ತಡರಾತ್ರಿ ನೆರವಿಗೆ ಧಾವಿಸಿದ ತಹಶೀಲ್ದಾರ್ ಭೋಗಾವತಿ
Team Udayavani, Mar 23, 2022, 12:45 PM IST
ಸಿಂಧನೂರು: ತುರ್ತು ಚಿಕಿತ್ಸೆ ಅಗತ್ಯವಿದ್ದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಹಿತಿ ತಿಳಿದು ತಹಶೀಲ್ದಾರ್ ಮಂಜುನಾಥ ಭೋಗಾವತಿ ಆಸ್ಪತ್ರೆಗೆ ಧಾವಿಸಿ, ಸಿಬ್ಬಂದಿಯನ್ನು ಎಚ್ಚರಿಸಿದ್ದಾರೆ.
ಅಲಬನೂರು ಗ್ರಾಮದ ಮಂಜುಳಾ ಗಂಡ ರಾಜಶೇಖರ (24) ಹೆರಿಗೆಗೆಂದು ದಾಖಲಾಗಿದ್ದರು. ಸೋಮವಾರ ಮಧ್ಯಾಹ್ನ ಹೆರಿಗೆಯಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ತಡರಾತ್ರಿಯಲ್ಲಿ ರಕ್ತಸ್ರಾವವಾಗಿದ್ದು, ಈ ಸಂದರ್ಭದಲ್ಲಿ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ಕರೆಯಲು ಹೋದಾಗ ಯಾರೂ ಬಂದಿಲ್ಲ. ಆಸ್ಪತ್ರೆ ಸಿಬ್ಬಂದಿ ಕೊಠಡಿಗಳಲ್ಲಿ ಚಿಲಕ ಹಾಕಿಕೊಂಡು ನಿದ್ರೆಗೆ ಜಾರಿದ್ದಾರೆ. ಇದರಿಂದ ಗಾಬರಿಬಿದ್ದ ಮಹಿಳೆ ಸಂಬಂಧಿಕರು, ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ಸಮಸ್ಯೆ ಹೇಳಿಕೊಂಡಿದ್ದಾರೆ. ಕಾಲುವೆ ನೀರಿನ ಗಸ್ತಿಗೆ ಹೋಗಿದ್ದ ಮಂಜುನಾಥ ಬೋಗಾವತಿ, ನೇರವಾಗಿ ಆಸ್ಪತ್ರೆಗೆ ತೆರಳಿ, ಸಿಎಂಒ ಹನುಮಂತರೆಡ್ಡಿ ಅವರನ್ನು ಸಂಪರ್ಕಿಸಿದ್ದಾರೆ. ನಂತರದಲ್ಲಿ ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ.
ನಿರ್ಲಕ್ಷ್ಯದ ನಡೆಗೆ ಆಕ್ರೋಶ
ದಿನದ 24 ಗಂಟೆಯೂ ಕರ್ತವ್ಯಕ್ಕೆ ವೈದ್ಯರು ಸೇರಿದಂತೆ ಸಿಬ್ಬಂದಿ ನಿಯೋಜಿಸಲಾಗಿರುತ್ತದೆ. 10 ಜನ ವೈದ್ಯರಿದ್ದಾರೆ. ಆದರೂ, ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಡಿಎಚ್‌ಒ ರಾಮಕೃಷ್ಣ ಮಂಗಳವಾರ ಭೇಟಿ ನೀಡಿದ ವೇಳೆ ಘಟನೆ ಕುರಿತು ಮಾಹಿತಿ ಪಡೆದು, ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ತವ್ಯನಿರತ ವೈದ್ಯ ಡಾ| ವಿನಯ್, ತುರ್ತು ಚಿಕಿತ್ಸೆಗಾಗಿ ಬೇರೆ ರೋಗಿ ನೋಡುತ್ತಿದ್ದಾಗ ಸ್ವಲ್ಪ ಗಾಬರಿಯಾಗಿದ್ದಾರೆ. ಮಾಹಿತಿ ಗೊತ್ತಾದ ಮೇಲೆ ಸರಿಪಡಿಸಲಾಗಿದೆ. ಯಾವುದೇ ಸಮಸ್ಯೆ ಆಗಿಲ್ಲ ಎಂದು ಮುಖ್ಯ ವೈದ್ಯಾಧಿಕಾರಿ ಡಾ| ಹನುಮಂತರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.