ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ದೇಹ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಾನ
ಅವನು ಡಾಕ್ಟರ್ ಆಗಲಿಲ್ಲ. ಮುಂದೆ ಡಾಕ್ಟರ್ ಆಗುವವರಿಗೆ ಅನುಕೂಲ ಆಗಲಿ...
Team Udayavani, Mar 19, 2022, 6:15 PM IST
ದಾವಣಗೆರೆ: ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟಿರುವ ನವೀನ್ ಗ್ಯಾನಗೌಡರ ಶವವನ್ನು ದಾವಣಗೆರೆಯ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೀಡಲು ಪೋಷಕರು ಒಪ್ಪಿದ್ದಾರೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಶನಿವಾರ ಕನ್ನಡ ಕುವೆಂಪು ಭವನದಲ್ಲಿ ನಿವೃತ್ತ ಪ್ರಾಚಾರ್ಯ ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಸಹಸ್ರ ಚಂದ್ರದರ್ಶನ ಅಭಿನಂದನೆ ಮತ್ತು ರಂಗ ವಿಸ್ತಾರ.. ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್‍ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಉಕ್ರೇನ್‌ನಲ್ಲಿ ಮೃತಪಟ್ಟಿರುವ ನವೀನ್ ತಂದೆ ಶೇಖರಗೌಡರು ತಮಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ. ಸೋಮವಾರ(ಮಾ.21 ) ರಂದು ಚಳಗೇರಿಯಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಸ್ವಾಮೀಜಿ ತಿಳಿಸಿದರು.
ನನ್ನ ಮಗನನ್ನು ಡಾಕ್ಟರ್ ಮಾಡಬೇಕು ಅಂದುಕೊಂಡಿದ್ದೆ. ಆದರೆ, ಅವನು ಡಾಕ್ಟರ್ ಆಗಲಿಲ್ಲ. ಹಾಗಾಗಿ ಮುಂದೆ ಡಾಕ್ಟರ್ ಆಗುವವರಿಗೆ ಅನುಕೂಲ ಆಗಲಿ ಎಂದ ನವೀನ್ ಶವವನ್ನು ಆಸ್ಪತ್ರೆಗೆ ದಾನವಾಗಿ ನೀಡಬೇಕು ಎಂದು ಶೇಖರಗೌಡ ತಮಗೆ ತಿಳಿಸಿದ್ದಾರೆ. ಮಗನನ್ನ ಕಳೆದುಕೊಂಡ ನೋವಿನಲ್ಲೂ ದೇಹವನ್ನ ದಾನ ಮಾಡುವಂತಹ ಶೇಖರಗೌಡರ ಆಲೋಚನೆಗೆ ಎಲ್ಲರ ಪರವಾಗಿ ತಾವು ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಬಗ್ಗೆ ನಮ್ಮ ಮಠದ ಅನೇಕ ವಿದ್ಯಾರ್ಥಿಗಳು, ಪೋಷಕರು ನಮ್ಮ ಗಮನಕ್ಕೆ ತಂದರು. ಓರ್ವ ವಿದ್ಯಾರ್ಥಿಯ ಮೊಬೈಲ್ ನಂಬರ್ ಪಡೆದು ಆತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ವಿದೇಶಾಂಗ ಇಲಾಖೆಯಲ್ಲಿರುವ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಅವರ ಅಳಿಯ ಡಾ| ಶ್ರೀನಿವಾಸ್ ಅವರ ಮೂಲಕ ಉಕ್ರೇನ್ ಮತ್ತು ರಷ್ಯಾದ ವಿದೇಶಾಂಗ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ವಿದೇಶಾಂಗ ಇಲಾಖೆಯವರು ದಿನದ 24 ಗಂಟೆಯೂ ಕೆಲಸ ಮಾಡಿದ್ದಾರೆ. ರಷ್ಯಾ ಭಾರತದೊಂದಿಗೆ ಹೊಂದಿರುವ ಹಳೆಯ ಸಂಬಂಧದ ಫಲವಾಗಿ ವೈದ್ಯಕೀಯ ವಿದ್ಯಾರ್ಥಿ ಗಳು ಸುರಕ್ಷಿತವಾಗಿ ಬರಲು ಸಾಧ್ಯವಾಯಿತು ಎಂದು ತಿಳಿಸಿದರು.
ಯುದ್ಧಪೀಡಿತ ಪ್ರದೇಶದಲ್ಲಿದ್ದ ಭಾರತೀಯರು ಭಾರತದ ತ್ರಿವರ್ಣ ಧ್ವಜ ಇಟ್ಟುಕೊಂಡಿದ್ದ ಕಾರಣಕ್ಕೆ ಯಾವುದೇ ಅಪಾಯ ಆಗಲಿಲ್ಲ. ಭಾರತೀಯರು ಮಾತ್ರವಲ್ಲ ಪಾಕಿಸ್ಥಾನ, ನೇಪಾಳದವರು ಸಹ ಭಾರತದ ತ್ರಿವರ್ಣ ಧ್ವಜ ಇಟ್ಟುಕೊಂಡು ಸುರಕ್ಷಿತವಾಗಿ ವಾಪಾಸ್ಸಾಗಿದ್ದಾರೆ. ತ್ರಿವರ್ಣ ಧ್ವಜಕ್ಕೆ ಅಂತಹ ಶಕ್ತಿ ಇದೆ ಎಂದು ಸ್ವಾಮೀಜಿ ಹೆಮ್ಮೆ ವ್ಯಕ್ತಪಡಿಸಿದರು.
ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ, ಮಾ.21 ರಂದು ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.