ಮೇ 21 ಮತ್ತು 22ರಂದು ಶಿಕ್ಷಕರ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ
Team Udayavani, Mar 18, 2022, 3:16 PM IST
ಬೆಂಗಳೂರು: ಶಿಕ್ಷಕರ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆಯು ಮೇ 21 ಮತ್ತು 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾ.22 ರಿಂದ ಏ.22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ. ಆರರಿಂದ ಎಂಟು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.
ಇದನ್ನೂ ಓದಿ:ಪಾಕಿಸ್ತಾನ ಹಾರಿಸಿದ ಕ್ಷಿಪಣಿ ಗುರಿ ಮುಟ್ಟದೇ ಸಮೀಪದಲ್ಲೇ ಪತನ, ಅಲ್ಲಗಳೆದ ಪಾಕ್!
ಪರೀಕ್ಷೆಗೆ ಮೂರು ಪತ್ರಿಕೆಗಳು ಇರುತ್ತದೆ. ಮೊದಲ ಮತ್ತು ಎರಡನೇ ಪತ್ರಿಕೆ ತಲಾ 150 ಅಂಕಗಳು, ಮೂರನೇ ಪತ್ರಿಕೆ ನೂರು ಅಂಕ ಇರುತ್ತದೆ. ಎರಡನೇ ಪತ್ರಿಕೆ ಅರ್ಹತಾ ಅಂಕಗಳನ್ನು 50 ರಿಂದ 45 ಕ್ಕೆ ಮತ್ತು ಮೂರನೇ ಪತ್ರಿಕೆ 60ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ.
15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ – 23 ಮಾರ್ಚ್, 2022.
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22 ಏಪ್ರಿಲ್ 2022.
ಸಿಇಟಿ ಪರೀಕ್ಷೆ ದಿನಾಂಕ – ಮೇ ತಿಂಗಳ 21 ಮತ್ತು 22.@BSBommai@CMofKarnataka
— B.C Nagesh (@BCNagesh_bjp) March 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.