ಸಂಸ್ಕೃತಿ, ಸಾಹಿತ್ಯದ ಸಂಭ್ರಮಾಚರಣೆ ಆರೋಗ್ಯಪೂರ್ಣ ಸಮಾಜದ ಹೆಗ್ಗುರುತು: ಟಿ.ವಿ. ಮೋಹನದಾಸ ಪೈ


Team Udayavani, Mar 21, 2022, 6:05 AM IST

ಸಂಸ್ಕೃತಿ, ಸಾಹಿತ್ಯದ ಸಂಭ್ರಮಾಚರಣೆ ಆರೋಗ್ಯಪೂರ್ಣ ಸಮಾಜದ ಹೆಗ್ಗುರುತು: ಟಿ.ವಿ. ಮೋಹನದಾಸ ಪೈ

ಮಂಗಳೂರು: ಯಾವುದೇ ಸಮುದಾಯ ಮುಂದುವರಿದ ಸಮಾಜ ಎನಿಸಬೇಕಾದಲ್ಲಿ ತನ್ನ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಮತ್ತು ಅದಕ್ಕಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸುವ ಕೆಲಸ ಮಾಡಬೇಕು ಎಂದು ಮಣಿಪಾಲ್‌ ಗ್ಲೋಬಲ್‌ ಎಜುಕೇಶನ್‌ ಅಧ್ಯಕ್ಷ ಟಿ.ವಿ. ಮೋಹನದಾಸ ಪೈ ಹೇಳಿದ್ದಾರೆ.

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಕೊಂಕಣಿ ಭಾಸ್‌ ಆನಿ ಸಂಸ್ಕೃತಿ ಪ್ರತಿಷ್ಠಾನ ಆಶ್ರಯದಲ್ಲಿ ರವಿವಾರ ಜರಗಿದ ವಾರ್ಷಿಕ ವಿಶ್ವ ಕೊಂಕಣಿ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಸಮ್ಮಾನಿತರನ್ನು ಆನ್‌ಲೈನ್‌ ಮೂಲಕ ಅಭಿನಂದಿಸಿ ಅವರು ಮಾತನಾಡಿದರು.

ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ, ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ್‌ ಹಾಗೂ ಬಸ್ತಿ ವಾಮನ ಶೆಣೈ ಸೇವಾ ಪುರಸ್ಕಾರಗಳನ್ನು ಪ್ರದಾನ ಮಾಡಿದ ಜ್ಞಾನಪೀಠ ಪುರಸ್ಕೃತ‌ ಕೊಂಕಣಿ ಸಾಹಿತಿ ದಾಮೋದರ ಮೌಜೊ ಅವರು ಮಾತನಾಡಿ, ತನ್ನ ಕಾದಂಬರಿ “ಸುನಾಮಿ ಸೈಮನ್‌’ಗೆ 2012ರಲ್ಲಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭವನ್ನು ಸ್ಮರಿಸಿ ಈ ಪ್ರಶಸ್ತಿಯಿಂದ ದೊರಕಿದ ಸ್ಫೂರ್ತಿಯಿಂದ ತನ್ನ ಸಾಹಿತ್ಯ ಕೃಷಿಯಲ್ಲಿ ವಿಶೇಷವಾದ ಸೇವೆ ಸಾಧ್ಯವಾಯಿತು. ಇದರಿಂದಲೇ ತನಗೆ ದೇಶದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ ಸೇರಿದಂತೆ ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೊರಕಲು ಸಾಧ್ಯವಾಯಿತು ಎಂದರು.

ಪ್ರಶಸ್ತಿ ಪ್ರದಾನ
2021ನೇ ಸಾಲಿನ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರವನ್ನು “ಮಾಸಾಂ’ ಕಥಾ ಸಂಕಲನಕ್ಕಾಗಿ ಆಂಟನಿ ಬಾಕೂìರ್‌ ಅವರಿಗೆ, ಇಂದ್ರಧೊಣು ಉದೇಂವ್‌ ಕೊಂಕಣಿ ಕವಿತಾ ಸಂಕಲನಕ್ಕಾಗಿ ಕವಿ ಉದಯ್‌ ಮ್ಹಾಂಬರೋ ಅವರಿಗೆ ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿಗೆ ಜೀವಮಾನದ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನವನ್ನು ಕೊಂಕಣಿ ವ್ಯಾಕರಣ ಮತ್ತು ನಿಘಂಟುಕಾರ ಸುರೇಶ ಜಯವಂತ ಬೋರಕಾರ್‌ ಅವರಿಗೆ ನೀಡಲಾಯಿತು.

