ಭೀಮಪಲಾಸ ಸಂಗೀತ ಮಹೋತ್ಸವ ಆರಂಭ

ಸಂಗೀತ ಕೇಳುವುದರಿಂದ ಆರೋಗ್ಯ ಸುಧಾರಣೆ

Team Udayavani, Mar 21, 2022, 10:57 AM IST

4

ಧಾರವಾಡ: ಭಾರತೀಯ ಸಂಗೀತಕ್ಕೆ ಭದ್ರ ಬುನಾದಿ ಹಾಗೂ ಭವಿಷ್ಯ ಇದ್ದು, ಸಂಗೀತದಲ್ಲಿನ ವಿವಿಧ ರಾಗಗಳ ಆಲಿಸುವುದರಿಂದ ರೋಗಗಳು ವಾಸಿ ಆಗಲಿವೆ ಎಂಬ ಮಾತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಭಾರತರತ್ನ ಪಂ|ಭೀಮಸೇನ ಜೋಶಿ ಜನ್ಮಶತಮಾನೋತ್ಸವ ಪ್ರಯುಕ್ತ ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ಟ್‌, ಹುಬ್ಬಳ್ಳಿ ಕ್ಷಮತಾ ಸಂಸ್ಥೆಗಳು ಹಮ್ಮಿಕೊಂಡಿರುವ 11 ದಿನಗಳ ಸಂಗೀತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಇದೀಗ ಸಂಗೀತ ಥೆರಪಿ ಸಹ ಶುರುವಾಗಿದೆ. ಈ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳು ನಡೆಯಬೇಕು ಎಂದರು.

ಪಂಡಿತ ವಿಷ್ಣು ಭಾತಕಂಡೆ ಅವರು ಅನಂತ ರಾಗಗಳನ್ನು ಸೇರಿಸಿ ಬರೆದ ಹಿಂದೂಸ್ತಾನಿ ಸಂಗೀತ ಪದ್ಧತಿ ಎಂಬ ಗ್ರಂಥ ಇಂದಿಗೂ ಹಿಂದೂಸ್ತಾನಿ ಸಂಗೀತಕ್ಕೆ ಆಧಾರವಾಗಿದೆ. ಸಂಗೀತದ ಪ್ರತಿಯೊಂದು ರಾಗಗಳಿಗೂ ನಿಯಮಗಳಿವೆ. ಅವುಗಳನ್ನು ಕೇಳುವುದರಿಂದಲೂ ಮನುಷ್ಯನ ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ. ಹೀಗಾಗಿ ಸಂಗೀತದ ರಾಗಗಳ ಮೇಲೆ ಸಂಶೋಧನೆ ಆಗಬೇಕು. ನಮ್ಮ ಸಂಗೀತ, ಯೋಗ, ಜೀವನ ಪದ್ಧತಿಗೆ ದೇಶದಲ್ಲಿ ದೊಡ್ಡ ಬೆಲೆ ಇದೆ. ಜಗತ್ತಿನ ಅನೇಕ ದೇಶದ ಜನರು ಅಧ್ಯಯನ ಮಾಡುತ್ತಿದ್ದು, ಇದು ಹೆಮ್ಮೆಯ ಸಂಗತಿ ಎಂದರು. ಸಂಗೀತಕ್ಕೆ ಹೊಸ ವಿಧಾನ ಮತ್ತು ಆಯಾಮ ತಂದು ಕೊಟ್ಟ ಭಾರತರತ್ನ ಪಂ|ಭೀಮಸೇನ ಜೋಶಿ ಅವರಿಂದ ಮರಾಠಿ ಅಭಂಗ, ದಾಸವಾಣಿ ಸಾಕಷ್ಟು ಪ್ರಸಿದ್ಧಿ ಪಡೆದವು. ಈ ಸಾಧನೆಗೆ ಹಿನ್ನೆಲೆ ಬೇಕಿಲ್ಲ ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ. ಮನೆ ಕೆಲಸದೊಂದಿಗೆ ಸಂಗೀತ ಕಲಿತು ಸಾಧನೆ ಮಾಡಿದ ಅವರು ಸಂಗೀತ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿ ಉಳಿಸಿದ್ದಾರೆ. ಮನುಷ್ಯನಲ್ಲಿ ಕಲಿಕೆಯ ಆಸಕ್ತಿ ಇದ್ದರೆ ಜೀವನದಲ್ಲಿ ಯಾವ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ಇವರೇ ಸಾಕ್ಷಿ ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ರಾಜ್ಯ ಸರ್ಕಾರದಿಂದ ಭೀಮಸೇನ ಜೋಶಿ ಶತಮಾನೋತ್ಸವ ನಿಮಿತ್ತ 3 ದಿನದ ಸಮಾರಂಭ ಆಯೋಜಿಸಲು ಸಿಎಂಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಅವರು ಒಂದು ವಾರದ ಕಾರ್ಯಕ್ರಮ ನಡೆಸಲು ಸೂಚಿಸಿ, ಬಜೆಟ್‌ನಲ್ಲಿ ಅನುದಾನ ಸಹ ನೀಡಿದ್ದಾರೆ. ಸಾಹಿತ್ಯ, ಕಲಾಭಿಮಾನಿಗಳ ತವರೂರಾದ ಧಾರವಾಡಕ್ಕೆ ಲಲಿತ ಕಲಾ ಅಕಾಡೆಮಿ ಬಂದಿದೆ. ಕಲಾ ಗ್ರಾಮಕ್ಕೆ ಜಾಗೆ ಹುಡುಕುತ್ತಿದ್ದು, ಶೀಘ್ರದಲ್ಲೇ ನಿಗದಿ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಭೀಮಫಲಾಸ್‌ ಸಂಗೀತ ಕಾರ್ಯಕ್ರಮಕ್ಕೆ ಸಹಕಾರ ನೀಡಿದವರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ನವದೆಹಲಿಯ ಪಂ|ರಾಜೇಂದ್ರ ಪ್ರಸನ್ನ ಬಾನ್ಸುರಿ ವಾದನ ಪ್ರಸ್ತುತಪಡಿಸಿದರೆ, ಮಧ್ಯಾಹ್ನ ಪಂ| ಜಯತೀರ್ಥ ಮೇವುಂಡಿ ಗಾಯನ, ಪುಣೆಯ ರಾಮದಾಸ ಫ‌ಳಸುಲೆ ತಬಲಾ ಸೋಲೊ, ಸಂಜೆ ಪುಣೆಯ ನಿಷಾದ ಬಾಕ್ರೆ, ವಿದುಷಿ ಅನುರಾಧಾ ಕುಬೇರ ಗಾಯನ ಪ್ರಸ್ತುತಪಡಿಸಿದರು. ಎಲ್‌ಐಸಿಯ ಹಿರಿಯ ವಿಭಾಗೀಯ ವ್ಯವಸ್ಥಾಪಕ ಎಂ.ಮನೋಹರ, ಡಾ|ರಮಾಕಾಂತ ಜೋಶಿ, ಸಮೀರ ಜೋಶಿ, ಅನಂತ ಹರಿಹರ ಇನ್ನಿತರರಿದ್ದರು. ಕ್ಷಮತಾ ಸಂಸ್ಥೆಯ ಗೋವಿಂದ ಜೋಶಿ ಸ್ವಾಗತಿಸಿದರು.

