ತಂಬಾಕು ನಿಯಂತ್ರಣಕೆ ಸಹಕಾರ ಅಗತ್ಯ


Team Udayavani, Mar 23, 2022, 1:36 PM IST

ತಂಬಾಕು ನಿಯಂತ್ರಣಕೆ ಸಹಕಾರ ಅಗತ್ಯ

ಮಂಡ್ಯ: ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧದ ನಾಮಫ‌ಲಕಗಳನ್ನು ಅಳವಡಿಸಿ ಹಾಗೂ ತಂಬಾಕು ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿ ಕಾರಿ ಡಾ.ಟಿ.ಎನ್‌.ಧನಂಜಯ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿ.ಸಿ .ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಡೆದ 2021-22ನೇ ಸಾಲಿನ ಜಿಲ್ಲಾ ಮಟ್ಟದ ನಾಲ್ಕನೇ ತ್ರೆçಮಾಸಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.

ತಂಬಾಕು ಮುಕ್ತ ಗ್ರಾಪಂಗೆ ಕ್ರಮವಹಿಸಿ: ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿ ತಂಬಾಕು ಮುಕ್ತವಾಗುವಂತೆ ಕ್ರಮ ವಹಿಸಿ, ತಂಬಾಕು ಸೇವನೆ ನಿಯಂತ್ರಣದಲ್ಲಿ ಆರಕ್ಷಕ ಇಲಾಖೆಯು ಎಲ್ಲ ಅಂಗಡಿಗಳ ಮುಂದೆ ಸೆಕ್ಷನ್‌-4 ಮತ್ತು 6ಎ ಪ್ರದರ್ಶಿಸಲು ಕಟ್ಟುನಿಟ್ಟಾಗಿ ಸೂಚಿಸಬೇಕು. ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮ ಮಟ್ಟದಲ್ಲಿ ಮತ್ತು ನಗರಾಭಿವೃದ್ಧಿ ಇಲಾಖೆಯು ನಗರ ಮಟ್ಟದಲ್ಲಿ ನಿರಂತರ ಅರಿವು ಮೂಡಿಸುತ್ತ ತಂಬಾಕು ನಿಯಂತ್ರಣದ ಬಗ್ಗೆ ಗ್ರಾಮ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಬೇಕು ಎಂದರು.

ತಂಬಾಕು ತ್ಯಜಿಸುವಂತೆ ಅರಿವು ಮೂಡಿಸಿ: ಶಿಕ್ಷಣ ಇಲಾಖೆಯು ಶಾಲಾ ಮಟ್ಟದಲ್ಲಿ ಸಮಿತಿ ರಚಿಸಿ, ಮಕ್ಕಳಿಗೆ ಅರಿವು ಮೂಡಿಸಬೇಕು. ವಿದ್ಯಾಸಂಸ್ಥೆಗಳ ಸುತ್ತಮುತ್ತ 100 ಮೀಟರ್‌ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಸೇವನೆ ಹಾಗೂ ಮಾರಾಟ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ವಹಿಸಬೇಕು. ಜಿಲ್ಲಾ ಸರ್ವೇಕ್ಷಣಾಧಿ ಕಾರಿಗಳ ತಂಡ ಹೊಟೇಲ್‌ ಹಾಗೂ ಇನ್ನಿತರ ಸಾರ್ವಜನಿಕರ ಸ್ಥಳಗಳಲ್ಲಿ ನಿರ್ದಿಷ್ಟ ಗುಂಪು ಚರ್ಚೆಗಳ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕು ತ್ಯಜಿಸುವಂತೆ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಮೇ 31ರೊಳಗೆ ತಂಬಾಕು ಮುಕ್ತ ಗ್ರಾಮ ಘೋಷಿಸಿ: ಜಿಲ್ಲೆಯ ನಗುವಿನಹಳ್ಳಿ, ಕೆಆರ್‌ಎಸ್‌, ಬೃಂದಾವನ, ಬಳೇಘಟ್ಟ, ಚನ್ನಪಿಳ್ಳೆಕೊಪ್ಪಲು, ಗಿಡದಬೊಪ್ಪನಹಳ್ಳಿ, ಹೆಮ್ಮನಹಳ್ಳಿ, ಚಿಕ್ಕರಸಿನಕೆರೆ, ಕೋಣನಹಳ್ಳಿ ಗ್ರಾಮಗಳನ್ನು ಮೇ 31ರೊಳಗೆ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಬೇಕು. ಮೇ 31ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲು ಸಲಹೆ ಸೂಚನೆ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್‌, ಐಎಂಎ ನಿರ್ದೇಶಕ ಡಾ.ಮರಿಗೌಡ, ವಕೀಲ ಗುರುಪ್ರಸಾದ್‌, ಸಹಾಯಕ ಸಂಚಾರ ವ್ಯವಸ್ಥಾಪಕಿ ಎಂ.ಕೆ.ಪುಷ್ಪಲತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.