ಗುರುವಾಯನಕೆರೆ-ನಾರಾವಿ ದ್ವಿಮುಖ ರಸ್ತೆ ಕಾಮಗಾರಿ ಆರಂಭ

25 ಕೋ.ರೂ. ಅನುದಾನ ಒದಗಿಸಿದ ಸಚಿವ ಸಿ.ಸಿ.ಪಾಟೀಲ್‌

Team Udayavani, Mar 23, 2022, 9:59 AM IST

truck

ಬೆಳ್ತಂಗಡಿ: ಧರ್ಮಸ್ಥಳ- ಕಾರ್ಕಳ ಮಾರ್ಗವಾಗಿ ಹೊರನಾಡು ಶೃಂಗೇರಿ ಸಂಪರ್ಕಿಸಲು ಬಹುಮುಖ್ಯ ರಸ್ತೆಯಾಗಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ-ನಾರಾವಿ ರಸ್ತೆ ಮೇಲ್ದರ್ಜೆಗೇರಿಸಲು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾರ್ಯ ಕ್ರಮದಡಿ 25 ಕೋ.ರೂ. ಅನುದಾನ ಒದಗಿಸುವ ಮೂಲಕ ದ್ವಿಮುಖ ರಸ್ತೆಗೆ ಚಾಲನೆ ದೊರೆತಿದೆ.

ಪ್ರಥಮ ಹಂತದಲ್ಲಿ ರಸ್ತೆ ಸುರಕ್ಷತೆಯಡಿ ಗುರುವಾಯನಕೆರೆ ಕೆರೆ ಏರಿಯಾಗಿ ಪೊಟ್ಟು ಕೆರೆವರೆಗೆ 1.2 ಕಿ.ಮೀ. ರಸ್ತೆಯನ್ನು 4.95 ಕೋ.ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ಹಾಗೂ ಪೊಟ್ಟು ಕೆರೆಯಿಂದ ಸುಲ್ಕೇರಿ ವರೆಗೆ 12 ಕಿ.ಮೀ. ನ್ನು 20 ಕೋ. ರೂ. ವೆಚ್ಚದಲ್ಲಿ ದ್ವಿಮುಖ ರಸ್ತೆ ನಿರ್ಮಿಸುವ ಯೋಜನೆ ಯನ್ನು ನಡೆಸಲು ಲೋಕೋ ಪಯೋಗಿ ಇಲಾಖೆಯಡಿ ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ಗುತ್ತಿಗೆ ಪಡೆದಿದ್ದಾರೆ. ಈಗಾಗಲೇ ಗುರುವಾಯನಕೆರೆ ಕೆರೆ ಏರಿಯಾಗಿ ಪೊಟ್ಟುಕೆರೆವರೆಗೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, 1.2 ಕಿ.ಮೀ. ರಸ್ತೆಯ ಎರಡು ಬದಿ 21 ಅಡಿ ಅಗಲವಾಗಲಿದೆ. ಮಧ್ಯ 1 ಮೀಟರ್‌ ಮೀಡಿಯನ್‌ ಇರಲಿದ್ದು ಮಧ್ಯ ಹೈಮಾಸ್ಟ್‌ ದೀಪ ಅಳವಡಿಕೆಯಾಗಲಿದೆ. ರಸ್ತೆ ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

20ಕ್ಕೂ ಅಧಿಕ ಮೋರಿ

ಎರಡನೇ ಹಂತದಲ್ಲಿ ಪ್ರಸಕ್ತ ಇರುವ ಐದೂವರೆ ಮೀಟರ್‌ ರಸ್ತೆಯನ್ನು ಗುರುವಾಯನಕೆರೆಯಿಂದ ಸುಲ್ಕೇರಿವರೆಗೆ ಒಟ್ಟು 12 ಕಿ.ಮೀ. ರಸ್ತೆ 10 ಮೀಟರ್‌ (33 ಅಡಿ) ಅಗಲದಲ್ಲಿ ದ್ವಿಮುಖ ರಸ್ತೆಯಾಗಲಿದೆ. ನೂತನ ರಸ್ತೆಯು ಈಗಿರುವ ಪುಂಜಾಲಕಟ್ಟೆಯಿಂದ ಬಿಸಿರೋಡ್‌ ರಸ್ತೆ ಮಾದರಿಯಲ್ಲಿ ಅಭಿವೃದ್ಧಿಗೊಳ್ಳಲಿದೆ. ಒಟ್ಟು 20 ಕ್ಕೂ ಅಧಿಕ ನೂತನ ಮೋರಿಗಳ ಅಳವಡಿಕೆ ಕಾರ್ಯವೂ ಶೀಘ್ರದಲ್ಲೆ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.

