ಇಂದು ಪುಷ್ಕರ್ ಧಮಿ ಪದಗ್ರಹಣ; ಉತ್ತರಾಖಾಂಡ ಸಿಎಂ ಆಗಿ 2ನೇ ಬಾರಿಗೆ ಪ್ರಮಾಣ
Team Udayavani, Mar 23, 2022, 8:30 AM IST
ಡೆಹ್ರಾಡೂನ್/ಪಣಜಿ: ಉತ್ತರಾಖಂಡದ ಬಿಜೆಪಿ ನಾಯಕ ಪುಷ್ಕರ್ ಸಿಂಗ್ ಧಮಿ ಅವರು ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬುಧ ವಾರ (ಮಾ. 24) ಪ್ರಮಾಣ ವಚನ ಸ್ವೀಕರಿ ಸಲಿದ್ದಾರೆ.
ಡೆಹ್ರಾಡೂನ್‌ನ ಪರೇಡ್ ಗ್ರೌಂಡ್‌ನಲ್ಲಿ ಮಧ್ಯಾಹ್ನ 2:30ಕ್ಕೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾ ಲರಿಂದ ಧಮಿ ಅವರು ಪ್ರಮಾಣ ಸ್ವೀಕರಿಸಲಿ ದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಎಂದು ರಾಜ್ಯದ ಬಿಜೆಪಿ ಉಸ್ತುವಾರಿ ಹೊಂದಿರುವ ಮನ್ವೀರ್ ಸಿಂಗ್ ಚೌಹಾನ್ ತಿಳಿಸಿದ್ದಾರೆ.
ಮೋದಿಯವರ ಜೊತೆಗೆ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಭಾಗವಹಿಸಲಿದ್ದಾರೆ. ಇದೇ ವೇಳೆ, ಮಂಗಳವಾರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಧಮಿ, ನೂತನ ಬಿಜೆಪಿ ಸರಕಾರದಡಿ ಏಕರೂಪ ನಾಗರಿಕ ಸಂಹಿತೆಯನ್ನು ಸೇರಿದಂತೆ ಅನೇಕ ಪ್ರಮುಖ ನಿರ್ಧಾರಗಳನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ
28ಕ್ಕೆ ಸಾವಂತ್ ಪ್ರಮಾಣ
ಗೋವಾದ ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಪ್ರಮೋದ್ ಸಾವಂತ್, ಮಾ. 28ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಣಜಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಇತರ ನಾಯಕರಾದ ಜೆ.ಪಿ. ನಡ್ಡಾ, ನಿತಿನ್ ಗಡ್ಕರಿ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ ಗಳು ಭಾಗವಹಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.