ಗಂಗೂರ ಗ್ರಾಮ ಮುಳುಗಡೆ ಘೋಷಣೆಗೆ ಆಗ್ರಹ
Team Udayavani, Mar 20, 2022, 5:38 PM IST
ಮುದ್ದೇಬಿಹಾಳ: ಗಂಗೂರ ಗ್ರಾಮದ ವರಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ತಹಶೀಲ್ದಾರ್ ಬಿ.ಎಸ್. ಕಡಕಭಾವಿ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಗ್ರಾಮಸ್ಥರ ಪರವಾಗಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ. ಮುದೂರ ಮಾತನಾಡಿ, ಸದಾ ಪ್ರವಾಹ ಭೀತಿಯಿಂದ ತತ್ತರಿಸುತ್ತಿರುವ ಗಂಗೂರ ಗ್ರಾಮವನ್ನು ಸಂಪೂರ್ಣ ಮುಳುಗಡೆ ಗ್ರಾಮ ಎಂದು ಘೋಷಿಸುವಂತೆ ಒತ್ತಾಯಿಸಿದರು.
ಗಂಗೂರ ಮತ್ತು ಸುತ್ತಲಿನ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಒಟ್ಟು 126 ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ ಇಲಾಖೆಯ 8 ಅರ್ಜಿಗಳನ್ನು ಮಂಜೂರಾತಿ ಮಾಡಿ ತಹಶೀಲ್ದಾರ್ ಆದೇಶ ಪತ್ರ ನೀಡಿದರು.
ಆಹಾರ ಇಲಾಖೆಯ 11 ಅರ್ಜಿಗಳಲ್ಲಿ 9 ಅರ್ಜಿಗಳನ್ನು ಮಂಜೂರು ಮಾಡಲಾಯಿತು. ಭೂ ಮಾಪನ ಮತ್ತು ಭೂ ದಾಖಲೆ ಇಲಾಖೆಗೆ 7, ತಾಲೂಕು ಪಂಚಾಯತಿಗೆ 37, ಕೃಷಿ ಇಲಾಖೆಗೆ 40, ಶಿಕ್ಷಣ ಇಲಾಖೆಗೆ 3, ಸಮಾಜ ಕಲ್ಯಾಣ ಇಲಾಖೆಗೆ 4, ಸಿಡಿಪಿಒ ಇಲಾಖೆ ಮತ್ತು ಸಾರಿಗೆ ಸಂಸ್ಥೆಗೆ ತಲಾ 1, ಪಿಡಬ್ಲ್ಯುಡಿಗೆ 4, ತೋಟಗಾರಿಕೆ ಇಲಾಖೆಗೆ 10 ಅರ್ಜಿಗಳು ಪ್ರತ್ಯೇಕವಾಗಿ ಸಲ್ಲಿಕೆಯಾದವು. ಒಟ್ಟಾರೆ 17 ಅರ್ಜಿಗಳಿಗೆ ಸ್ಥಳದಲ್ಲೇ ಮಂಜೂರಾತಿ ನೀಡಿ 2 ಅರ್ಜಿಗಳನ್ನು ತಿರಸ್ಕರಿಸಲಾಯಿತು. ಇನ್ನುಳಿದ ಅರ್ಜಿಗಳಿಗೆ ಆಯಾ ಇಲಾಖೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ವಿಲೇ ಮಾಡುವಂತೆ ತಹಶೀಲ್ದಾರ್ ಸೂಚಿಸಿದರು.
ಬಹಿರಂಗ ಸಭೆ ನಂತರ ತಹಶೀಲ್ದಾರ್ ಬಿ.ಎಸ್. ಕಡಕಭಾವಿ, ತಾಪಂ ಇಒ ಶಿವಾನಂದ ಹೊಕ್ರಾಣಿ, ಸಿಡಿಪಿಒ ರಾಮದುರ್ಗ ಅವರು ಸ್ಥಳೀಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯವೈಖರಿ, ಮಕ್ಕಳಿಗೆ ಕೊಡುತ್ತಿರುವ ಮೊಟ್ಟೆಗಳು ಮುಂತಾದವುಗಳನ್ನು ಪರಿಶೀಲಿಸಿದರು. ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರತಿನಿ ಧಿಗಳು, ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಪ್ರವಾಹ ಬಂದಾಗಲೊಮ್ಮೆ ಗಂಗೂರ ಜನರು ಆತಂಕದಲ್ಲಿ ಬದುಕಬೇಕಿದೆ. ರಾಜೀವ್ ಗಾಂಧಿ ವಸತಿ ನಿಗಮದಿಂದ ಈಗಾಗಲೇ 44 ಮನೆ ಮಂಜೂರಿಸಿ ತೀವ್ರ ಬಾಧಿತ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಆದರೆ ಹಳೆ ಊರಿನ ಜನರು ಪ್ರವಾಹದ ಸಂದರ್ಭ ಕಾಲರಾ ಸಹಿತ ಸಾಂಕ್ರಾಮಿಕ ರೋಗಗಳಿಗೆ ಈಗಲೂ ತುತ್ತಾಗುತ್ತಿದ್ದಾರೆ. ಅಧಿಕಾರಿಗಳು ಕೂಡಲೆ ಮುಳುಗಡೆ ಘೋಷಣೆಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. -ಡಿ.ಬಿ. ಮುದೂರ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.