ಮೂರು ಕಡೆಗಳಲ್ಲಿ ಡಿವೈಡರ್‌

ಒಂದೆಡೆ ಗುರುವಾಯನಕೆರೆಯಿಂದ- ಪೊಟ್ಟುಕೆರೆ ವರೆಗೆ 1.2 ಕಿ.ಮೀ. ಚತುಷ್ಪಥ ರಸ್ತೆ ಹಾಗೂ ಡಿವೈಡರ್‌ ಕಾರ್ಯ ಕೈಗೆತ್ತಿಕೊಂಡಿದ್ದು ಮುಂದಿನ ಹಂತದಲ್ಲಿ ಅಳದಂಗಡಿ ಪೇಟೆಯಲ್ಲಿ ಹಾಗೂ ಸುಲ್ಕೇರಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಎರಡು ಕಡೆಗಳಲ್ಲಿ ವಿಭಜಕದೊಂದಿಗೆ ಸರ್ಕಲ್‌ ರಚನೆಯಾಗಲಿದೆ.

ಪ್ರವಾಸೋದ್ಯಮ ಕಲ್ಪನೆಯಡಿ ಮೇಲ್ದರ್ಜೆಗೆ

ವಿವಿಧೆಡೆಯಿಂದ ಧರ್ಮಸ್ಥಳ, ಕಾರ್ಕಳ, ಹೊರನಾಡು, ಶೃಂಗೇರಿ, ಉಡುಪಿ, ಕೊಲ್ಲೂರು ಭಾಗಕ್ಕೆ ಸಂಚರಿಸುವ ಯಾತ್ರಾರ್ಥಿಗಳು, ಪ್ರವಾಸಿಗರಿಗೆ, ಎರಡೂ ಜಿಲ್ಲೆಯ ಜನಾಮಾನ್ಯರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಹಾಗೂ ಆರ್ಥಿಕ ವ್ಯವಹಾರ ಕೇಂದ್ರವಾಗಿ ರಾಜ್ಯ ಹೆದ್ದಾರಿಯಡಿ ರಸ್ತೆ ಮೇಲ್ದರ್ಜೆಗೇರಿಸಲಾಗಿದೆ. ಕಾರ್ಕಳ ಸಂಪರ್ಕ ರಸ್ತೆಗಳು ಈಗಾಗಲೇ ಮೇಲ್ದರ್ಜೆಗೇರಿದ್ದು, ಉಡುಪಿ ಜಿಲ್ಲೆ ಮಾದರಿಯಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಯಾಗಬೇಕೆಂಬ ನೆಲೆಯಲ್ಲಿ ಶಾಸಕ ಹರೀಶ್‌ ಪೂಂಜ ಸರಕಾರಕ್ಕೆ ಮನವಿ ಮಾಡಿ ಅನುದಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪುಂಜಾಲಕಟ್ಟೆಯಿಂದ ಚಾರ್ಮಾಡಿ ರಸ್ತೆ ವಿಸ್ತರಣೆಗೆ ಕ್ಷಣಗಣನೆ

ಈಗಾಗಲೇ ಜಿಲ್ಲೆಯ ಅನೇಕ ರಸ್ತೆಗಳನ್ನು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕಳೆದ ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ಏಕಕಾಲದಲ್ಲಿ ಲೋಕಾರ್ಪಣೆಗೊಳಿಸಿದ್ದಾರೆ. ಅದರಲ್ಲಿ ಪುಂಜಾಲಕಟ್ಟೆ- ಬಿ.ಸಿ.ರೋಡ್‌ ರಸ್ತೆಯೂ ಒಂದು. ಎರಡನೇ ಹಂತದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಭಿವೃದ್ಧಿಗೆ ಕಾಯುತ್ತಿದೆ. ಈಗಾಗಲೇ ವಾಹನ ದಟ್ಟಣೆ ಮಿತಿ ಮೀರಿದ್ದರಿಂದ ಗುರುವಾಯನಕೆರೆ ಪೇಟೆಯಲ್ಲಿ ರಸ್ತೆ ವಿಸ್ತರಣೆ ಅವಶ್ಯವಾಗಿದೆ.

ಪ್ರವಾಸೋದ್ಯಮ ತಾಲೂಕಿನ ಪ್ರಮುಖ ಭಾಗವಾಗಿ ಬೆಳೆಯುತ್ತಿದೆ. ಈ ನೆಲೆಯಲ್ಲಿ ಉಭಯ ಜಿಲ್ಲೆಯನ್ನು ಸಂಪರ್ಕಿಸಲು ಈ ರಸ್ತೆ ಅನುಕೂಲವಾಗಲಿದೆ. ರಸ್ತೆಯೊಂದಿಗೆ ಬಸ್‌ ಬೇ ನಿರ್ಮಿಸಲಿದ್ದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವ ಚಿಂತನೆಯಿದೆ. -ಹರೀಶ್‌ ಪೂಂಜ, ಶಾಸಕರು, ಬೆಳ್ತಂಗಡಿ

ಪ್ರಥಮ ಹಂತದ ಅಭಿವೃದ್ಧಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾರ್ಯಕ್ರಮ ರಸ್ತೆ ಸುರಕ್ಷತೆಯಡಿ 25 ಕೋ.ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಡಿ ಗುರುವಾಯನಕೆರೆ-ನಾರಾವಿ ರಸ್ತೆಯ ಸುಲ್ಕೇರಿವರೆಗೆ ಪ್ರಥಮ ಹಂತದಲ್ಲಿ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. –ಶಿವಪ್ರಸಾದ್‌ ಅಜಿಲ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.