ಅಂಬೇಡ್ಕರ್‌ ಭವನ ನಿರ್ವಹಣೆ ಜವಾಬ್ದಾರಿ ಪಾಲಿಕೆ ಹೆಗಲಿಗೆ !

ಸಮಾಜ ಕಲ್ಯಾಣ ಇಲಾಖೆಗೆ ತಲೆನೋವಾದ ನಿರ್ವಹಣೆ ಭಾರ

Team Udayavani, Mar 23, 2022, 10:53 AM IST

ambedkar

ಮಹಾನಗರ: ವರ್ಷ ಹಿಂದೆ ಉದ್ಘಾಟನೆಗೊಂಡ ಅಂಬೇಡ್ಕರ್‌ ಭವನ ನಿರ್ವಹಣೆ ಸಮಾಜ ಕಲ್ಯಾಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದ್ದು, ಭವನ ನಿರ್ವಹಣೆಯನ್ನು ಮಹಾನಗರ ಪಾಲಿಕೆ ವಹಿಸಲು ಸಿದ್ಧತೆ ನಡೆಯುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಅಂಬೇಡ್ಕರ್‌ ಭವನವನ್ನು ಉದ್ಘಾಟಿಸಿದ್ದು, ಇನ್ನೂ ಕಾರ್ಯ ಕ್ರಮಗಳಿಗೆ ತೆರೆದುಕೊಂಡಿಲ್ಲ. ಈಗಾಗಲೇ ಸುಮಾರು 40 ಸಾವಿರ ರೂ. ನಷ್ಟು ವಿದ್ಯುತ್‌ ಬಿಲ್‌ ಬರುತ್ತಿದ್ದು, ಕಾರ್ಯಕ್ರಮಗಳಿಗೆ ವಿನಿಯೋಗಿಸಿದರೆ 1 ಲಕ್ಷ ರೂ. ಮೀರುತ್ತದೆ. ಹೀಗಿದ್ದಾಗ, ಸಮಾಜಕಲ್ಯಾಣ ಇಲಾಖೆಯಲ್ಲಿ ಅಷ್ಟೊಂದು ಆದಾಯವಿಲ್ಲ. ಇದೇ ಕಾರಣಕ್ಕೆ ಮನಪಾಗೆ ಹಸ್ತಾಂತರಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಪಾಲಿಕೆಯೊಂದಿಗೆ ಮಾತುಕತೆ ನಡೆಸುತ್ತಿದೆ.

ಪಾಲಿಕೆಯಲ್ಲಿ ಇತ್ತೀಚೆಗೆ ನಡೆದ ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆಯಲ್ಲಿಯೂ ಈ ಪ್ರಸ್ತಾವ ಬಂದಿತ್ತು. ಪಾಲಿಕೆ ಅನುದಾನದಿಂದ ನಿರ್ವಹಣೆ ಮಾಡುವ ಕುರಿತಂತೆ ಸಮಾಜದ ಪ್ರಮುಖರು ಅಭಿಪ್ರಾಯ ನೀಡಿದ್ದರು. ಇದೀಗ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಮತ್ತೂಂದು ಸುತ್ತಿನ ಸಭೆ ನಡೆಸಲು ಮುಂದಾಗಿದೆ. ಇದರಲ್ಲಿ ಪ್ರಮುಖ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆ ಇದ್ದು, ಭವನದ ನಿರ್ವಹಣೆ, ಆದಾಯ ಹಂಚಿಕೆ, ಭವನ ಹಸ್ತಾಂತರ ಮುಂತಾದ ವಿಚಾರಗಳ ಬಗ್ಗೆ ಮಾತುಕತೆ ನಡೆಯಲಿವೆ.

ಭವನಕ್ಕೆ ಸೋಲಾರ್‌ ರೂಫ್‌ಟಾಪ್‌

ಭವನದಲ್ಲಿ ಸದ್ಯ ತಿಂಗಳಿಗೆ ಸುಮಾರು 42,000 ರೂ. ವಿದ್ಯುತ್‌ ಬಿಲ್‌ ಬರುತ್ತಿದ್ದು, ಭವನಕ್ಕೆ ಇನ್ನಿತರ ಕಚೇರಿ ಸ್ಥಳಾಂತರ ಸಹಿತ ಸಮಾರಂಭಗಳಿಗೆ ವಿದ್ಯುತ್‌ ಉಪಯೋಗಿಸಿದ್ದಲ್ಲಿ ತಿಂಗಳಿಗೆ ಸುಮಾರು 1 ಲಕ್ಷ ರೂ.ನಿಂದ 1.5 ಲಕ್ಷ ರೂ.ವರೆಗೆ ವಿದ್ಯುತ್‌ ಶುಲ್ಕ ತಗಲುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ದರ ತಗ್ಗಿಸಲು ಸೋಲಾರ್‌ ರೂಫ್‌ಟಾಪ್‌ ಅಳವಡಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಸ್ಮಾರ್ಟ್‌ಸಿಟಿಗೆ ಪತ್ರ ಬರೆಯಲಾಗಿದೆ.

ಸದ್ಯದಲೇ ಅಂತಿಮ ನಿರ್ಧಾರ

ಕೆಲವು ತಿಂಗಳ ಹಿಂದೆ ಉದ್ಘಾಟನೆಗೊಂಡ ಅಂಬೇಡ್ಕರ್‌ ಭವನ ನಿರ್ವಹಣೆ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯು ಪಾಲಿಕೆಯನ್ನು ಕೇಳಿಕೊಂಡಿದೆ. ಪಾಲಿಕೆಯಲ್ಲಿ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಈ ಪ್ರಸ್ತಾಪ ಬಂದಿದೆ. ಈ ಕುರಿತು ಸದ್ಯದಲ್ಲೇ ಪಾಲಿಕೆಯು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜತೆ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಚರ್ಚೆ ನಡೆಸಲಾಗಿದೆ

ಅಂಬೇಡ್ಕರ್‌ ಭವನ ನಿರ್ವಹಣೆಯನ್ನು ಮನಪಾಗೆ ನೀಡಬೇಕು ಎಂಬ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಈ ಹಿಂದೆ ನಡೆದ ಸಭೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತವಾಗಿದೆ. ಪಾಲಿಕೆಯಲ್ಲಿ ಪ್ರತ್ಯೇಕ ಎಂಜಿನಿಯರಿಂಗ್‌ ವಿಭಾಗ ಇದ್ದು, ತೆರಿಗೆ ಸಹಿತ ಇತರ ಮೂಲದಿಂದ ಅನುದಾನ ಹೊಂದಿಸಬಹುದು. ಸಾಮಾನ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಭವನ ನಿರ್ಮಾಣ ಮಾಡಲಾಗುತ್ತದೆ. ಖರ್ಚು-ವೆಚ್ಚದಲ್ಲಿ ಅನುದಾನದ ಕೊರತೆ ಇರುತ್ತದೆ. ಭವನಕ್ಕೆ ಬಾಡಿಗೆ ನಿಗದಿಪಡಿಸುವ ನಿಟ್ಟಿನಲ್ಲಿ ಮುಂದಿನ ಹಂತದಲ್ಲಿ ತೀರ್ಮಾನಿಸಲಾಗುತ್ತದೆ. -ಸಿದ್ದಲಿಂಗೇಶ ಬೇವಿನಮಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.