ಇನ್ನು ಕೇಂದ್ರೀಯ ವಿ.ವಿ. ಪದವಿಗೂ ಪ್ರವೇಶ ಪರೀಕ್ಷೆ
ಕೇಂದ್ರೀಯ ವಿ.ವಿ.ಗಳಲ್ಲಿ ಪಿಯು ಅಂಕಗಳಿಗಿಲ್ಲ ಮಾನ್ಯತೆ; ಯುಜಿಸಿ ಹೊಸ ನಿಯಮ; ಮುಂದಿನ ವರ್ಷವೇ ಜಾರಿ
Team Udayavani, Mar 23, 2022, 7:05 AM IST
ಹೊಸದಿಲ್ಲಿ: ಇನ್ನು ಮುಂದೆ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಕೋರ್ಸ್‌ಗೆ ಪ್ರವೇಶ ಪಡೆಯ ಬೇಕೆಂದರೆ 12ನೇ ತರಗತಿಯ ಅಂಕಗಳು ಲೆಕ್ಕಕ್ಕೇ ಬರುವುದಿಲ್ಲ. ಬದಲಿಗೆ ವಿ.ವಿ.ಗಳು ನಡೆಸುವ ಪ್ರವೇಶ ಪರೀಕ್ಷೆಯ ಅಂಕಗಳನ್ನು ಆಧರಿಸಿ ಪ್ರವೇಶ ನೀಡಲಾಗುತ್ತದೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾ ವಣೆ ಗಳಿಗೆ ನಾಂದಿ ಹಾಡುತ್ತಿರುವ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಇಂಥದ್ದೊಂದು ಹೊಸ ಆದೇಶ ಹೊರಡಿಸಿದೆ. ಎಲ್ಲ ಕೇಂದ್ರೀಯ ವಿ.ವಿ. ಗಳೂ ಕಡ್ಡಾಯ ವಾಗಿ ಸಾಮಾನ್ಯ ವಿಶ್ವ ವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ)ಯನ್ನು ನಡೆಸಿ, ಅದರ ಅಂಕಗಳ ಆಧಾರದಲ್ಲೇ ಪ್ರವೇಶ ನೀಡಬೇಕು ಎಂದು ಹೇಳಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ(2022-23) ಇದು ಜಾರಿಯಾಗಲಿದೆ.
ಕಡ್ಡಾಯವಾಗಿ ಎಲ್ಲ 45 ಕೇಂದ್ರೀಯ ವಿ.ವಿ.ಗಳು ಇನ್ನು ಯುಜಿ ಕೋರ್ಸ್‌ಗಳಿಗೆ ಸಿಯುಇಟಿ ಪರೀಕ್ಷೆ ನಡೆಸಬೇಕು. ಆದರೆ ಸದ್ಯದ ಮಟ್ಟಿಗೆ ಸ್ನಾತಕೋತ್ತರ ಪ್ರವೇಶದ ವೇಳೆ ಸಿಯುಇಟಿ ಅಂಕಗಳ ಪರಿಗಣನೆಯನ್ನು ಆಯಾ ವಿ.ವಿ.ಗಳ ವಿವೇಚನೆಗೆ ಬಿಡಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ಹೇಳಿದ್ದಾರೆ.
ಜುಲೈಯಲ್ಲಿ ಪರೀಕ್ಷೆ
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಜುಲೈ ಮೊದಲ ವಾರದಲ್ಲಿ ಈ ಪ್ರವೇಶ ಪರೀಕ್ಷೆ(ಸಿಯುಇಟಿ) ಯನ್ನು ನಡೆಸಲಿದೆ. ಎಲ್ಲ ಪ್ರಶ್ನೆಗಳು 12ನೇ ತರಗತಿ ಸಿಬಿಎಸ್‌ಇ ಪಠ್ಯಕ್ರಮದ ಅಂಶಗಳನ್ನೇ ಒಳಗೊಂಡಿರಲಿದೆ. ಪರೀಕ್ಷೆ 2 ಹಂತಗಳಲ್ಲಿ ಮೂರೂವರೆ ಗಂಟೆ ಕಾಲ ನಡೆಯಲಿದೆ. ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗುತ್ತದೆ.
ರಂಗಭೂಮಿ, ಸಂಗೀತ ಮತ್ತಿತರ ಕೌಶಲ ಆಧರಿತ, ವೃತ್ತಿಪರ ಯುಜಿ ಕೋರ್ಸ್‌ಗಳಿಗೆ ವಿ.ವಿ.ಗಳು ಪ್ರಾಕ್ಟಿಕಲ್ ಪರೀಕ್ಷೆಗಳನ್ನು ಆಯೋಜಿಸಿ, ಅದರ ಅಂಕಗಳನ್ನು ವಿದ್ಯಾರ್ಥಿಯ ಅಂತಿಮ ಸಿಯುಇಟಿ ಸ್ಕೋರ್‌ಗೆ ಸೇರ್ಪಡೆ ಮಾಡಬೇಕು.
ಇದನ್ನೂ ಓದಿ:ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ: ಮೋದಿ
ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ
ಸಿಯುಇಟಿ ಎನ್ನುವುದು ಕಂಪ್ಯೂಟರೀಕೃತ ಪರೀಕ್ಷೆಯಾಗಿದ್ದು, ಕನ್ನಡ, ಇಂಗ್ಲಿಷ್, ಹಿಂದಿ, ಗುಜರಾತಿ, ಅಸ್ಸಾಮಿ, ಬಂಗಾಲಿ, ಮಲಯಾಳ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನಡೆಯಲಿದೆ. ವಿಶೇಷವೆಂದರೆ ವಿದೇಶಿ ವಿದ್ಯಾರ್ಥಿಗಳಿಗೆ ಈ ಪ್ರವೇಶ ಪರೀಕ್ಷೆಯಿಂದ ಯುಜಿಸಿ ವಿನಾಯಿತಿ ನೀಡಿದೆ.
ಮೀಸಲಾತಿ ಮೇಲೆ ಪರಿಣಾಮವಿಲ್ಲ
ಯಾವುದಾದರೂ ವಿ.ವಿ.ಯು ಸ್ಥಳೀಯ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಮೀಸಲಾತಿ ನೀಡುತ್ತಾ ಬಂದಿದ್ದರೆ ಆ ಮೀಸಲಾತಿಯು ಮುಂದುವರಿಯುತ್ತದೆ. ಆದರೆ ಈ ವಿದ್ಯಾರ್ಥಿಗಳು ಕೂಡ ಸಿಯುಇಟಿ ಬರೆದೇ ಪ್ರವೇಶ ಪಡೆಯಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.