ಶಾಲಾ ಪಠ್ಯದಲ್ಲಿ ಭಗವದ್ಗೀತೆ; ಶಿಕ್ಷಣ ಸಚಿವರ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
Team Udayavani, Mar 18, 2022, 9:04 PM IST
ಹಾಸನ: ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವರು ನೀಡಿರುವ ಹೇಳಿಕೆಯ ಬಗ್ಗೆ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ನಮ್ಮ ಮಕ್ಕಳಿಗೆ ಬೇಕಿರುವುದು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಶಿಕ್ಷಣ. ಮೊದಲು ಆ ಕಡೆ ಗಮನ ಕೊಡಿ” ಎಂದಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; “ಭಗವದ್ಗೀತೆಯನ್ನು ನಮ್ಮ ಕುಟುಂಬದಲ್ಲೇ ನಮ್ಮ ತಂದೆ-ತಾಯಿ, ಹಿರಿಯರು ಹೇಳಿಕೊಡುತ್ತಾರೆ. ಸರಕಾರದ ಕೆಲಸ ಏನಿದ್ದರೂ ಉತ್ತಮ ಶಿಕ್ಷಣ ನೀಡಿ ಮಕ್ಕಳ ಬದುಕನ್ನು ಕಟ್ಟಿಕೊಡುವುದು. ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಂಥ ವಿಚಾರಗಳು, ಪಠ್ಯಗಳು ಶಾಲೆಗಳಲ್ಲಿ ಇರಬೇಕು” ಎಂದರು.
ನಾನು ಹಿಂದೂ ಬಂಧುಗಳಲ್ಲಿ ಮನವಿ ಮಾಡುತ್ತೇನೆ, ನಾನು ಹುಟ್ಟಿರುವುದೂ ಹಿಂದೂ ಕುಟುಂಬದಲ್ಲೇ. ನಮ್ಮ ಕುಟುಂಬವು ದೈವದಲ್ಲಿ ಬಹಳ ನಂಬಿಕೆ ಇಟ್ಟು ಶ್ರದ್ಧೆಯಿಂದ ನಡೆದುಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಕೇವಲ ಮತಬ್ಯಾಂಕ್ʼಗಾಗಿ ಇಂತಹ ಸೂಕ್ಷ್ಮ ವಿಚಾರಗಳು ಮುನ್ನೆಲೆಗೆ ಬರುತ್ತಿವೆ. ಒಂದು ಕಾಲದಲ್ಲಿ ವಿದ್ಯೆ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೇರಿದ್ದು ಎನ್ನುವ ವಾತಾವರಣ ಇತ್ತು. ಇವತ್ತು ಅದೇ ವರ್ಗದ ಜನರೇ ಈ ರೀತಿಯ ವಾತಾವರಣ ಎಲ್ಲರ ಮೇಲೂ ಹೇರಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಮಕ್ಕಳು ತಮ್ಮ ಜ್ಞಾನ ಬೆಳೆಸಿಕೊಳ್ಳಲು, ಉತ್ತಮ ವಿದ್ಯಾಭ್ಯಾಸ ಮಾಡಲು ಸಾಕಷ್ಟು ನ್ಯೂನತೆಗಳಿವೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಮಸ್ಯೆಗಳಿವೆ. ಮೊದಲು ಅವುಗಳನ್ನು ಸರಿ ಮಾಡಬೇಕು. ಇದನ್ನು ಮಾಡುವುದು ಬಿಟ್ಟು ಸೂಕ್ಷ್ಮ ವಿಷಯಗಳನ್ನು ಕೆದಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಎಂದು ಭಗವದ್ಗೀತೆಯಲ್ಲಿ ಹೇಳಿದ್ದಾರಾ? ಭಗವದ್ಗೀತೆಯಲ್ಲಿ ಇರುವುದು ʼಧರ್ಮೋ ರಕ್ಷತಿ ರಕ್ಷಿತಃʼ ಎಂದು. ಅರ್ಜುನನು ಸಂಬಂಧಗಳ ವ್ಯಾಮೋಹಕ್ಕೆ ಸಿಲುಕಿ ಯುದ್ಧ ಮಾಡಲು ನಿರಾಕರಿಸಿ ಶಸ್ತ್ರ ತ್ಯಜಿಸಲು ಮುಂದಾದಾಗ ಶ್ರೀಕೃಷ್ಣ ಪರಮಾತ್ಮನು ಆತನ ಕರ್ತವ್ಯಗಳನ್ನು ನೆನಪಿಸುತ್ತಾನೆ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಷ್ಟೇ. ಕುಟುಂಬದಲ್ಲಿ ನೆಮ್ಮದಿ, ಸಾಮರಸ್ಯದ ಜೀವನ ಬೇಕು. ದೊಡ್ಡವರು ಚಿಕ್ಕವರೆನ್ನುವ ಗೌರವಭಾವನೆ ಬೇಕು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸಮಸ್ಯೆಗಳು ಸಾಕಷ್ಟು ಇವೆ. ರೈತರ ಕಷ್ಟಗಳು ದೊಡ್ಡ ಪ್ರಮಾಣದಲ್ಲಿ ಇವೆ. ಈ ಬಗ್ಗೆ ಸರಕಾರ ಗಮನ ಹರಿಸಲಿ ಎಂದು ಅವರು ಸಲಹೆ ಮಾಡಿದರು.
ಶಾಲೆ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಬಗ್ಗೆ ಮುಖ್ಯಮಂತ್ರಿಗಳ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದರು. ಗುಜರಾತ್ ಸರಕಾರ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುತ್ತಿದೆ ಎಂದು ಅವರು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.