‌ಕುಲಪತಿ ಹುದ್ದೆ ರದ್ದಾಗಿದ್ದರೂ ಕಾರ್ಯನಿವಹಣೆ

ಅಕ್ರಮವಾಗಿ ಹಳೆ ದಿನಾಂಕದಲ್ಲಿ ಫೈಲ್‌ಗ‌ಳಿಗೆ ಸಹಿ

Team Udayavani, Mar 18, 2022, 1:30 PM IST

1

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಹುದ್ದೆಯನ್ನು ಹೈಕೋರ್ಟ್‌ ರದ್ದುಗೊಳಿಸಿದ ನಂತರವೂ ಕುಲಪತಿ ಪ್ರೊ. ಕೆ.ಆರ್‌. ವೇಣುಗೋಪಾಲ್‌ ವಿಶ್ವವಿದ್ಯಾಲಯದ ತಮ್ಮ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ವಿವಿ ಸಿಂಡಿಕೇಟ್‌ ಸದಸ್ಯರು ಆರೋಪಿಸಿದರು. ನ್ಯಾಯಾಲಯದ ಆದೇಶ ಹೊರಬಿದ್ದ ನಂತರ ಗುರುವಾರ ಜ್ಞಾನಭಾರತಿ ಆವರಣದಲ್ಲಿರುವ ಆಡಳಿತ ಕಚೇರಿಯಲ್ಲಿ ಸಿಂಡಿಕೇಟ್‌ ಸದಸ್ಯರಾದ ಸುಧಾಕರ್‌, ಗೋಪಿನಾಥ್‌ ಮತ್ತು ಗೋವಿಂದರಾಜು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈಗಾಗಲೇ ಹೈಕೋರ್ಟ್‌ ತನ್ನ ಏಕಸದಸ್ಯಪೀಠ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಕುಲಪತಿ ನೇಮಕಾತಿ ಆದೇಶವನ್ನು ರದ್ದುಗೊಳಿಸಿದೆ. ಅದರ ಹೊರತಾಗಿಯೂ ಗುರುವಾರ ಪ್ರೊ. ವೇಣುಗೋಪಾಲ್‌ ಕಾರ್ಯ ನಿರ್ವಹಿಸುವ ಮೂಲಕ ಅಕ್ರಮವಾಗಿ ಹಳೆ ದಿನಾಂಕದಲ್ಲಿ ಫೈಲ್‌ಗ‌ಳಿಗೆ ಸಹಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕೂಡಲೇ ಪ್ರಭಾರ ನೇಮಕ ಮಾಡಲಿ: ವೇಣುಗೋಪಾಲ್‌ ಅವರ ಸ್ಥಾನವನ್ನು ರದ್ದುಗೊಳಿಸಿರುವುದರಿಂದ ರಾಜ್ಯ ಸರ್ಕಾರವು ಕೂಡಲೇ ಪ್ರಭಾರ ಕುಲಪತಿಯನ್ನು ನೇಮಿಸಬೇಕು. ಕಾರಣ, ಇದೇ ಮಾ.25ರಂದು ವಿಶ್ವವಿದ್ಯಾಲಯದ ಆರ್ಥಿಕತೆ ಸಂಬಂಧಿಸಿದ ಬಜೆಟ್‌ ಸಭೆ ಇದೆ. ನಂತರ ಏ.8ರಂದು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ನಿಗದಿಯಾಗಿದೆ. ಈ ಎಲ್ಲಾ ಕಾರಣಗಳಿಂದ ತುರ್ತಾಗಿ ಪ್ರಭಾರ ಕುಲಪತಿಯನ್ನು ನೇಮಕ ಮಾಡುವಂತೆ ಆಗ್ರಹಿಸಿದರು.

ರಾಜ್ಯಪಾಲರ ನಿರ್ದೇಶನದಂತೆ ನಡೆ: ಹೈಕೋರ್ಟ್‌ ಆದೇಶವನ್ನು ಗೌರವಿಸುತ್ತೇನೆ. ನ್ಯಾಯಾಲಯದ ಪ್ರತಿ ನನಗೆ ಇನ್ನೂ ಸಿಕ್ಕಿಲ್ಲ ಮತ್ತು ಏಕಾಏಕಿ ವಿಶ್ವವಿದ್ಯಾಲಯದ ಆಡಳಿತವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ. ಈ ವಿಚಾರವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆಗಿರುವ ರಾಜ್ಯಪಾಲರು ನನಗೆ ನಿರ್ದೇಶನ ನೀಡುವ ತನಕ ಕಾರ್ಯ ನಿರ್ವಹಿಸುತ್ತೇನೆ ಎಂದು ಪ್ರೊ. ಕೆ.ಆರ್‌. ವೇಣುಗೋಪಾಲ್‌ ತಿಳಿಸಿದರು. ಹೈಕೋರ್ಟ್‌ ತೀರ್ಪಿನ ಕುರಿತು ಸುಪ್ರೀಂಕೋರ್ಟಿಗೆ ಮೇಲ್ಮನವಿ ಹೋಗುತ್ತೇನೆ. ಆದರೆ, ಅದಕ್ಕೂ ಮೊದಲು ರಾಜ್ಯಪಾಲರ ನಿರ್ದೇಶನದಂತೆ ನಾನು ಕಾರ್ಯ ನಿರ್ವಹಿಸಬೇಕಿದೆ. ರಾಜ್ಯಪಾಲರು ಸೂಚಿಸುವ ವ್ಯಕ್ತಿಗೆ ಅಧಿಕಾರವನ್ನು ಹಸ್ತಾಂತರಿಸಿ, ನಂತರ ಅಧಿಕಾರದಿಂದ ನಿರ್ಗಮಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಡೆ:  ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದನ್ನು ಕಾನೂನು ತಜ್ಞರ ಅಭಿಪ್ರಾಯ ಪಡೆದು ನಿರ್ಧರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಮ ತಿಳಿಸಿದರು. ನ್ಯಾಯಾಲಯದ ತೀರ್ಪು ಮತ್ತು ಮುಂದಿನ ಕುಲಪತಿಗಳ ನೇಮಕಕ್ಕೂ ಮೊದಲು ಅನುಸರಿಸಬೇಕಾದ ನಿಯಮಗಳನ್ನು ತಿಳಿದು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.