ಪ್ರಾಣಿ ಬಲಿ ಕಾನೂನು ಬಾಹಿರ: ದಯಾನಂದ ಸ್ವಾಮೀಜಿ
Team Udayavani, Mar 20, 2022, 4:16 PM IST
ಚಳ್ಳಕೆರೆ: ಪ್ರತಿ ವರ್ಷ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ನಂತರ ಭಕ್ತರು ಸಂಪ್ರದಾಯವೆಂದು ಹೇಳಿ ಪ್ರಾಣಿ ಬಲಿ ಮಾಡುತ್ತಿರುವುದು ಕಾನೂನು ಬಾಹಿರ. ಜಿಲ್ಲಾಡಳಿತ ಕೂಡಲೇ ಪ್ರಾಣಿ ಬಲಿಯನ್ನು ತಡೆಯಬೇಕೆಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ರಾಜ್ಯಾಧ್ಯಕ್ಷ ದಯಾನಂದ ಸ್ವಾಮೀಜಿ ಒತ್ತಾಯಿಸಿದರು.
ಶನಿವಾರ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ನಡೆದ ಜಾಗೃತಿ ಜಾಥಾ ಸಂದರ್ಭದಲ್ಲಿ ಅವರು ಮಾತನಾಡಿದರು. ಪ್ರತಿ ವರ್ಷ ನಾಯಕನಹಟ್ಟಿ ಹಾಗೂ ಗೌರಸಮುದ್ರ ಜಾತ್ರೆಯಂದು ವಿಶ್ವ ಪ್ರಾಣಿ ಕಲ್ಯಾಣಮಂಡಳಿ ವತಿಯಿಂದ ಪ್ರಾಣಿ ಬಲಿ ತಡೆಯುವ ನಿಟ್ಟಿನಲ್ಲಿ ಜಾಥಾ ನಡೆಸಲಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ಕೆ ಸಹಕರಿಸಬೇಕು ಎಂದರು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಎನ್. ರಘುಮೂರ್ತಿ, ಜಿಲ್ಲಾಧಿಕಾರಿಗಳ ಸೂಚನೆಯಂತೆ ದೇವಸ್ಥಾನದ ಮೂರು ಕಿಮೀ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದೆ. ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕವಾಗಿ ಮನವಿ ಸಹ ಮಾಡಲಾಗಿದೆ. ನಾಯಕನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಟಾಂಟಾಂ ಮೂಲಕ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
ಡಿವೈಎಸ್ಪಿ ಕೆ.ವಿ. ಶ್ರೀಧರ್ ಮಾತನಾಡಿ, ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಾಗಲೇ ಪೋಸ್ಟರ್ ಗಳನ್ನು ಹಾಕಿ ಪ್ರಾಣಿ ಬಲಿ ನೀಡದಂತೆ ಭಕ್ತರಲ್ಲಿ ಮನವಿ ಮಾಡಲಾಗಿದೆ. ಪೊಲೀಸ್ ಇಲಾಖೆ ಜಾಗೃತವಾಗಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಿ ವಾಹನಗಳನ್ನು ಬಿಡಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತ ಬಂದೋಬಸ್ತ್ ಏರ್ಪಡಿಸಿದ್ದು, ಪ್ರಾಣಿ ಬಲಿಗೆ ಯತ್ನಿಸಿದವರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.