆಗೆ ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡಿನ ಕೆಲವೆಡೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲ ದಿನಗಳಿಂದ ದೇಶದಲ್ಲಿಯೇ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದೆ. ಈ ತಿಂಗಳಾಂತ್ಯದವರೆಗೆ ಇದೇ ರೀತಿ ಉಷ್ಣಾಂಶ ಏರಿಕೆ ಕಾಣಲಿದ್ದು, ಬಳಿಕ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮಾರ್ಚ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಅದರ ಮೇಲೂ ಗರಿಷ್ಠ ಉಷ್ಣಾಂಶ ಪರಿಣಾಮ ಬೀರಬಹುದು.
– ಡಾ| ರಾಜೇಗೌಡ, ಬೆಂಗಳೂರು ಕೃಷಿ ವಿ.ವಿ. ಹವಾಮಾನ ವಿಜ್ಞಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.