2ರಿಂದ ಜಮಖಂಡಿಯಲ್ಲಿ ಜಾನುವಾರು ಜಾತ್ರೆ
ವಿವಿಧ ರಾಜ್ಯಗಳಿಂದ ಉತ್ತಮ ತಳಿ ರಾಸುಗಳ ಮಾರಾಟ
Team Udayavani, Mar 23, 2022, 12:25 PM IST
ಜಮಖಂಡಿ: ನಗರದ ರಾಜ್ಯ ಹೆದ್ದಾರಿ ಮುಧೋಳ ರಸ್ತೆ ಹೊರವಲಯದಲ್ಲಿ ಐತಿಹಾಸಿಕ ಬಸವೇಶ್ವರ ಅಮರಾಯಿ ಜಾನುವಾರುಗಳ ಜಾತ್ರೆ ಏ. 2ರಿಂದ 4ರವರೆಗೆ ಸಂಭ್ರಮದಿಂದ ನಡೆಯಲಿದೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.
ನಗರದ ತಾಲೂಕು ಆಡಳಿತ ಸೌಧ ಸಭಾಭವನದಲ್ಲಿ ಬಸವೇಶ್ವರ ಅಮರಾಯಿ ಜಾನುವಾರುಗಳ ಜಾತ್ರೆ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏ.2 ರಿಂದ 4ರವರೆಗೆ ತೆರಬಂಡಿ ಸ್ಪರ್ಧೆ, ಎತ್ತಿನ ಗಾಡಿ ಓಟದ ಸ್ಪರ್ಧೆ, ಜೋಡೆತ್ತು ಕಲ್ಲು ಜಗ್ಗುವ ಸ್ಪರ್ಧೆ ಹಾಗೂ ರಾಸುಗಳ ಆಯ್ಕೆ ಸ್ಪರ್ಧೆಗಳು ಜರುಗಲಿವೆ. ಐತಿಹಾಸಿಕ ಅಮರಾಯಿ ಜಾತ್ರೆಯಲ್ಲಿ ಮಹಾರಾಷ್ಟ್ರ ಸಹಿತ ವಿವಿಧ ರಾಜ್ಯಗಳಿಂದ ಉತ್ತಮ ತಳಿಯ ರಾಸುಗಳು ಮಾರಾಟ ಕೂಡ ನಡೆಯಲಿದೆ.
ಸಂಭ್ರಮದಿಂದ ಐತಿಹಾಸಿಕ ಅಮರಾಯಿ ಜಾನುವಾರು ಜಾತ್ರೆ ನಿಮಿತ್ತ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಭೆಗೆ ಆಗಮಿಸುವಂತೆ ನೋಟಿಸ್ ನೀಡಿದರೂ ಗೈರಾಗಿರುವುದಕ್ಕೆ ಶಾಸಕ ಆನಂದ ನ್ಯಾಮಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಾತ್ರೆ ಯಶಸ್ವಿಗಾಗಿ ಪೂರಕ ಸಮಿತಿಗಳು ಸಿದ್ಧತೆ ಆರಂಭಿಸಬೇಕು ಎಂದು ಸೂಚನೆ ನೀಡಿದರು.
ಸ್ಪರ್ಧೆಯಲ್ಲಿ ಭಾಗವಹಿಸುವ ರಾಸುಗಳಿಗೆ ನಗದು ಬಹುಮಾನ ವಿತರಣೆ ನಡೆಯಲಿದೆ. ಜಾನುವಾರು ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲರಿಗೂ ಒಪ್ಪಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ದೂರದ ಊರಿನಿಂದ ಬರುವ ರೈತರಿಗೆ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಔಷಧೋಪಚಾರದ ವ್ಯವಸ್ಥೆ ಆರೋಗ್ಯ ಇಲಾಖೆಗೆ ವಹಿಸಬೇಕು. ಪಶು ವೈದ್ಯರು, ಆರೋಗ್ಯ ಇಲಾಖೆಯವರು ಜಾತ್ರೆಯಲ್ಲಿ ವೈದ್ಯರು 24 ಗಂಟೆ ಸೇವೆಗೆ ನಿಯೋಜಿಸಬೇಕು. ರಾಜ್ಯ ಹೆದ್ದಾರಿ ನಡೆಯುವುದರಿಂದ ಪೊಲೀಸ್ ಇಲಾಖೆ ತಾತ್ಕಾಲಿಕ ಪೊಲೀಸ್ ಠಾಣೆ ಸ್ಥಾಪಿಸಿ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಜನ-ಜಾನುವಾರುಗಳಿಗೆ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ನಿರ್ಮಿಸಿ ವಸ್ತು ಪ್ರದರ್ಶನ ಆಯೋಜಿಸಬೇಕು.
ಇದೇ ಸಂದರ್ಭದಲ್ಲಿ ಪ್ರಸಕ್ತ ವರ್ಷದ ಜಾತ್ರಾ ಕಮೀಟಿ ಸದಸ್ಯರ ಆಯ್ಕೆ ನಡೆಯಿತು. ಐತಿಹಾಸಿಕ ಶ್ರೀ ಬಸವೇಶ್ವರ ಅಮರಾಯಿ ಜಾನುವಾರು ಕಮೀಟಿಯ ಅಧ್ಯಕ್ಷರಾಗಿ ನಂದೆಪ್ಪ ನ್ಯಾಮಗೌಡ, ಉಪಾಧ್ಯಕ್ಷ ಬಸವರಾಜ ಗುಡ್ಡಮನಿ ಆಯ್ಕೆಗೊಂಡರು.
ನಗರಸಭೆ ಅಧ್ಯಕ್ಷ ಸಿದ್ದು ಮೀಸಿ, ತಹಶೀಲ್ದಾರ್ ಪ್ರಶಾಂತ ಚನಗೊಂಡ, ತಾಪಂ ಅಧಿಕಾರಿ ಶ್ರವಣ ನಾಯಕ, ಅರ್ಬನ್ ಬ್ಯಾಂಕ್ ನಿರ್ದೇಶಕ ಫಕೀರಸಾಬ ಬಾಗವಾನ, ಕೆ.ಕೆ.ತುಪ್ಪದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.