ಗ್ರಂಥಾಲಯ ಅಭಿವೃದ್ಧಿಗೆ ಅನುಮೋದನೆ
ಓದುಗರಿಗೆ ಅನುಕೂಲವಾಗುವ ಪುಸ್ತಕ ನೀಡಿ
Team Udayavani, Mar 22, 2022, 10:14 AM IST
ಚಿತ್ರದುರ್ಗ: ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 87ನೇ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಹಾಗೂ 2022-23ನೇ ಸಾಲಿನ ಆಯ-ವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಓದುಗರ ಬೇಡಿಕೆ ಹಾಗೂ ಸಾರ್ವಜನಿಕ ಸ್ಪರ್ಧಾತ್ಮಕ ಓದುಗರಿಂದ ಪುಸ್ತಕಗಳ ಬೇಡಿಕೆ ಪಟ್ಟಿ ಪಡೆದು ಓದುಗರಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಒದಗಿಸಬೇಕು. ಶಾಖಾ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ, ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಬೇಕು. ಗ್ರಂಥಾಲಯದಲ್ಲಿ ಓದುಗರಿಗೆ ಪುಸ್ತಕ ಸುಲಭವಾಗಿ ದೊರಕುವಂತೆ ವ್ಯವಸ್ಥಿತವಾಗಿ ಕ್ರಮವಹಿಸಿ, ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಸಲಹೆ ನೀಡಿದರು.
ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲಾ ಗ್ರಂಥಾಲಯದ ಕಾಂಪೌಂಡ್ ಗೋಡೆ ಪುನರ್ ನಿರ್ಮಾಣಕ್ಕೆ ನಿರ್ಮಿತಿ ಕೇಂದ್ರದಿಂದ ಅಂದಾಜುಪಟ್ಟಿ ಪಡೆಯಲಾಗಿದೆ. ಜಿಲ್ಲಾ ಮತ್ತು ನಗರ ಪ್ರಾ ಧಿಕಾರ ನಿಧಿಯಿಂದ 2020-21ನೇ ಸಾಲಿನ ಆಯವ್ಯಯದಲ್ಲಿ 3.14 ಲಕ್ಷಗಳನ್ನು ನೀಡಲಾಗಿದೆ. ಉಳಿದ ಅನುದಾನವನ್ನು ಕಾಮಗಾರಿ ಮುಕ್ತಾಯವಾದ ಬಳಿಕ ನೀಡಲಾಗುವುದು. ಹಿರಿಯೂರು ಶಾಖಾ ಗ್ರಂಥಾಲಯಕ್ಕೆ ಹೆಚ್ಚಿನ ಓದುಗರು ಬರುವುದರಿಂದ ಹೆಚ್ಚುವರಿಯಾಗಿ 2ನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ಬೇಡಿಕೆ ಇದೆ. ಹಾಗಾಗಿ ಇಲಾಖೆಯಿಂದ ಹಣ ಬಿಡುಗಡೆಯಾದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
12 ಲಕ್ಷ ಡಿಜಿಟಲ್ ಸದಸ್ಯತ್ವ ನೋಂದಣಿ: ಚಿತ್ರದುರ್ಗ ಜಿಲ್ಲೆಯಲ್ಲಿ 2022ರ ಮಾರ್ಚ್ 20ರ ಅಂತ್ಯಕ್ಕೆ 12,71,838 ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದಾರೆ. ರಾಜ್ಯದಲ್ಲಿ ಚಿತ್ರದುರ್ಗ ಆರನೇ ಸ್ಥಾನದಲ್ಲಿದೆ. 2022 ಮಾರ್ಚ್ 20ರ ಅಂತ್ಯಕ್ಕೆ ಇಲಾಖೆಯಲ್ಲಿ 2,23 ಕೋಟಿ ಡಿಜಿಟಲ್ ಸದಸ್ಯತ್ವ ಹೊಂದಿದ್ದಾರೆ. 2022-23ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದಲ್ಲಿ ಒಟ್ಟು ರೂ.98 ಲಕ್ಷ ಅಂದಾಜು ಆದಾಯದ ನಿರೀಕ್ಷೆ ಇದೆ. ಇದರಲ್ಲಿ ಅಂದಾಜು 77.90 ಲಕ್ಷ ವ್ಯಯವಾಗುವ ನಿರೀಕ್ಷೆ ಇದೆ. ರೂ.2.10ಲಕ್ಷ ಉಳಿತಾಯವಾಗಲಿದೆ ಎಂದರು.
ಗ್ರಂಥಾಲಯ ಅಭಿವೃದ್ಧಿಗೆ ಹಲವು ವಿಷಯಗಳಿಗೆ ಸಭೆ ಅನುಮೋದನೆ ನೀಡಿತು. ಸಭೆಯಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಸಿ.ಬಿ.ಶೈಲ, ಲಿಂಗರಾಜು, ಚೋಳಗಟ್ಟ ಗ್ರಾಪಂ ಸದಸ್ಯ ಸುರೇಶ್ ಉಗ್ರಾಣ, ಎಂ.ಕೆ. ಹಟ್ಟಿ ಗ್ರಾಪಂ ಸದಸ್ಯೆ ನಾಗರತ್ನಮ್ಮ, ಡಿಡಿಪಿಇ ಕೆ.ರವಿಶಂಕರ್ ರೆಡ್ಡಿ, ಹೊಳಲ್ಕೆರೆ ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಸೇರಿದಂತೆ ಗ್ರಂಥಾಲಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.