ಸಮರ್ಪಕ ದಾಖಲೆ ಮಾಹಿತಿ ನೀಡಿ
ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Team Udayavani, Mar 17, 2022, 12:29 PM IST
ಬಳ್ಳಾರಿ: ಜಿಲ್ಲೆಯಲ್ಲಿನ ಎಲ್ಲ ತಾಲೂಕುವಾರು ಆಸ್ಪತ್ರೆಗಳಲ್ಲಿನ ಜನನ ಮತ್ತು ಮರಣ ದಾಖಲೆಗಳ ನೋಂದಣಿಗಳು, ಬೆಳೆಕಟಾವು ಪ್ರಯೋಗಗಳು, ಬೆಳೆ ಕ್ಷೇತ್ರಗಳ ಮರು ಹೊಂದಾಣಿಕೆ ಕುರಿತು ಸಮರ್ಪಕವಾದ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಸೂಚನೆ ನೀಡಿದ್ದಾರೆ. ನಗರದ ಡಿಸಿ ಕಚೇರಿ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜನನ ಮತ್ತು ಮರಣ ನೋಂದಣಿಯನ್ನು ಇ-ಜನ್ಮ ತಂತ್ರಾಂಶದಲ್ಲಿ 2015ರಿಂದ ನೋಂದಣಿ ಮಾಡಲಾಗುತ್ತಿದೆ. ಬಳ್ಳಾರಿಯಲ್ಲಿ ಮೊದಲ ಬಾರಿಗೆ 2019ರಿಂದ ಇ-ಜನ್ಮ ತಂತ್ರಾಂಶದಲ್ಲಿ ಡಿಜಿಟಲ್ ಸಹಿ ಮುಖಾಂತರ ಪ್ರಮಾಣಪತ್ರಗಳನ್ನು ನೀಡಲಾಗುತ್ತಿದ್ದು, ಯಾವುದೇ ಕಾರಣಕ್ಕೂ ಕೈಬರಹ ಪ್ರಮಾಣಪತ್ರಗಳು ನೀಡಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. 2019ರಿಂದ 2022ರವರೆಗಿನ ಜನನ ಮತ್ತು ಮರಣ ನೋಂದಣಿಗಳ ಇ-ತಂತ್ರಾಂಶದಲ್ಲಿ ನೋಂದಣಿ ಸಂಬಂಧಿಸಿದಂತೆ ವಾರದೊಳಗೆ ಮಾಹಿತಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಸಾಧಾರಣ ಮರಣ ಮತ್ತು ಕೋವಿಡ್‌ನಿಂದ ಮೃತಪಟ್ಟವರ ವರದಿ ಸಲ್ಲಿಸುವಂತೆಯೂ ಸೂಚಿಸಿದರು.
ಮುಂಗಾರು ಮತ್ತು ಹಿಂಗಾರು ಬೆಳೆಗಳ ಕಟಾವು ಸಂಬಂಧಿಸಿದಂತೆ ಕೈಗೊಂಡಿರುವ ಪ್ರಯೋಗಗಳು ಮತ್ತು ಅದರ ವರದಿಗಳು ಹಾಗೂ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಸಂಬಂಧಪಟ್ಟಂತೆ ಇತರೆ ಅಂಕಿ-ಅಂಶಗಳ ಕುರಿತು ಡಿಸಿ ಮಾಲಪಾಟಿ ಅವರು ಚರ್ಚಿಸಿ ಕೆಲ ಸಲಹೆ-ಸೂಚನೆಗಳನ್ನು ನೀಡಿದರು.
2021ನೇ ಸಾಲಿನಲ್ಲಿ ಜಿಲ್ಲೆಯ ಜನನ ದರ ಶೇ. 19.76 ಮತ್ತು ಮರಣ ಪ್ರಮಾಣ ದರ ಶೇ. 7.92 ಇದೆ. ಬಳ್ಳಾರಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಲ್ಲಿ 3264 ಜನನ, ಮನೆಗಳಲ್ಲಿ 109 ಮತ್ತು ವಿಳಂಬ ನೋಂದಣಿ 3090 ಸೇರಿದಂತೆ ಒಟ್ಟು 6463 ಜನನವಾಗಿವೆ. ಅದೇ ರೀತಿ ನಗರ ಪ್ರದೇಶದಲ್ಲಿ 12299 ಆಸ್ಪತ್ರೆಗಳಲ್ಲಿ ಮತ್ತು 36 ಮನೆಗಳಲ್ಲಿ,ವಿಳಂಬ ನೋಂದಣಿ 11717 ಸೇರಿದಂತೆ 24052 ಜನನವಾಗಿವೆ. ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಕಾರಣದಿಂದ 3360 ಮರಣ ನೋಂದಣಿ ದಾಖಲಾಗಿವೆ. ಈ ಸಭೆಯಲ್ಲಿ ಸಹಾಯಕ ಆಯುಕ್ತರಾದ ಡಾ| ಆಕಾಶ್ ಶಂಕರ್, ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.