ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ
ನಾವು ಹಿಂದೂ ಧರ್ಮವನ್ನು ನಂಬುತ್ತೇವೆ
Team Udayavani, Mar 19, 2022, 5:38 PM IST
ಮಂಗಳೂರು: ”ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಕ್ರಮಕ್ಕೆ ನಮ್ಮ ಪಕ್ಷದ ವಿರೋಧವಿಲ್ಲ” ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ಶಾಲೆಗಳಲ್ಲಿ ಭಗವದ್ಗೀತೆ, ಖುರಾನ್ ಮತ್ತು ಬೈಬಲ್ ಅನ್ನು ಕಲಿಸಬಹುದು, ಈ ಕ್ರಮವನ್ನು ನಾವು ವಿರೋಧಿಸುವುದಿಲ್ಲ. ಪ್ರಸ್ತುತ ಗುಜರಾತ್ ಸರ್ಕಾರವು ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ನಮ್ಮ ಆದ್ಯತೆ. ನೈತಿಕ ಶಿಕ್ಷಣ ನೀಡುವುದು ಅವಶ್ಯಕ. ಆದರೆ ಅದು ಸಂವಿಧಾನಕ್ಕೆ ವಿರುದ್ಧವಾಗಿರಬಾರದು” ಎಂದಿದ್ದಾರೆ.
ಇದನ್ನೂ ಓದಿ : ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ: ಸಿ.ಟಿ.ರವಿ ಕಿಡಿ
”ಕಾಂಗ್ರೆಸ್ ಮೃದು ಹಿಂದುತ್ವ ಧೋರಣೆ ಅನುಸರಿಸುತ್ತಿದೆ” ಎಂಬ ಪ್ರಶ್ನೆಗೆ ಉತ್ತರಿಸಿ, ”ಪಕ್ಷವು ಎಲ್ಲಾ ಧರ್ಮಗಳ ಮೇಲೆ ಗೌರವ ಹೊಂದಿದೆ. ನಾವು ಹಿಂದೂ ಧರ್ಮವನ್ನು ನಂಬುತ್ತೇವೆ ಮತ್ತು ಯಾವುದೇ ಮೃದು ಅಥವಾ ಕಠಿಣ ಹಿಂದುತ್ವದ ವಿಧಾನವನ್ನು ಅನುಸರಿಸುತ್ತಿಲ್ಲ” ಎಂದರು.
ಯಾವ ಧರ್ಮದವರೂ ಕೋಮುವಾದ ಮಾಡಬಾರದು
ಹಿಜಾಬ್ ಕುರಿತಾಗಿನ ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ, ಕೋರ್ಟ್ ತೀರ್ಪು ವಿರೋಧಿಸಬಾರದು. ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಸಮಾನವಾಗಿ ಕಾಣುವ ಕೆಲಸ ಆಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.