ಪರಸ್ಪರ ಪ್ರೀತಿ-ವಿಶ್ವಾಸದಿಂದ ಹೋಳಿ ಹಬ್ಬ ಆಚರಿಸಿ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ

Team Udayavani, Mar 17, 2022, 2:16 PM IST

11

ಮಹಾಲಿಂಗಪುರ: ಹೋಳಿ ಹಬ್ಬವನ್ನು ಪರಸ್ಪರ ಪ್ರೀತಿ-ವಿಶ್ವಾಸದಿಂದ ಆಚರಿಸಿ ಸೌಹಾರ್ದತೆ ಮೆರೆಯಬೇಕು ಎಂದು ರಬಕವಿ-ಬನಹಟ್ಟಿ ತಾಲೂಕು ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ ಹೇಳಿದರು. ಮಹಾಲಿಂಗಪುರ ಠಾಣೆಯಲ್ಲಿ ಹೋಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ವಾರ್ನಿಸ್‌ ಹಾಗೂ ಇನ್ನಿತರ ರಾಸಾಯನಿಕ ಬಣ್ಣ ಉಪಯೋಗಿಸದೇ ನೈಸರ್ಗಿಕ ಬಣ್ಣಗಳನ್ನೇ ಬಳಸುವ ಮೂಲಕ ನೀರು ಕಲುಷಿತವಾಗುವುದನ್ನು ತಪ್ಪಿಸಬೇಕು. ಅಲ್ಲದೇ ಚರ್ಮ ರೋಗದಿಂದಲೂ ದೂರವಿರಬೇಕು ಎಂದರು.

ಮಕ್ಕಳ ವಿದ್ಯಾಭ್ಯಾಸ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಿತ, ಮಿತವಾಗಿ ಹಲಗೆ ಬಾರಿಸಿ. ಬೈಕ್‌ಗಳ ಸೈಲೆನ್ಸರ್‌ ತೆಗೆದು ಕರ್ಕಶ ಶಬ್ದದೊಂದಿಗೆ ಚಾಲನೆ ಮಾಡಬೇಡಿ. ಇದಕ್ಕೆ ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎರಡು ವರ್ಷಗಳಿಂದ ಕೊರೊನಾದಿಂದ ಎಲ್ಲ ಹಬ್ಬ-ಹರಿದಿನಗಳಿಗೆ ನಿಗದಿತ ಕಡಿವಾಣ ಹಾಕಲಾಗಿತ್ತು. ಈ ವರ್ಷ ಕಾಮದಹನದ ನಂತರ ಮಲ್ಲಯ್ಯನ ಕಂಬಿ ಜೊತೆ ಶ್ರೀಶೈಲಕ್ಕೆ ಪಾದಯಾತ್ರೆಗೆ ಹೋಗುವ ಭಕ್ತರಿಗೆ ಅನುವು ಮಾಡಿಕೊಡಬೇಕು. ಅಲ್ಲಲ್ಲಿ ಆಗುವ ಅಹಿತಕರ ಘಟನೆಗಳಿಗೆ ಆ ಪ್ರದೇಶದ ಜವಾಬ್ದಾರಿ ಹೊತ್ತ ವ್ಯಕ್ತಿಗಳೇ ಕಾರಣರಾಗುತ್ತಾರೆ. ಇದಕ್ಕೆ ಆಸ್ಪದ ಕೊಡದೇ ಸೌಹಾರ್ದತೆಯಿಂದ ಹಬ್ಬ ಆಚರಿಸಿ ಎಂದು ಸಲಹೆ ನೀಡಿದರು.

ಸಮುದಾಯ ಅಧಿಕಾರಿ ಸಿ.ಎಸ್‌. ಮಠಪತಿ ಪುರಸಭೆಯಿಂದ ಸ್ವತ್ಛತೆ ಹಾಗೂ ನೀರಿನ ವ್ಯವಸ್ಥೆ ಕುರಿತು ಮಾತನಾಡಿದರೆ, ಪಟ್ಟಣದ ಠಾಣಾಧಿಕಾರಿ ವಿಜಯ ಕಾಂಬ್ಳೆ ಪಟ್ಟಣದ ಭಾವೈಕ್ಯತೆಗೆ ಧಕ್ಕೆ ಬಾರದ ಹಾಗೆ ಹೋಳಿ ಆಚರಿಸುವಂತೆ ಸೂಚಿಸಿದರು.

ಈ ವೇಳೆ ಸ್ಥಾಯಿ ಸಮಿತಿ ಚೇರ್‌ಮನ್‌ ಸಜನಸಾಬ ಪೆಂಡಾರಿ, ಅಶೋಕ ಅಂಗಡಿ, ಚನಬಸು ಯರಗಟ್ಟಿ, ಶಿವು ಅಂಗಡಿ, ಉಸ್ಮಾನ್‌ ಪೆಂಡಾರಿ, ಸಿರಾಜ ಪಾಂಡು, ಭೀಮಶಿ ಗೌಂಡಿ, ಅರ್ಜುನ ದೊಡಮನಿ, ನಬೀಸಾಬ ಯಕ್ಸಂಬಿ, ಲಕ್ಷ್ಮಣ ಮಾಂಗ, ಸೈಯದ್‌ ನದಾಫ, ಈರಪ್ಪ ಚುನುಮುರಿ, ಪರಶುರಾಮ ಮೇತ್ರಿ, ಪಿಯೂಸ್‌ ಓಸವಾಲ್‌, ಸಿದ್ದಪ್ಪ ಭೂಸಣ್ಣವರ, ಹುಮಾಯೂನ್‌ ಸುತಾರ, ಜಯರಾಜ ಗಸ್ತಿ, ಮಹಾಲಿಂಗಪ್ಪ ಭಜಂತ್ರಿ, ಪುಂಡಲೀಕ ಗಡಿಕಾರ, ಯಾಸೀನ್‌ ಐನಾಪುರ, ಭೀಮಶಿ ಕಾಳವ್ವಗೋಳ, ಮಲ್ಲಪ್ಪ ನಾವಿ, ತಲಾಟಿ ಸಿ.ಎನ್‌. ಹೊಸಮನಿ, ಪರಶುರಾಮ ಲಾತೂರ, ಪೊಲೀಸ್‌ ಇಲಾಖೆಯ ಎಸ್‌.ಎಸ್‌. ಘಾಟಗೆ, ಪ್ರೊಬೇಷನರಿ ಪಿಎಸೈ ಬಸವರಾಜ ಎದ್ದಲಗುಡ್ಡ, ಜಗದೀಶ ಪಾಟೀಲ್‌, ವೈ.ವೈ. ಗಚ್ಚನ್ನವರ್‌ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.