ಮಸೀದಿ ಮುಂದೆಯೇ ಕೊಂಡೋತ್ಸವ

ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಉತ್ತಮ ನಿದರ್ಶನವಾಗಿರುವ ಜಿಲ್ಲೆಯ ಗಡಿ ತಾಳವಾಡಿ

Team Udayavani, Mar 18, 2022, 5:18 PM IST

9

ಚಾಮರಾಜನಗರ: ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಉತ್ತಮ ನಿದರ್ಶನವಾಗಿರುವ ಜಿಲ್ಲೆಯ ಗಡಿಭಾಗದ ತಮಿಳುನಾಡಿನ ತಾಳವಾಡಿ ಮಾರಮ್ಮ ದೇವಿಯ ಕೊಂಡೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿತು.

ಅಚ್ಚಕನ್ನಡ ಪ್ರದೇಶವಾದ ತಾಳವಾಡಿ ಪ್ರದೇಶ ಭಾಷಾವಾರು ಪ್ರಾಂತ್ಯ ವಿಂಗಡಣೆ ಸಂದರ್ಭದಲ್ಲಿ ತಮಿಳುನಾಡಿಗೆ ಸೇರಿಕೊಂಡಿದೆ. ಅಲ್ಲಿ ವಾಸಿಸುವ ಶೇ.99 ರಷ್ಟು ಮಂದಿ ಕನ್ನಡಿಗರು.

ತಾಳವಾಡಿಯಲ್ಲಿ ನಡೆಯುವ ಮಾರಮ್ಮ ದೇವಿಯ ಕೊಂಡೋತ್ಸವ ಬಹಳ ವಿಶೇಷವಾದುದು. ತಾಳವಾಡಿಯಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳವಾದ ಮಸೀದಿ ಹಾಗೂ ಹಿಂದೂಗಳ ದೈವವಾದ ಮಾರಮ್ಮನ ಗುಡಿ ಅಕ್ಕಪಕ್ಕದಲ್ಲೇ ಇವೆ. ಹೀಗಾಗಿ ಮಾರಮ್ಮನ ಕೊಂಡೋತ್ಸವ ಮಸೀದಿಯ ಮುಂದೆಯೇ ನಡೆಯುವುದು ವಿಶೇಷ. ಹೀಗಾಗಿ ಈ ಹಬ್ಬ ಎರಡೂ ಧರ್ಮದ ಜನರ ಸಾಮರಸ್ಯಕ್ಕೆ ಉತ್ತಮ ನಿದರ್ಶನವಾಗಿದೆ. ಕಳೆದ ಎರಡು ದಿನಗಳಿಂದ ವಿಶೇಷ ಪೂಜೆ ಹಾಗೂ ಇತರೆ ಕಾರ್ಯಕ್ರಮಗಳು ನಡೆದಿದ್ದವು. ಗುರುವಾರ ಬೆಳಗ್ಗೆ ಹೊಳೆಯ ದಡದಿಂದ ದೇವಾಲಯದವರೆಗೆ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಉದ್ದಕ್ಕೂ ನಾನಾ ಕಲಾಮೇಳಗಳು ಪಾಲ್ಗೊಂಡು ಮೆರಗು ನೀಡಿದವು. ನಂತರ ಮಾರಮ್ಮ ಗುಡಿ ಹಾಗೂ ಮಸೀದಿ ನಡುವೆ ಹಾಕಿದ್ದ ಕೊಂಡವನ್ನು ಅರ್ಚಕರು ಹಾಯುವ ಉತ್ಸವವನ್ನು ಸಾವಿರಾರು ಜನರು ವೀಕ್ಷಿಸಿದರು.

ಇದು ತಮಿಳುನಾಡಿನ ತಾಳವಾಡಿ ತಾಲೂಕಿನ ಹಲವು ಗ್ರಾಮದವರಿಗೆ ದೊಡ್ಡ ಹಬ್ಬ. ಸುಮಾರು 16 ಕೋಮಿನವರು ಒಗ್ಗೂಡಿ, ತಲಾ ಒಂದೊಂದು ಕಾರ್ಯದ ಹೊಣೆ ಹೊತ್ತು ಹಬ್ಬವನ್ನು ಆಚರಿಸುತ್ತಾರೆ. ವಿವಿಧೆಡೆ ಪಾನಕ, ಮಜ್ಜಿಗೆ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಶತಮಾನದ ಇತಿಹಾಸ: ತಾಳವಾಡಿಯ ಮಾರಮ್ಮ ದೇವಾಲಯ ಹಾಗೂ ಮಸೀದಿಗೆ ಶತಮಾನಗಳ ಇತಿಹಾಸವಿದೆ. ಟಿಪ್ಪು ಸುಲ್ತಾನ್‌ ಕಾಲದಲ್ಲೇ ಇಲ್ಲಿ ಮಸೀದಿ ಹಾಗೂ ವೇಣುಗೋಪಾಲಸ್ವಾಮಿ ದೇವಾಲಯ ನಿರ್ಮಾಣಗೊಂಡಿತ್ತು. ಅದೇ ವೇಳೆಯಲ್ಲಿ ಮಸೀದಿ ಪಕ್ಕದಲ್ಲೇ ಮಾರಮ್ಮ ದೇವಾಲಯವೂ ನಿರ್ಮಾಣಗೊಂಡಿದೆ. ಪುಟ್ಟದಾಗಿದ್ದ ಮಾರಮ್ಮ ದೇವಾಲಯವನ್ನು 15 ವರ್ಷಗಳ ಹಿಂದೆ ನವೀಕರಿಸಲಾಗಿದೆ. ಮಾರಿಗುಡಿ ಹಾಗೂ ಮಸೀದಿ ಅಕ್ಕಪಕ್ಕದಲ್ಲೇ ಇದ್ದು, ಅವಳಿ ಕಟ್ಟಡದಂತಿವೆ. ನೂರಾರು ವರ್ಷಗಳಿಂದಲೂ ಎರಡೂ ಧರ್ಮಗಳ ಸಾಮರಸ್ಯಕ್ಕೆ ಧರ್ಮ ಅಡ್ಡಿಯಾಗಿಲ್ಲ.

ಟಾಪ್ ನ್ಯೂಸ್

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.