ಯಶಸ್ವಿ ಕಾರ್ಯಾಚರಣೆ; ಮೂವರು ಕಳ್ಳರ ಬಂಧನ
Team Udayavani, Mar 19, 2022, 2:28 PM IST
ಮೊಳಕಾಲ್ಮೂರು: ಸಾರ್ವಜನಿಕರ ಅಜಾಗರೂಕತೆ ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ ಸರಣಿಗಳ್ಳರನ್ನು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಬಂಧಿಸಿದ್ದಾರೆ. ಪಟ್ಟಣದ ಕಟುಕರ ಬೀದಿಯ ಅಬ್ದುಲ್ ರೆಹಮಾನ್, ಭಾಗ್ಯಜ್ಯೋತಿ ನಗರದ ವಾಸಿಂ ಅಕ್ರಂ, ಮೊಬಾರಕ್ ಮೊಹಲ್ಲಾದ ಅಲ್ಲಾ ಬಕಾಷ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೊಬ್ಬ ಆರೋಪಿ ಕಲಗೋಡ್ ಮೊಹಲ್ಲಾದ ಉಮರ್ ಫಾರುಕ್ ತಲೆ ಮರೆಸಿಕೊಂಡಿದ್ದು, ಪತ್ತೆಗೆ ಜಾಲಬೀಸಲಾಗಿದೆ.
ಪಟ್ಟಣದಲ್ಲಿ ಬಹುದಿನಗಳಿಂದಲೂ ವಿವಿಧ ಬಡಾವಣೆಗಳಲ್ಲಿನ ಮನೆಗಳು ಹಾಗೂ ಸರ್ಕಾರಿ ಇಲಾಖಾ ಕಚೇರಿಗಳಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದವು. ಕಳ್ಳರು ತುಂಬಾ ಚಾಣಾಕ್ಷತನದಿಂದ ಯಾವುದೇ ಸುಳಿವು ಸಿಗದಂತೆ ಕಳ್ಳತನ ಮಾಡುವಲ್ಲಿ ನಿಪುಣರಾಗಿದ್ದರು. ಪಟ್ಟಣದ ಸರ್ಕಾರಿ ಕಚೇರಿಗಳು, ಶಾಲೆಗಳ ಕಂಪ್ಯೂಟರ್‌ಗಳ ಪರಿಕರಗಳು ಹಾಗೂ ಯಾರೂ ಇಲ್ಲದ ಮನೆಗಳೇ ಇವರ ಟಾರ್ಗೆಟ್ ಆಗಿದ್ದವು. ಬಹುದಿನಗಳ ಹಿಂದೆ ಪಟ್ಟಣದ ಹಾನಗಲ್ ರಸ್ತೆಯಲ್ಲಿ ರಾತ್ರಿ ವೇಳೆ ನಿಲುಗಡೆಯಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿನ 20 ಲೀಟರ್ ನಷ್ಟು ಡೀಸೆಲ್ ಅನ್ನು ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಮೊಳಕಾಲ್ಮೂರು ಪೊಲೀಸ್ ವೃತ್ತ ನಿರೀಕ್ಷಕ ಜಿ.ಬಿ. ಉಮೇಶ್ ಅವರ ಮಾರ್ಗದರ್ಶನದ ಮೇರೆಗೆ ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಎಂ.ಕೆ.ಬಸವರಾಜ್ ಹಾಗೂ ಸಿಬ್ಬಂದಿ ಕಳ್ಳರ ಸೆರೆಗೆ ಜಾಲ ಬೀಸಿದ್ದರು. ಪಟ್ಟಣದ ಈ ಸರಣಿಗಳ್ಳರನ್ನು ಪತ್ತೆ ಹಚ್ಚಲು ತಂತ್ರಜ್ಞಾನದಿಂದ ನಿರಂತರದ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ. ಎಎಸ್‌ಐಗಳಾದ ತಿಮ್ಮಣ್ಣ, ಜಯಪ್ಪ, ಹಾಗೂ ಸಿಬ್ಬಂದಿ ಶ್ರೀಧರ, ಬಾಷಾ, ಶಿವಕುಮಾರ್ ನಾಯಕ, ನರೇಶ್ ಕುಮಾರ್, ಪುರಂದರ, ರಮೇಶ್, ವೀರಣ್ಣ, ಭೀಮಣ್ಣ, ಮಂಜುನಾಥ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮೊಳಕಾಲ್ಮೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.