ಪಣಜಿಯಲ್ಲಿ ವೇಶ್ಯಾವಾಟಿಕೆ ಜಾಲಭೇದಿಸಿದ ಪೊಲೀಸರು, ನಟಿ ಸೇರಿದಂತೆ ಮೂವರ ರಕ್ಷಣೆ
ಗೋವಾ ಕ್ರೈಂ ಬ್ರ್ಯಾಂಚ್ ಪೊಲೀಸರು ಆರೋಪಿ ಬಂಧನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು
Team Udayavani, Mar 18, 2022, 3:42 PM IST
ಪಣಜಿ: ಗೋವಾದ ಪಣಜಿ ಸಮೀಪದ ಸಂಗೋಲ್ಡಾ ಗ್ರಾಮದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿದ ಕ್ರೈಂ ಬ್ರ್ಯಾಂಚ್ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲದೇ ನಟಿಯೊಬ್ಬರು ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪಾಕಿಸ್ತಾನ ಹಾರಿಸಿದ ಕ್ಷಿಪಣಿ ಗುರಿ ಮುಟ್ಟದೇ ಸಮೀಪದಲ್ಲೇ ಪತನ, ಅಲ್ಲಗಳೆದ ಪಾಕ್!
ಕ್ರೈ ಬ್ರ್ಯಾಂಚ್ ಬಿಡುಗಡೆಗೊಳಿಸಿರುವ ಪತ್ರಿಕಾ ಹೇಳಿಕೆಯಲ್ಲಿ, ಕಿರುತೆರೆ ನಟಿ ಸೇರಿದಂತೆ ಇಬ್ಬರು ಮುಂಬೈ ನಿವಾಸಿಗಳಾಗಿದ್ದು, ಮೂರನೇ ಮಹಿಳೆ ಹೈದರಾಬಾದ್ ನಿವಾಸಿಗಳಾಗಿದ್ದಾರೆ. ಮೂರನೇ ಮಹಿಳೆ ಹೈದರಾಬಾದ್ ನಿವಾಸಿ ಎಂದು ಮಾಹಿತಿ ನೀಡಿದೆ.
ಹಫೀಜ್ ಸೈಯದ್ ಬಿಲಾಲ್ ಎಂಬ ವ್ಯಕ್ತಿ ವೇಶ್ಯಾವಾಟಿಕೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದಾಗಿ ಕ್ರೈಂ ಬ್ರ್ಯಾಂಚ್ ಗೆ ಮಾಹಿತಿ ಬಂದಿತ್ತು. ಇದರ ಆಧಾರದ ಮೇಲೆ ಆರೋಪಿ ಸೆರೆಗೆ ಜಾಲ ಬೀಸಲಾಗಿತ್ತು.
ಮಾಹಿತಿಯನ್ನು ಪರಿಶೀಲಿಸಿದ ನಂತರ ಗೋವಾ ಕ್ರೈಂ ಬ್ರ್ಯಾಂಚ್ ಪೊಲೀಸರು ಆರೋಪಿ ಬಂಧನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಹೈದರಾಬಾದ್ ಮೂಲದ ಈ ವ್ಯಕ್ತಿ, ವೇಶ್ಯಾವಾಟಿಕೆಗಾಗಿ ಸಂಗೋಲ್ಡಾ ಗ್ರಾಮದಲ್ಲಿನ ಹೋಟೆಲ್ ವೊಂದನ್ನು ಬುಕ್ ಮಾಡಿದ್ದು, ಮೂವರು ಮಹಿಳೆಯರಿಗೆ 50,000ರೂಪಾಯಿ ಹಣದ ಒಪ್ಪಂದ ನಡೆದಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.