ಸಾಧಕಿಯರಿಗೆ ಅನುಪಮ ಸೇವಾರತ್ನ ಪ್ರಶಸ್ತಿ ಪ್ರಧಾನ

Team Udayavani, Mar 18, 2022, 5:24 PM IST

woman

ದಾವಣಗೆರೆ: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ನೇತೃತ್ವದಲ್ಲಿ ಮಾ.19ರಂದು ದಾವಣಗೆರೆಯ ಜಿಲ್ಲಾ ಗುರುಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಾಧಕಿಯರಿಗೆ ಅನುಪಮ ಸೇವಾ ರತ್ನ ಪ್ರಶಸ್ತಿ ಪುರಸ್ಕಾರ ಸಮಾರಂಭ ಮತ್ತು ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷೆ ಕಲ್ಪನಾ ರವೀಂದ್ರನಾಥ್‌ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾಯಕಯೋಗಿಗಳಾಗಿ ಚೈತನ್ಯ ಚಿಲುಮೆಗಳಾಗಿ ಸದಾ ಕ್ರಿಯಾಶೀಲತೆಯಿಂದ ಆದರ್ಶ ಸಮಾಜಕ್ಕೆ ಉತ್ತಮ ನಾಗರಿಕರ ಕೊಡುಗೆಯಾಗಿ ನೀಡುವ ಕೆಲಸದಲ್ಲಿ ತೊಡಗಿರುವ ಶಿಕ್ಷಕಿಯರ ಗುರುತಿಸಿ, ಪ್ರಶಸ್ತಿ ವಿತರಿಸಿ, ಗೌರವಿಸಿ ಗುಣಾತ್ಮಕ ಶಿಕ್ಷಣಕ್ಕೆ ಪ್ರೇರಣೆ ನೀಡುವ ಉದ್ದೇಶದೊಂದಿಗೆ ಸಂಘ ಅನೇಕ ಕಾರ್ಯಚಟುವಟಿಕೆ ನಡೆಸುತ್ತಿದೆ ಎಂದರು.

ಶನಿವಾರ ಬೆಳಗ್ಗೆ 11.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಸಮಾರಂಭ ಉದ್ಘಾಟಿಸಿವರು. ಸಂಘ ರಾಜ್ಯ ಸಂಸ್ಥಾಪಕ ಅಧ್ಯಕ್ಷೆ ಡಾ| ಲತಾ ಎಸ್‌. ಮುಳ್ಳೂರ ಆಶಯ ನುಡಿಗಳಾಡುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್‌. ಹೆಗಡೆ, ಮಹಿಳಾ ಸಬಲೀಕರಣ ಮತ್ತು ಕಾನೂನು ಅರಿವು ವಿಷಯದ ಕುರಿತು ಉಪನ್ಯಾಸ ನೀಡುವರು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಶಾಮನೂರು ಶಿವಶಂಕರಪ್ಪ, ಎಸ್‌. ವಿ. ರಾಮಚಂದ್ರ, ಎಸ್‌. ರಾಮಪ್ಪ, ಪ್ರೊ.ಎನ್‌. ಲಿಂಗಣ್ಣ, ವೈ.ಎ. ನಾರಾಯಣಸ್ನಾಮಿ, ಎಂ. ಚಿದಾನಂದಗೌಡ, ಮೇಯರ್‌ ಜಯಮ್ಮ ಗೋಪಿನಾಯ್ಕ, ಮಾಜಿ ಮೇಯರ್‌ ಬಿ.ಜಿ. ಅಜಯ್‌ ಕುಮಾರ್‌, ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ| ವಿಜಯ ಮಹಾಂತೇಶ್‌ ದಾನಮ್ಮನವರ್‌, ನಗರಪಾಲಿಕೆ ಆಯುಕ್ತ ವಿಶ್ವನಾಥ್‌ ಪಿ. ಮುದಜ್ಜಿ, ಡಿಡಿಪಿಐ ಜಿ.ಆರ್‌. ತಿಪ್ಪೇಶಪ್ಪ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್‌. ಹೆಗಡೆ ಒಳಗೊಂಡಂತೆ 10 ಜನರಿಗೆ ಅನುಪಮ ಸೇವಾರತ್ನ ಪ್ರಶಸ್ತಿ, ಮೂವರಿಗೆ ಜಿಲ್ಲಾ ಮಟ್ಟದ ಅನುಪಮ ಸೇವಾ ಶಿಕ್ಷಕಿ ಪ್ರಶಸ್ತಿ, ವಿವಿಧ ಸಂಘಟನೆ ಗಳಲ್ಲಿ ಪ್ರಥಮ ಮಹಿಳಾ ಅಧ್ಯಕ್ಷೆಯರಾಗಿರುವ ಮೂವರು ಶಿಕ್ಷಕಿಯರಿಗೆ, ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಉರ್ದು ಪ್ರಾಥಮಿಕ ವಿಭಾಗ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿಯರಿಗೆ ಜಿಲ್ಲಾಮಟ್ಟದ ಅನುಪಮ ಸೇವಾ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಒಟ್ಟಾರೆ 45 ಜನರಿಗೆ ಗೌರವಿಸಲಾಗುವುದು ಎಂದು ತಿಳಿಸಿದರು. ಸಂಘದ ಗೌರವ ಅಧ್ಯಕ್ಷೆ ಕೆ.ಜಿ. ಸೌಭಾಗ್ಯ, ಪ್ರಧಾನ ಕಾರ್ಯದರ್ಶಿ ಎಚ್‌.ಎಂ. ಮಂಗಳಾ, ಖಜಾಂಚಿ ಸಿ. ಪದ್ಮ, ಜ್ಯೋತಿ, ಡಿ. ಸರೋಜಮ್ಮ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.