ನಮ್ಮದರ ಮೇಲೆ ನಮಗೆ ವಿಶ್ವಾಸ ಕಡಿಮೆ. ಭಗವದ್ಗೀತೆ ಇಂಗ್ಲಿಷ್‌ನಲ್ಲಿ ಬರೋವರೆಗೆ ಬಹಳ ಜನ ನಂಬಿರಲಿಲ್ಲ. ಈಗ ಭಗವದ್ಗೀತೆ ಬಗ್ಗೆ ಜಾಗೃತಿ ಆಗುತ್ತಿರುವುದು ಒಳ್ಳೆಯದು. ಅದರಲ್ಲೂ ಪಠ್ಯದಲ್ಲಿ ಭಗವದ್ಗೀತೆ ತರುವ ವಿಚಾರ ನಡೆದಿದ್ದು, ಈ ಬಗ್ಗೆ ಜಾತ್ಯತೀತರನ್ನು ಬಿಟ್ಟು ಉಳಿದವರೆಲ್ಲರೂ ಒಪ್ಪುತ್ತಿದ್ದಾರೆ. ಜಾತ್ಯತೀತತೆ ಅನ್ನೋದು ಒಂದು ವಿಚಿತ್ರ. ಅದೊಂದು ಧರ್ಮಾತೀತತೆ ಎಂದು ತಿಳಿದಿದ್ದಾರೆ. ಧರ್ಮದ ಆಧಾರದ ಮೇಲೆ ಜೀವನ ನಡೆಯಬೇಕು. ರಾಜಕೀಯದಲ್ಲಿಯೂ ಧರ್ಮ ಬೇಕು. ಧರ್ಮ ರಹಿತ ಜೀವನ, ರಾಜಕೀಯ ಶೂನ್ಯವಾಗುತ್ತದೆ. ಧರ್ಮ ಇಲ್ಲದೇ ಹೋದಲ್ಲಿ ಎರಡೂ ಶೂನ್ಯ ಆಗಿ ಬಿಡುತ್ತವೆ.

-ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.