ಮಾರ್ಚ್ 28 ಕ್ಕೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ : ಮೋದಿ, ಶಾ ಭಾಗಿ
Team Udayavani, Mar 22, 2022, 3:40 PM IST
ಪಣಜಿ: ಗೋವಾದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಡಾ. ಪ್ರಮೋದ್ ಸಾವಂತ್ ನೇತೃತ್ವದಲ್ಲಿ ರಚನೆಯಾಗಲಿರುವ ಸರ್ಕಾರದ ಪ್ರಮಾಣವಚನ ಮಾರ್ಚ್ 28 ರಂದು ಬೆಳಿಗ್ಗೆ 11 ಗಂಟೆಗೆ ಪಣಜಿ ಸಮೀಪದ ಬಾಂಬೋಲಿಂ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಗೋವಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಸೇರಿದಂತೆ 7 ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಗೋವಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಾ. ಪ್ರಮೋದ್ ಸಾವಂತ್ ಈ ಕುರಿತು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ 7 ಜನ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಸಂಪುಟದಲ್ಲಿ ಸ್ಥಾನ…!
ಗೋವಾ ಸರ್ಕಾರದ ಸಂಪುಟದಲ್ಲಿ ಎಂಜಿಪಿ ಪಕ್ಷದ ಸುದೀನ ಧವಳೀಕರ್, ಕುಡತರಿ ಕ್ಷೇತ್ರದ ಪಕ್ಷೇತರ ಶಾಸಕ ಅಲೆಕ್ಸ ರೆಜಿನಾಲ್ಡ , ಡಾ. ಚಂದ್ರಕಾಂತ ಅರವರಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ರವಿ ನಾಯ್ಕ, ಸುಭಾಷ್ ಶಿರೋಡ್ಕರ್, ಮಾವಿನ್ ಗುದಿನ್ಹೊ, ಬಾಬುಶ್ ಮೊನ್ಸೆರಾತ್, ವಿಶ್ವಜಿತ್ ರಾಣೆ, ರೋಹನ್ ಖಂವಟೆ ಮತ್ತು ನೀಲೇಶ್ ಕಾಬ್ರಾಲ್ ರವರಿಗೆ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡುವುದು ಖಚಿತ ಎಂದೇ ಹೇಳಲಾಗುತ್ತಿದೆ. ಉತ್ತರ ಗೋವಾಕ್ಕೆ ಮೂರು ಹಾಗೂ ದಕ್ಷಿಣ ಗೋವಾಕ್ಕೆ ಮೂರು ಸಚಿವ ಸ್ಥಾನ ನೀಡಲಾಗುವುದು. ಇದಲ್ಲದೆಯೇ ಪಕ್ಷೇತರರು ಮತ್ತು ಎಂಜಿಪಿ ಪಕ್ಷದ ಶಾಸಕ ಧವಳೀಕರ್ ರವರಿಗೂ ಸ್ಥಾನ ಲಭಿಸುವುದು ಪಕ್ಕಾ ಎಂದೇ ಹೇಳಲಾಗುತ್ತಿದೆ. ಮುಖ್ಯಮಂತ್ರಿಯ ನಂತರ ವಿಶ್ವಜಿತ್ ರಾಣೆ ಎರಡನೇಯ ಸ್ಥಾನದ ಹುದ್ದೆ ಪಡೆದುಕೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ : ಹೈದರಾಬಾದ್: ಭೀಕರ ಕಾರು ಅಪಘಾತದಲ್ಲಿ ತೆಲುಗು ನಟಿ ಗಾಯತ್ರಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.