ಸಮಾಜ ಸೇವೆ ಸಲ್ಲಿಸಿದ ಕೊಂಕಣಿ ಸಾಧಕರಿಗೆ ಕೊಡಮಾಡುವ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಪುರಸ್ಕಾರವನ್ನು ನಿರ್ಗತಿಕರ ಸೇವೆಗೆ ಮುಡಿಪಾಗಿಟ್ಟ ವೈಟ್‌ಡೊವ್‌ ಸಂಸ್ಥೆಯ ಮುಖ್ಯಸ್ಥೆ ಕೊರೀನ್‌ ಎ. ರಸಿVನ್ಹಾ ಅವರಿಗೆ ನೀಡಲಾಯಿತು. ಕಾರ್ಡಿಯಾಲಜಿ ಎಟ್‌ ಡೋರ್‌ ಸ್ಟೆಪ್‌ ಸಂಸ್ಥೆಯ ಮೂಲಕ ಹಳ್ಳಿ ಹಳ್ಳಿಗಳಿಗೆ ಹೃದ್ರೋಗ ರೋಗ ಪತ್ತೆ ವ್ಯವಸ್ಥೆಯನ್ನು ತಲುಪಿಸುತ್ತಿರುವ ಡಾ| ಪದ್ಮನಾಭ ಕಾಮತ್‌ ಅವರಿಗೆ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ನೀಡಲಾಯಿತು. ಈ ಎಲ್ಲ ಪ್ರಶಸ್ತಿಗಳೂ ತಲಾ 1 ಲಕ್ಷ ರೂ. ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿವೆ.

ಕೊಂಕಣಿ ಭಾಸ್‌ ಆನಿ ಸಂಸ್ಕೃತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಸ್ವಾಗತಿಸಿದರು. ಜ್ಞಾನಪೀಠದ ಗರಿಮೆಯಿಂದ ಕೊಂಕಣಿ ಸಾಹಿತ್ಯದ ಕೀರ್ತಿಯನ್ನು ಉತ್ತುಂಗ ಕ್ಕೇರಿಸಿದಕ್ಕೋಸ್ಕರ ದಾಮೋದರ ಮೌಜೊ ಅವರನ್ನು ನಂದಗೋಪಾಲ ಶೆಣೈಯವರು ಟೆಂಪಲ್ಸ್‌ ಆಫ್‌ ಗೋವಾ ಕಾಫಿ ಟೇಬಲ್‌ ಪುಸ್ತಕವನ್ನು ನೀಡಿ ಅಭಿನಂದಿಸಿದರು.

ಟ್ರಸ್ಟಿಗಳಾದ ಮೆಲ್ವಿನ್‌ ರಾಡ್ರಿಗಸ್‌, ಪಯ್ಯನೂರು ರಮೇಶ ಪೈ, ಗಿಲ್ಬರ್ಟ್‌ ಡಿ’ಸೋಜಾ, ಬಿ.ಆರ್‌. ಭಟ್‌ ಮತ್ತು ಡಾ| ಕಿರಣ್‌ ಬುಡ್ಕುಳೆ ಅವರುಪ್ರಶಸ್ತಿ ವಿಜೇತರನ್ನು ಪರಿಚಯಿಸಿದರು. ಅಕಾಡೆಮಿ ಅಧ್ಯಕ್ಷ ಡಾ| ಕೆ. ಜಗದೀಶ ಪೈ, ವಿಶ್ವಕೊಂಕಣಿ ಕೇಂದ್ರದ ರಮೇಶ್‌ ನಾಯಕ್‌, ಶಕುಂತಳಾ ಕಿಣಿ, ಗುರುದತ್‌ ಬಂಟ್ವಾಳ್‌ಕಾರ್‌, ಸಿ.ಡಿ. ಕಾಮತ್‌ ಉಪಸ್ಥಿತರಿದ್ದರು.

ಕೊಂಕಣಿ ಭಾಸ್‌ ಆನಿ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯದರ್ಶಿ ಗಿರಿಧರ ಕಾಮತ್‌ ವಂದಿಸಿದರು. ಸ್ಮಿತಾ ಶೆಣೈ ನಿರೂಪಿಸಿದರು.

ಟಾಪ್ ನ್ಯೂಸ್

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.