ಸ್ಲಂ ಪ್ರದೇಶ ಗುಡಿಸಲು ಮುಕ್ತಗೊಳಿಸಿ
ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಕೆ
Team Udayavani, Mar 23, 2022, 4:17 PM IST
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಈಗಾಗಲೇ ಘೋಷಿತ ಸ್ಲಂ ಪ್ರದೇಶಗಳನ್ನು ಗುಡಿಸಲು ಮುಕ್ತಗೊಳಿಸಿ, ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸಮಿತಿ ಪ್ರಮುಖರು ಪೌರಾಯುಕ್ತರಿಗೆ ಮನವಿ ಸಲ್ಲಿಸಿ, ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ 48ಕ್ಕೂ ಹೆಚ್ಚು ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973 ಪ್ರಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸ್ಲಂಗಳು ಘೋಷಣೆಯಾಗಿ 30- 40 ವರ್ಷಗಳು ಕಳೆದರೂ ವಸತಿ, ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಾದ ಅಧಿಕಾರಿಗಳು ಕೊಳಚೆ ಪ್ರದೇಶಗಳನ್ನು ಎತ್ತಂಗಡಿಗೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ನಗರಸಭೆ ಪೌರಾಯುಕ್ತರು ಹಾಗೂ ಅಧಿಕಾರಿಗಳು ಅತಿಕ್ರಮಣ ನೆಪದಲ್ಲಿ ಗುಡಿಸಲುಗಳನ್ನು ತೆರುವುಗೊಳಿಸಲು ಮುಂದಾಗಿರುವುದನ್ನು ಕೊಡಲೇ ಕೈಬಿಡಬೇಕು. ಘೋಷಿತ ಕೋಳಗೇರಿ ಪ್ರದೇಶಗಳ ಜನರಿಗೆ ಪುನರ್ ವಸತಿ ಕಲ್ಪಿಸದೇ, ಯಾವುದೆ ಕಾರಣಕ್ಕೂ ತೆರುವುಗೊಳಿಸಬಾರದು ಎಂದು ಒತ್ತಾಯಿಸಿದರು.
ಜಿಲ್ಲಾ ಸ್ಲಂ ಸಮಿತಿ ಜಿಲ್ಲಾ ಅಧ್ಯಕ್ಷ ಇಮಿ¤ಯಾಜ್ ಆರ್. ಮಾನ್ವಿ, ಉಪಾಧ್ಯಕ್ಷ ರವಿಕುಮಾರ ಬೆಳಮಕರ, ರಾಚೋಟೇಶ್ವರ ನಗರದ ಸ್ಲಂ ಪ್ರದೇಶದ ಶಾಖೆ ಘಟಕದ ಅಧ್ಯಕ್ಷ ಇಬ್ರಾಹಿಂ ಮುಲ್ಲಾ, ಮಲೇಶಪ್ಪ ಕಲಾಲ, ಮುನ್ನಾ ಅಗಡಿ, ದಾವಲಸಾಬ ಈಟಿ, ಕಾಸೀಮ ಕವಲೂರ, ಶಂಕರಪ್ಪ ಹದ್ಲಿ, ಬಾಬುಸಾಬ ಗಡಾದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.