ಒಂದೇ ತಿಂಗಳಲ್ಲಿ 25,000 ಸರ್ಕಾರಿ ಕೆಲಸ: ಪ್ರಸ್ತಾವನೆಗೆ ಪಂಜಾಬ್ ಸಂಪುಟ ಅನುಮೋದನೆ
Team Udayavani, Mar 20, 2022, 6:50 AM IST
ಚಂಡೀಗಢ: ಪಂಜಾಬ್ನ ಮುಖ್ಯಮಂತ್ರಿ ಭಗವಂತ ಮಾನ್ ಶನಿವಾರ ತಮ್ಮ ಸಚಿವ ಸಂಪುಟಕ್ಕೆ 10 ನೂತನ ಸಚಿವರುಗಳೊಂದಿಗೆ ಮೊದಲ ಸಭೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 25,000 ಕೆಲಸ ಸೃಷ್ಟಿಸಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪಂಜಾಬ್ ಪೊಲೀಸ್ ಇಲಾಖೆಯಲ್ಲಿ 10,000 ಕೆಲಸ ಮತ್ತು ಇತರೆ ಇಲಾಖೆಗಳಲ್ಲಿ ಒಟ್ಟು 15,000 ಕೆಲಸ ಸೃಷ್ಟಿಸಲು ಉದ್ದೇಶಿಸಲಾಗಿದೆ. ಒಂದು ತಿಂಗಳೊಳಗೆ ನೇಮಕಾತಿಯ ಬಗ್ಗೆ ಸೂಚನೆ ಹೊರಡಿಸಲು ಆದೇಶಿಸಲಾಗಿದೆ.
ಪ್ರಮಾಣ ವಚನ ಸ್ವೀಕಾರ: ಮುಖ್ಯಮಂತ್ರಿ ಸೇರಿ 18 ಸಚಿವ ಸ್ಥಾನವಿರುವ ಪಂಜಾಬ್ ವಿಧಾನಸಭೆಗೆ 10 ಸಚಿವರನ್ನು ಆಯ್ಕೆ ಮಾಡಲಾಗಿದ್ದು, ಅವರೆಲ್ಲರು ಶನಿವಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಸಂಪುಟದಲ್ಲಿ ಇಬ್ಬರು ಸಚಿವರು ಮಾತ್ರವೇ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದವರಾಗಿದ್ದಾರೆ. ಉಳಿದವರೆಲ್ಲರೂ ಮೊದಲನೇ ಬಾರಿ ಶಾಸಕರಾಗಿ ಚುನಾಯಿತರಾದವರು. ಸಂಪುಟದಲ್ಲಿ ಓರ್ವ ಮಹಿಳಾ ನಾಯಕಿಗೆ ಸಚಿವ ಸ್ಥಾನ ಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.