22 ದೇವಸ್ಥಾನಗಳ ಅಭಿವೃದ್ಧಿಗೆ 2 ಕೋಟಿ ಅನುದಾನ
ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
Team Udayavani, Mar 20, 2022, 12:37 PM IST
ಮೂಡಲಗಿ: ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ವಡೇರಹಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಜರುಗಿದ ಆಯಾ ಗ್ರಾಮದ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಕಾಳಜಿಯಿಂದ ನಮ್ಮ ಕ್ಷೇತ್ರದ ರಸ್ತೆಗಳ ಸುಧಾರಣೆ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 52 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದ್ದು, ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಸಂತೋಷ ಸೋನವಾಲ್ಕರ, ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ್ಮ, ಹನಮಂತ ತೇರದಾಳ, ಮುರಳಿ ವಜ್ರಮಟ್ಟಿ, ಬನಪ್ಪ ವಡೇರ, ವಿಠ್ಠಲ ಗಿಡೋಜಿ, ಅಡಿವೆಪ್ಪ ಹಾದಿಮನಿ, ಚಂದ್ರು ಮೋಟೆಪ್ಪಗೋಳ, ಲಕ್ಷ್ಮಣ ಮಸಗುಪ್ಪಿ, ಗೋಪಾಲ ಕುದರಿ, ದೇವಸ್ಥಾನಗಳ ಕಮೀಟಿ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.