ತ್ರೀಫೇಸ್ ವಿದ್ಯುತ್ ನೀಡದಿದ್ದರೆ ಜೆಸ್ಕಾಂ ಕಚೇರಿ ಮುತ್ತಿಗೆ
ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಬಿ. ಗಂಗಾಧರ ಎಚ್ಚರಿಕೆ-ಮನವಿ
Team Udayavani, Mar 23, 2022, 5:10 PM IST
ಕಂಪ್ಲಿ: ವಿವಿಧ ಗ್ರಾಮಗಳ ರೈತರ ಜಮೀನಿಗೆ 6 ದಿನಗಳಲ್ಲಿ ಹಗಲೊತ್ತಿನಲ್ಲಿ 7 ತಾಸು ತ್ರೀಫೇಸ್ ವಿದ್ಯುತ್ ನೀಡದಿದ್ದರೆ ಪಟ್ಟಣದ ಜೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಬಿ. ಗಂಗಾಧರ ಅಧಿಕಾರಿಗಳನ್ನು ಎಚ್ಚರಿಸಿದರು.
ಅವರು ತಾಲೂಕಿನ ವಿವಿಧ ಗ್ರಾಮಗಳಾದ ರಾಮಸಾಗರ, ನಂ10 ಮುದ್ದಾಪುರ, ಕಣ್ಣವಿ ತಿಮ್ಮಲಾಪುರ, ದೇವಸಮುದ್ರ ಗ್ರಾಮಗಳ ರೈತರೊಂದಿಗೆ ಪಟ್ಟಣದ ಜೆಸ್ಕಾಂ ಕಚೇರಿಯ 33 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
ರಾಮಸಾಗರ, ನಂ10 ಮುದ್ದಾಪುರ, ಕಣ್ಣವಿ , ತಿಮ್ಮಲಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೆಸ್ಕಾಂ ನಿಗಮಂದಿಂದ ವಾರದ ಪಾಳಿಯಂತೆ ರಾತ್ರಿ ಹಾಗೂ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯನ್ನು ಮಾಡುತ್ತಿದ್ದು, ರಾತ್ರಿ ಸಮಯದಲ್ಲಿ ನೀರು ಹಾಯಿಸಲು ಹೋಗುವ ರೈತರು ಹಲವಾರು ತೊಂದರೆಗಳನ್ನು, ಕಾಡು ಪ್ರಾಣಿಗಳ ಕಾಟವನ್ನು ಅನುಭವಿಸಬೇಕಾಗಿದೆ. ಎಷ್ಟೋ ರೈತರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವಾರು ಸಲ ಜೆಸ್ಕಾಂ ಕಚೇರಿ ಅಧಿಕಾರಿಗಳೊಂದಿಗೆ ಚರ್ಚಿಸಿದರೂ ಕೇವಲ ಹಾರಿಕೆ ಉತ್ತರವನ್ನು ನೀಡುತ್ತಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದರು.
ಗ್ರಾಮೀಣ ವಿಭಾಗದ ಜೆಸ್ಕಾಂ ಕಚೇರಿ ಎಇ ಷಣ್ಮುಖಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ಪದಾಧಿ ಕಾರಿಗಳಾದ ಬಿ.ಬಲಕುಂದೆಪ್ಪ, ಕೆ. ಬಸವರಾಜ, ಬಿ. ವಾಹಬ್, ಜಿ. ರಾಮಾಂಜಿನಿ, ಕೆ. ಹರ್ಷಿತ್, ಎಸ್.ಬಸವರಾಜ್, ಪಂಪಾಪತಿ, ಮಹೇಶ್, ಜಿ.ನಾರಾಯಣಪ್ಪ, ಉಮೇಶಪ್ಪ, ಮಣಿಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.