ಹೋಳಿ ಹುಣ್ಣಿಮೆಗೆ ಖಾಕಿ ಸರ್ಪಗಾವಲು

19ರಂದು ಧಾರವಾಡದಲ್ಲಿ, 22ರಂದು ಹುಬ್ಬಳ್ಳಿಯಲ್ಲಿ ರಂಗಪಂಚಮಿ

Team Udayavani, Mar 17, 2022, 10:48 AM IST

3

ಹುಬ್ಬಳ್ಳಿ: ಮಹಾನಗರದಲ್ಲಿ ಹೋಳಿ ಹಬ್ಬವನ್ನು ಮಾ. 18ರಿಂದ 22ರವರೆಗೆ ಆಚರಿಸಲಾಗುತ್ತಿದ್ದು, ಧಾರವಾಡದಲ್ಲಿ 19ರಂದು ಹಾಗೂ ಹುಬ್ಬಳ್ಳಿಯಲ್ಲಿ 22ರಂದು ರಂಗ ಪಂಚಮಿ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲೆಡೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತ ಲಾಭೂ ರಾಮ ಹೇಳಿದರು.

ಇಲ್ಲಿನ ಉಪನಗರ ಠಾಣೆ ಕಟ್ಟಡದ ಕ್ಯಾಂಪ್‌ ಆಫೀಸ್‌ನಲ್ಲಿ ಹೋಳಿ ಹಬ್ಬದ ನಿಮಿತ್ತ ಹು-ಧಾ ಪೊಲೀಸ್‌ ಕಮೀಷನರೇಟ್‌ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಶಾಂತಿ ಸೌಹಾರ್ದತೆ ಸಭೆಯಲ್ಲಿ ಅವರು ಮಾತನಾಡಿದರು.

ಹೋಳಿ ಹಬ್ಬದ ಅಂಗವಾಗಿ ಮಹೇಶ ಟೆಂಗಿನಕಾಯಿ ಮಾ.20ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ ಆಯೋಜಿಸಿದ್ದು, ಇದು ಮೂರು ಸಾವಿರ ಮಠದಿಂದ ಆರಂಭವಾಗಿ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಮರಳಿ ಶ್ರೀಮಠಕ್ಕೆ ಆಗಮಿಸಲಿದೆ. ಎಲ್ಲರೂ ಒಗ್ಗೂಡಿಕೊಂಡು ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು. ರತಿ-ಕಾಮಣ್ಣ ಮೆರವಣಿಗೆ ವೇಳೆ ಡಿಜೆ ಹಾಗೂ ಸೌಂಡ್‌ ಸಿಸ್ಟಮ್‌ ಬಳಸುವಂತಿಲ್ಲ. ನಿಗದಿಪಡಿಸಿದ ಮಾರ್ಗದಲ್ಲೇ ಆದಷ್ಟು ಬೇಗ ಮೆರವಣಿಗೆ ಮುಗಿಸಬೇಕು. ಯಾರ ಮೇಲೂ ಒತ್ತಾಯ ಪೂರ್ವಕವಾಗಿ ಬಣ್ಣ ಹಚ್ಚುವುದು, ಎರಚುವುದು ಮಾಡಬಾರದು. ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದರು.  ಪಾಲಿಕೆಯವರು ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು, ಪ್ರಮುಖ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕೆಲವರು, ಹಬ್ಬದ ವೇಳೆ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಬೇಕು. ಸರಿಯಾಗಿ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಹೇಳಿದರು. ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ, ಇಸ್ಲಾಂ ಧರ್ಮಗುರು ತಾಜುದ್ದೀನ ಖಾದ್ರಿ, ಕ್ರೈಸ್ತ ಧರ್ಮಗುರು, ಸಿಖ್‌ ಧರ್ಮಗುರು, ಅಂಜುಮನ್‌-ಏ-ಇಸ್ಲಾಂ ಸಂಸ್ಥೆ ಅಧ್ಯಕ್ಷ ಮೊಹಮ್ಮದ ಯುಸೂಫ ಸವಣೂರ, ಅಲ್ತಾಫ ಹಳ್ಳೂರ, ಬಿಜೆಪಿ ಮುಖಂಡ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯರು, ಹಿಂದೂ -ಮುಸ್ಲಿಂ ಸಮಾಜದ ಮುಖಂಡರು ಮೊದಲಾದವರಿದ್ದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.