ಸಾಮಾಜಿಕ ಹಿತ ಚಿಂತನೆ ಯುವಕರಿಗೆ ಮುಖ್ಯ : ಸಚಿವ ಕೋಟ ಅಭಿಮತ
Team Udayavani, Mar 20, 2022, 9:23 PM IST
ವಕ್ವಾಡಿ : ಸ್ವಾಸ್ಥ್ಯ ಸಮಾಜಕ್ಕೆ ಪ್ರಜ್ಞಾವಂತ ಯುವಕರ ಪಾಲು ಮಹತ್ತರವಾದದ್ದು. ಊರಿನ ಸಮಗ್ರ ಅಭಿವೃದ್ಧಿಗಾಗಿ ಯುವಕರು ದುಡಿಯಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಯುವಶಕ್ತಿ ಮಿತ್ರ ಮಂಡಲಿ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಇದರ ಬೆಳ್ಳಿ ಹಬ್ಬದ ಪ್ರಯಕ್ತ ಹಮ್ಮಿಕೊಂಡ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಪಂಚದ ಯಾವುದೇ ದೇಶಗಳಲ್ಲೂ ಇಲ್ಲದಷ್ಟು ಯುವಶಕ್ತಿ ನಮ್ಮ ದೇಶದಲ್ಲಿದೆ. ಯುವ ಪೀಳಿಗೆಯಲ್ಲಿರುವ ಧನಾತ್ಮಕ ಚಿಂತನೆಗಳನ್ನು ದೇಶಕ್ಕೆ ಮತ್ತು ಸಮಾಜಕ್ಕೆ ಪೂರಕವಾಗಿ ಬಳಕೆ ಮಾಡಿಕೊಳ್ಳುವುದೇ ಸಂಘಟನೆಯ ಧೋರಣೆಯಾಗಬೇಕು. ಯುವಶಕ್ತಿ ಮಿತ್ರಮಂಡಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸಮಾಜಿಕ ಜವಾಬ್ದಾರಿ ವಹಿಸಿಕೊಂಡು ಬಂದಿದೆ. ಸಂಸ್ಥೆ ಸೂರ್ಯ ಚಂದ್ರರಿರುವ ಕಾಲದವರೆಗೂ ಸಮಾಜದ ಧ್ವನಿಯಾಗಿರಲಿ ಎಂದು ಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಲೇಖಕ ಸತೀಶ್ ಶೆಟ್ಟಿ ವಕ್ವಾಡಿ ಅವರಿಗೆ ಯುವಸ್ಪೂರ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ : ಮರೆಯಾದ ಕುಶಲಕರ್ಮಿ, ಪಾರಿಜಾತ ಕಲಾವಿದ, ನಾಟಿ ವೈದ್ಯ ಚಿದಾನಂದ ಬಡಿಗೇರ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳಾವಾರ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಶೆಟ್ಟಿ ವಹಿಸಿದ್ದರು. ಸಭಾಕಾರ್ಯಕ್ರಮದಲ್ಲಿ ಭೂ ಅಭಿವೃದ್ಧಿ ಬ್ಯಾಂಕ್, ಕುಂದಾಪುರದ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಕಿಶೋರ್ ಕುಮಾರ್, ಜನಪ್ರತಿನಿಧಿ ಪತ್ರಿಕೆಯ ಸಂಪಾದಕ ಸುಬ್ರಹ್ಮಣ್ಯ ಪಡುಕೋಣೆ, ಪ್ರಸಾದ್ ನೇತ್ರಾಲಯ ಉಡುಪಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಮೋಹನದಾಸ್, ಮಿತ್ರ ಸಂಗಮ ಬಿಜಾಡಿ-ಗೋಪಾಡಿಯ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯ ದಿವಂಗತ ರವಿಚಂದ್ರ ಕುಲಾಲ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಸಂಸ್ಥೆಯ ಗೌರವಾಧ್ಯಕ್ಷ ರಂಜಿತ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಶ್ರೀರಾಜ್ ವಕ್ವಾಡಿ, ರಾಕೇಶ್ ಶೆಟ್ಟಿ ನಿರೂಪಿಸಿ, ಸಂಸ್ಥೆಯ ಅಧ್ಯಕ್ಷ ಸುಧೀಂದ್ರ ವಕ್ವಾಡಿ ವಂದಿಸಿದರು.
ನೇತ್ರದಾನವೆಂಬ ಜಗಬೆಳಗುವ ಪ್ರತಿಜ್ಞೆ
ಸಂಸ್ಥೆಯ ರಜತ ಸಂಭ್ರಮದ ಅಂಗವಾಗಿ ಸಂಸ್ಥೆ ನೇತ್ರದಾನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಿತ್ತು. ಸಂಸ್ಥೆಯ ಸದಸ್ಯರು, ಊರಿನವರು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಿ ಸ್ಪೂರ್ತಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.